ಒಡಿಶಾ ಆರೋಗ್ಯ ಸಚಿವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಎಎಸ್ಐ ಗೋಪಾಲಕೃಷ್ಣ ದಾಸ್ಗೆ ಮೊದಲೇ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಾನಸಿಕ ಆರೋಗ್ಯ ಸರಿ ಇಲ್ಲ ಎಂಬುದು ತಿಳಿದಿದ್ದರೂ ಕೂಡ ಅವರಿಗೆ ಹೇಗೆ ರಿವಾಲ್ವರ್ ನೀಡಲಾಗಿತ್ತು ಹಾಗೂ ಬ್ರಜರಾಜನಗರದ ಪೊಲೀಸ್ ಪೋಸ್ಟ್ನ ಉಸ್ತುವಾರಿಯಾಗಿ ನೇಮಿಸಲಾಯಿತು ಎಂಬುದು ಕಾಡುತ್ತಿರುವ ಪ್ರಶ್ನೆಯಾಗಿದೆ.
ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ನಿಧನರಾಗಿದ್ದಾರೆ.
ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಪೊಲೀಸ್ ಅಧಿಕಾರಿ ಎಎಸ್ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೇ ಸಚಿವರು ಕೊನೆಯುಸಿರೆಳೆದಿದ್ದಾರೆ.
ನಬ ಕಿಶೋರ್, ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿದ್ದರು. ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿತ್ತು. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿದ್ದರು.
ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು. ಆರೋಪಿ ಗೋಪಾಲ್ ಚಂದ್ರ ದಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಎಂಕೆಸಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಬೆರ್ಹಾಂಪುರ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ್ ತ್ರಿಪಾಠಿ ಅವರು ದಾಸ್ ಬೈಪೋಲಾರ್ ಡಿಸಾರ್ಡರ್‌ನಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ: Nab Kishore Das: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಸಚಿವ ಕಿಶೋರ್ ದಾಸ್ ನಿಧನ
ದಾಸ್ ಸುಮಾರು ಎಂಟರಿಂದ ಹತ್ತು ವರ್ಷಗಳ ಹಿಂದೆ ನನ್ನ ಕ್ಲಿನಿಕ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದರು. ಅವರು ತುಂಬಾ ಸುಲಭವಾಗಿ ಕೋಪಗೊಳ್ಳುತ್ತಿದ್ದರು ಮತ್ತು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಡಾ ತ್ರಿಪಾಠಿ ಹೇಳಿದರು.
ಅವರು ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ನನಗೆ ಖಚಿತವಿಲ್ಲ. ನಿಯಮಿತವಾಗಿ ಔಷಧಿ ತೆಗೆದುಕೊಳ್ಳದಿದ್ದರೆ, ರೋಗವು ಮತ್ತೆ ಕಾಣಿಸಿಕೊಳ್ಳುತ್ತದೆ. ಅವರು ನನ್ನನ್ನು ಭೇಟಿಯಾಗಿ ಒಂದು ವರ್ಷ ಕಳೆದಿದೆ ಎಂದು ವೈದ್ಯರು ಹೇಳಿದರು.
ಬೈಪೋಲಾರ್ ಡಿಸಾರ್ಡರ್ ಎನ್ನುವುದು ಮಾನಸಿಕ ಆರೋಗ್ಯದ ಸ್ಥಿತಿಯಾಗಿದ್ದು, ತಜ್ಞರ ಪ್ರಕಾರ ಹೈಪರ್-ಮೇನಿಯಾದಿಂದ ಖಿನ್ನತೆಯವರೆಗಿನ ತೀವ್ರ ಮನಸ್ಥಿತಿಯನ್ನು ಉಂಟುಮಾಡುತ್ತದೆ. ಆದರೆ, ಆಪ್ತಸಮಾಲೋಚನೆ ಸೇರಿದಂತೆ ಚಿಕಿತ್ಸೆಯಿಂದ ರೋಗವನ್ನು ನಿಯಂತ್ರಿಸಬಹುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:37 am, Mon, 30 January 23