ಸ್ನೇಹಿತನ ಮಗಳ ಮೇಲೆ ನಿರಂತರ ಅತ್ಯಾಚಾರ ಪ್ರಕರಣ: ಆರೋಪಿಗೆ ಪ್ಯಾನಿಕ್ ಅಟ್ಯಾಕ್, ಆಸ್ಪತ್ರೆಗೆ ದಾಖಲು
ಸ್ನೇಹಿತನ ಮಗಳ ಮೇಲೆ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿತ್ತು. ಇಂದು ಆ ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಿ ಆದೇಶವನ್ನು ಸರ್ಕಾರ ನೀಡತ್ತು. ಇದೀಗ ಈ ಆರೋಪಿಗೆ ಪ್ಯಾನಿಕ್ ಅಟ್ಯಾಕ್ ಆಗಿದ್ದ ಆಸ್ಪತ್ರೆ ದಾಖಲು ಮಾಡಿದ್ದಾರೆ.
ದೆಹಲಿ, ಆ.21: ದೆಹಲಿ (delhi) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಬಾಲಕಿಯೇ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ದೂರಿನ ಆಧಾರ ಮೇಲೆ ಭಾರತೀಯ ದಂಡ ಸಂಹಿತೆಯ (IPC) 13 ಸೆಕ್ಷನ್‌ಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಲು ಕಠಿಣ ಪೋಕ್ಸೊ ಕಾಯ್ದೆಯ (POCSO Act) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಇಂದು ಆತನನ್ನು ಅಧಿಕಾರದಿಂದ ದೆಹಲಿ ಸರ್ಕಾರ ಅಮಾನತುಗೊಳಿಸಲಾಗಿತ್ತು. ಇದೀಗ ಅತ್ಯಾಚಾರ ಎಸಗಿದ ಅಧಿಕಾರಿಗೆ ಪ್ಯಾನಿಕ್ ಅಟ್ಯಾಕ್ ಆಗಿದ್ದು, ಆತನನ್ನು ದೆಹಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ಹೇಳಿದೆ.
ಈ ಹುಡುಗಿ ಪಿಯುಸಿ ಓದುತ್ತಿದ್ದಾಗ, ಈಕೆಯ ತಂದೆ 2020ರಲ್ಲಿ ಸಾವನ್ನಪ್ಪಿದ್ದಾರೆ. ಇದರ ನಂತರ ಈ ಅಧಿಕಾರಿ ಮಾನವೀಯತೆ ತೋರಿಸಿ ಆಕೆಗೆ ಆಸರೆಯಾಗಿದ್ದಾನೆ. ಆದರೆ ಆಕೆಯನ್ನು ಮನೆಗೆ ಕರೆದುಕೊಂಡು ಬಂದು ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಕೃತ್ಯದಲ್ಲಿ ಆಕೆಯ ತಾಯಿ ಕೂಡ ಭಾಗಿಯಾಗಿದ್ದು, ಸ್ವಂತ ಮಗಳಿಗೆ ಗರ್ಭಪಾತ ಮಾತ್ರೆ ನೀಡಿದ್ದಾರೆ. ಈ ಹಿಂಸೆಯನ್ನು ತಡೆಯಲಾಗದೇ ಬಾಲಕಿ ಮಾನಸಿಕವಾಗಿ ಕುಗ್ಗಿದ್ದಾಳೆ, ಇದರಿಂದ ಭಯಗೊಂಡು ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿ: ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿಯ ಅಮಾನತು
ಇನ್ನು ಈ ಹುಡುಗಿ ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಮಯದಲ್ಲಿ ವೈದ್ಯರು ಆಕೆಯ ಮೇಲೆ ನಿರಂತರ ಅತ್ಯಾಚಾರವಾಗಿದ್ದು, ಆಕೆ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ಹೇಳಿದ್ದಾರೆ. ಇನ್ನು ಬಾಲಕಿ ನೀಡಿದ ದೂರಿ ಆಧಾರದ ಮೇಲೆ ಮತ್ತು ವೈದ್ಯರು ನೀಡಿದ ವರದಿ ಮೇಲೆ ಈ ಅಧಿಕಾರಿಯನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.
ಇಂದು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಈ ಘಟನೆಯನ್ನು ಹೇಯ ಕೃತ್ಯ ಎಂದು ಹೇಳಿದ್ದು, ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಸಲು ಆದೇಶ ನೀಡಲಾಗಿದೆ. ಆ ಅಧಿಕಾರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. ಇನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಕ್ಷಣ ಆಕೆಯ ತಾಯಿಯನ್ನು ಕೂಡ ಬಂಧಿಸಿ ಶಿಕ್ಷೆ ನೀಡಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ