Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್

ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.

Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 09, 2023 | 2:28 PM

ದೆಹಲಿ: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 9 ವರ್ಷಗಳಲ್ಲಿ ಡಿಜಿಟಲೀಕರಣದ ವಿಷಯದಲ್ಲಿ ಭಾರತ ಎಷ್ಟು ದೂರ ಸಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ವಿಷತ್ವ ಮತ್ತು ಅಪರಾಧ ವಿಚಾರಗಳು ಗಣನೀಯವಾಗಿ ಹೆಚ್ಚಿದೆ. ಡಿಜಿಟಲ್ ನಾಗರಿಕರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. 85 ಕೋಟಿ ಭಾರತೀಯರು ಸಾಮಾಜಿಕ ಜಾಲತಾಣವನ್ನು ಬಳಸುತ್ತಾರೆ, ಇದು 2025 ರ ವೇಳೆಗೆ 120 ಕೋಟಿಗಳಷ್ಟು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಡಾಕ್ಸಿಂಗ್‌ನಂತಹ ಅಪರಾಧಗಳು (ದುರುದ್ದೇಶಪೂರಿತ ಉದ್ದೇಶದಿಂದ ಮತ್ತು ಅವರ ಒಪ್ಪಿಗೆಯಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಮತ್ತು ವ್ಯಕ್ತಿಗಳ ವಿವರಗಳನ್ನು ಪೋಸ್ಟ್ ಮಾಡುವುದು) ಹೆಚ್ಚುತ್ತಿದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಈ ಕುರಿತು ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಚಿವರು ಹೇಳಿದರು. ಅದಕ್ಕೆ ಬೇಕಾದ ಕಾನೂನು ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಹೇಳಿದೆ.

ಇದನ್ನೂ ಓದಿ: Bill Gates: ಭಾರತದ ಪ್ರವಾಸದ ಬಗ್ಗೆ ಮೆಚ್ಚುಗೆಯ ಮಹಾಪೂರವನ್ನೇ ಸುರಿಸಿದ ವಿಶ್ವದ ಶ್ರೀಮಂತ ವ್ಯಕ್ತಿ ಬಿಲ್​ಗೇಟ್ಸ್​

ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಚಂದ್ರಶೇಖರ್, ಡಿಜಿಟಲ್ ಇಂಡಿಯಾ ಬಿಲ್ ಕುರಿತು ಮಧ್ಯಸ್ಥಗಾರರ ಜೊತೆ ಸಮಾಲೋಚನೆ ಈ ತಿಂಗಳು ಪ್ರಾರಂಭವಾಗಲಿದೆ ಎಂದು ಹೇಳಿದರು. ಹೊಸ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

Published On - 2:21 pm, Fri, 9 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್