AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲೇ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ

ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್​ ಖಾನ್​ರನ್ನು ಜೈಲಿನಲ್ಲೇ ಸಹ ಕೈದಿಗಳು ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಕೊಲೆ ಮಾಡಿದ್ದಾರೆ.

ಜೈಲಿನಲ್ಲೇ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ
ನಯನಾ ರಾಜೀವ್
|

Updated on:Jun 03, 2024 | 9:21 AM

Share

1993ರ ಮುಂಬೈ ಬಾಂಬ್ ಸ್ಫೋಟ(Bomb Blast)ದ ಆರೋಪಿ ಮೊಹಮ್ಮದ್ ಅಲಿ ಖಾನ್​ರನ್ನು ಕೊಲ್ಲಾಪುರ ಜೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮ್ಮದ್ ಅಲಿ ಖಾನ್ ಅವರ ಶಿರಚ್ಛೇದ ಮಾಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಇರಿಸಲಾಗಿದ್ದು, ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು ಮೊಹಮ್ಮದ್ ಅಲಿ ಖಾನ್ ಎಂಬುವವರ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು.

ಕೊಲೆ ಮಾಡಿದ ಆರೋಪಿಗಳ ಹೆಸರು ಪ್ರತೀಕ್ ಪಾಟೀಲ್, ದೀಪಕ್ ಖೋಟ್, ಸಂದೀಪ್ ಚವ್ಹಾಣ್, ರಿತುರಾಜ್ ಇನಾಮದಾರ್ ಮತ್ತು ಸೌರಭ್ ಸಿದ್ಧ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ

ಜೈಲು ಇಲಾಖೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಸ್ವಾತಿ ಸಾಠೆ ಪ್ರಕಾರ, ಮೃತ ಮೊಹಮ್ಮದ್ ಅಲಿ ಖಾನ್ ಸೇರಿದಂತೆ ಈ ಎಲ್ಲಾ ಆರೋಪಿಗಳು ಒಂದೇ ಬ್ಯಾರಕ್‌ನಲ್ಲಿ ಇದ್ದರು. ಇದರಿಂದಾಗಿ ಅವರ ನಡುವೆ ಏನಾದರೂ ಜಗಳವಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೊಲ್ಲಾಪುರ ಜೈಲಿನಲ್ಲಿರುವ ಮುಂಬೈ ಸ್ಫೋಟದ ಇತರ ಆರೋಪಿಗಳ ಭದ್ರತೆಯನ್ನು ಜೈಲು ಇಲಾಖೆ ಹೆಚ್ಚಿಸಿದೆ. ಜೈಲಿನೊಳಗೆ ನಡೆದ ಈ ಹತ್ಯೆಗೆ ಪ್ರಮುಖ ಕಾರಣ ಏನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮುನ್ನಾ ಅಲಿಯಾಸ್ ಮನೋಜ್ ಕುಮಾರ್ ಭನ್ವರ್‌ಲಾಲ್ ಗುಪ್ತಾ ಕೋಲ್ಹಾಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಐವರು ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 12, 1993 ರಂದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Mon, 3 June 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ