ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತೇನೆ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮೊದಲ ಪ್ರತಿಕ್ರಿಯೆ

ಕಾರ್ಯಾಂಗ ಮತ್ತು ನ್ಯಾಯಾಂಗವು ಸೌಹಾರ್ದಯುತ ಸಂಬಂಧವನ್ನು ಹೊಂದಿದೆ. ಅದು ಸೌಹಾರ್ದಯುತ ಮತ್ತು ಸಾಂವಿಧಾನಿಕವಾಗಿ ಉಳಿಯುತ್ತದೆ. ಗಡಿಗಳು ಈಗಾಗಲೇ ಇವೆ ಎಂದಿದ್ದಾರೆ ಮೇಘವಾಲ್.

ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತೇನೆ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮೊದಲ ಪ್ರತಿಕ್ರಿಯೆ
ಅರ್ಜುನ್ ರಾಮ್ ಮೇಘವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:May 18, 2023 | 4:05 PM

ದೆಹಲಿ: ಕೇಂದ್ರ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು (Kiren Rijiju )ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಬಂದಿದ್ದಾರೆ. ಇದೀಗ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಮೇಘವಾಲ್, ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಪ್ರಧಾನಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಸಂವಿಧಾನವು (constitution) ನಮಗೆ ತಿಳಿಯಬೇಕಾದ ಎಲ್ಲವನ್ನೂ ಕಲಿಸುತ್ತದೆ. ಅದರ ಪ್ರಕಾರ ನಾನು ಕೆಲಸ ಮಾಡುತ್ತೇನೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು ರಿಜಿಜು ಅವರ ಹಠಾತ್ ವರ್ಗಾವಣೆಯು ನ್ಯಾಯಾಂಗ ವಿಷಯಗಳಲ್ಲಿನ ಅವರ ಇತ್ತೀಚಿಗಿನ ಹೇಳಿಕೆಯಿಂದ ಎಂದು ನೀವು ಭಾವಿಸಿದ್ದಾರಾ ಎಂಬ ಪ್ರಶ್ನೆಗೆ, ಮೇಘವಾಲ್ ಅವರು ಹಾಗೇನಲ್ಲ ಎಂದು ಹೇಳಿದರು.ಈಗ ಕಾನೂನು ಸಚಿವಾಲಯದ ಸ್ವತಂತ್ರ ಉಸ್ತುವಾರಿಯನ್ನು ಹೊಂದಿರುವ ಸಂಸದೀಯ ವ್ಯವಹಾರಗಳ ಉಸ್ತುವಾರಿ ರಾಜ್ಯ ಸಚಿವರು ಆಗಿರುವ ಮೇಘವಾಲ್, ಈ ವರ್ಷದ ಕೊನೆಯಲ್ಲಿ ಅವರ ತವರು ರಾಜ್ಯವಾದ ರಾಜಸ್ಥಾನದಲ್ಲಿ ನಡೆವ ಚುನಾವಣೆಗೆ ಅವರ ನೇಮಕಾತಿ ಸಂಬಂಧವಿದೆ ಎಂಬುದನ್ನು ನಿರಾಕರಿಸಿದರು.

ಕಾರ್ಯಾಂಗ ಮತ್ತು ನ್ಯಾಯಾಂಗವು ಸೌಹಾರ್ದಯುತ ಸಂಬಂಧವನ್ನು ಹೊಂದಿದೆ. ಅದು ಸೌಹಾರ್ದಯುತ ಮತ್ತು ಸಾಂವಿಧಾನಿಕವಾಗಿ ಉಳಿಯುತ್ತದೆ. ಗಡಿಗಳು ಈಗಾಗಲೇ ಇವೆ ಎಂದಿದ್ದಾರೆ ಮೇಘವಾಲ್.

ಸರ್ಕಾರದ ಅತ್ಯಂತ ಉನ್ನತ ಮಂತ್ರಿಗಳಲ್ಲಿ ಒಬ್ಬರು ಮತ್ತು ಟ್ರಬಲ್‌ಶೂಟರ್ ಎಂದು ಕರೆಯಲ್ಪಡುವ ರಿಜಿಜು ಅವರನ್ನು ಕ್ಯಾಬಿನೆಟ್ ಸ್ಥಾನಮಾನದೊಂದಿಗೆ ಕಾನೂನು ಸಚಿವಾಲಯಕ್ಕೆ ಬಡ್ತಿ ನೀಡಿದ ಒಂದು ವರ್ಷದ ನಂತರ, ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಿದ್ದಾರೆ.

ಇದನ್ನೂ ಓದಿ: Kiren Rijiju: ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ, ಕಾನೂನು ಸಚಿವ ಕಿರಣ್​ ರಿಜಿಜುಗೆ ಗೇಟ್​ಪಾಸ್

ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವಿನ ಜಟಾಪಟಿ ನಡುವೆಯೇ ಈ ಬದಲಾವಣೆ ಬಂದಿದೆ. ರಿಜಿಜು ಅವರ ಸಂಕ್ಷಿಪ್ತ ಅವಧಿಯು ವಿವಾದಾಸ್ಪದವಾಗಿತ್ತು.  ಏಕೆಂದರೆ ಸರ್ಕಾರ ಮತ್ತು ನ್ಯಾಯಾಂಗದ ನಡುವೆ ಆಗಾಗ್ಗೆ ಅವರು ನೀಡುತ್ತಿದ್ದ ಹೇಳಿಕೆ ಮತ್ತು ಸುಪ್ರೀಂಕೋರ್ಟ್ ಗೆ ನ್ಯಾಯಾಧೀಶರನ್ನು ನೇಮಿಸುವ ನ್ಯಾಯಾಧೀಶರ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ಅವರು ಟೀಕೆ ವ್ಯಕ್ತ ಪಡಿಸಿದ್ದರು.

ಗುರುವಾರ ಟ್ವೀಟ್ ಮಾಡಿದ ರಿಜಿಜು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಎಲ್ಲಾ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ರವಿಶಂಕರ್ ಪ್ರಸಾದ್ ಅವರ ನಿರ್ಗಮನದ ನಂತರ ಜುಲೈ 7, 2021 ರಂದು ಕಾನೂನು ಸಚಿವಾಲಯಕ್ಕೆ ನಿಯೋಜಿಸಲ್ಪಟ್ಟಾಗ ಅರುಣಾಚಲ ಪ್ರದೇಶದ ಮೂರು ಅವಧಿಯ ಲೋಕಸಭಾ ಸಂಸದರಾದ ರಿಜಿಜು ಅವರು ಕ್ರೀಡಾ ಸಚಿವರಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Thu, 18 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ