ಬೈಕ್ ಸಾಗಿಸುತ್ತಿದ್ದ ಕಂಟೇನರ್ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ
ಚಿತ್ತೂರಿನಿಂದ ಕಕಿನದಗೆ ಕಂಟೇನರ್ನಲ್ಲಿ ಹೀರೋ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ ಬಳಿ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.
ಹೈದರಾಬಾದ್: ದ್ವಿಚಕ್ರ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್ಗೆ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಆಂಧ್ರಪ್ರದೇಶದ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.
ಚಿತ್ತೂರಿನಿಂದ ಕಕಿನದಗೆ ಕಂಟೇನರ್ನಲ್ಲಿ ಹೀರೋ ಹೊಂಡ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಇಂದ್ರಪಾಲೆಂ ಬಳಿ ವಾಹನಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗಿದೆ.
ಕಂಟೇನರ್ನಲ್ಲಿ ಸುಮಾರು 40ಕ್ಕೂ ಹೆಚ್ಚು ವಾಹನಗಳಿದ್ದವು ಎಂದು ಮೂಲಗಳಿಂದ ತಿಳಿಸು ಬಂದಿದೆ. ಈ ಪೈಕಿ ಅನೇಕ ದ್ವಿಚಕ್ರ ವಾಹನಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿದ್ದು ಕೆಲವು ವಾಹನಗಳು ಅರ್ಧಂಬರ್ಧ ಸುಟ್ಟು ಹೋಗಿವೆ. ಸದ್ಯ ಚಾಲಕನಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.