AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 3 ಸಾವು; ಮದ್ಯ ನಿಷೇಧವಿರುವ ಇಲ್ಲಿ ಈ ವರ್ಷ ನಕಲಿ ಮದ್ಯ ಸೇವಿಸಿ ಸಾವಿಗೀಡಾದವರು 70 ಮಂದಿ

Bihar ಮೂವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗೋಪಾಲ್‌ಗಂಜ್ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.  ಮುಜಾಫರ್‌ಪುರ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು ಮತ್ತು ಹಲವರು ಅಸ್ವಸ್ಥರಾದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ ಬಂದಿದೆ.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 3 ಸಾವು; ಮದ್ಯ ನಿಷೇಧವಿರುವ ಇಲ್ಲಿ ಈ ವರ್ಷ ನಕಲಿ ಮದ್ಯ ಸೇವಿಸಿ ಸಾವಿಗೀಡಾದವರು 70 ಮಂದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 03, 2021 | 12:45 PM

Share

ಪಟನಾ: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಕಲಿ ಮದ್ಯ (spurious liquor) ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಗೋಪಾಲ್‌ಗಂಜ್‌ನ ಕುಶಾರ್ ಗ್ರಾಮವನ್ನು ತಲುಪಿದ್ದಾರೆ ಮತ್ತು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಲೈವ್‌ಹಿಂದುಸ್ತಾನ್ ವರದಿ ಮಾಡಿದೆ. ನಕಲಿ ಮದ್ಯ ಸೇವಿಸಿ ಇತರ ಮೂವರು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ಅವರನ್ನು ಉಲ್ಲೇಖಿಸಿ ಲೈವ್‌ಹಿಂದುಸ್ತಾನ್ ವರದಿ ಮಾಡಿದೆ. ಅವರಿಗೆ ಚಂಪಾರಣ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.  ಮೂವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗೋಪಾಲ್‌ಗಂಜ್ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.  ಮುಜಾಫರ್‌ಪುರ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು ಮತ್ತು ಹಲವರು ಅಸ್ವಸ್ಥರಾದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ ಬಂದಿದೆ. ಕಳೆದ 5 ವರ್ಷದಿಂದ ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿರುವ ಈ ಪ್ರದೇಶದಲ್ಲಿ ಇಂಥಾ ಘಟನೆಗಳು  ಅಧಿಕಾರಿಗಳಿಗೆ ಆಘಾತ ತಂದಿದೆ.

ಅಕ್ಟೋಬರ್ 28 ರಂದು ಸರಯ್ಯ ಪೊಲೀಸ್ ಠಾಣೆ ವ್ಯಾಪ್ತಿಯ ರುಪೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪಂಚಾಯತ್ ಸಮಿತಿಯ ಸದಸ್ಯ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ಈ ವರ್ಷದ ಜನವರಿಯಿಂದ ಅಕ್ಟೋಬರ್ ವರೆಗೆ, ನವಾಡ, ಪಶ್ಚಿಮ ಚಂಪಾರಣ್, ಮುಜಾಫರ್‌ಪುರ, ಸಿವಾನ್ ಮತ್ತು ರೋಹ್ತಾಸ್ ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ 70 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ದೃಷ್ಟಿ ಕಳೆದುಕೊಂಡಿದ್ದಾರೆ.

ಸೋಮವಾರ ತಮ್ಮ ‘ಜನತಾ ಕಾ ದರ್ಬಾರ್’ ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಮದ್ಯವು “ಆರೋಗ್ಯ ಮತ್ತು ಸಮಾಜಕ್ಕೆ ಹಾನಿಕಾರಕ” ಇಂತಹ ಘಟನೆಗಳನ್ನು ತಡೆಯಲು ಸರ್ಕಾರದೊಂದಿಗೆ ಸಹಕರಿಸುವಂತೆ ಜನರಿಗೆ ಮನವಿ ಮಾಡಿದರು. “ರಾಜ್ಯದಲ್ಲಿ ಬಹುಪಾಲು ಜನರು ನಿಷೇಧದ ಪರವಾಗಿದ್ದಾರೆ ಎಂದು ನನಗೆ ತಿಳಿದಿದೆ. ಬೆರಳೆಣಿಕೆಯಷ್ಟು ನಿವಾಸಿಗಳು ಅದನ್ನು ಉಲ್ಲಂಘಿಸುತ್ತಾರೆ” ಎಂದು ಅವರು ಹೇಳಿದರು.

ನಿತೀಶ್ ಕುಮಾರ್ ಸರ್ಕಾರವು ಏಪ್ರಿಲ್ 5, 2016 ರಂದು ರಾಜ್ಯದಲ್ಲಿ ಮದ್ಯದ ತಯಾರಿಕೆ, ವ್ಯಾಪಾರ, ಸಂಗ್ರಹಣೆ, ಸಾಗಣೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತ್ತು. ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರವು ತನ್ನ ನೀತಿಯನ್ನು ಸ್ವಲ್ಪಮಟ್ಟಿಗೆ ತಿದ್ದಿದ್ದು ಮದ್ಯ ಸಾಗಣೆ ವಿಷಯದಲ್ಲಿ ಸೀಲ್ ಮಾಡಬೇಕಾದ ಪ್ರದೇಶವನ್ನು ಕಿರಿದಾಗಿಸಿತು.

ಬಿಹಾರ ನಿಷೇಧ ಮತ್ತು ಅಬಕಾರಿ ನಿಯಮಗಳು, 2021 ರ ಮಾರ್ಪಾಡುಗಳ ಪ್ರಕಾರ, ಸಂಪೂರ್ಣ ಆವರಣವನ್ನು ಸೀಲಿಂಗ್ ಮಾಡುವ ಬದಲು, ವಸೂಲಿ ಮಾಡಿದ ಭಾಗವನ್ನು ಮಾತ್ರ ಸೀಲ್ ಮಾಡಲಾಗುತ್ತದೆ.  ಆದಾಗ್ಯೂ, ಯಾವುದೇ ಆವರಣದಿಂದ ಮದ್ಯದ ತಯಾರಿಕೆ ಅಥವಾ ಬೃಹತ್ ಸಂಗ್ರಹಣೆ ಅಥವಾ ಅಲ್ಲಿಂದ ಮಾರಾಟ/ಖರೀದಿ ಮತ್ತು ಸರಬರಾಜು ಪತ್ತೆಯಾದರೆ ಈ ಸಡಿಲಿಕೆ ಅನ್ವಯಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಬಿಹಾರ ನಿಷೇಧ ಮತ್ತು ಅಬಕಾರಿ ಕಾಯಿದೆ, 2016 ರ ನಿಬಂಧನೆಗಳ ಪ್ರಕಾರ ಇಡೀ ಆವರಣವನ್ನು ಸೀಲ್ ಮಾಡಲಾಗುತ್ತದೆ.

ಇದನ್ನೂ ಓದಿ: Punjab Politics ಅಮರಿಂದರ್ ಸಿಂಗ್ ವಿರುದ್ಧ ಸಿಧು ಆಪ್ತರಾದ ಪರಗಟ್ ಸಿಂಗ್, ವಾರಿಂಗ್ ಟೀಕೆ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ