Odisha Train Accident: ಒಡಿಶಾ ರೈಲು ದುರಂತ; ಮೃತರ ಸಂಖ್ಯೆ 288ಕ್ಕೆ, ಬುಧವಾರದಿಂದ ಸಂಚಾರ ಆರಂಭಿಸಲಿದೆ ಕೋರಮಂಡಲ್ ಎಕ್ಸ್‌ಪ್ರೆಸ್

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಬುಧವಾರ ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ.

Odisha Train Accident: ಒಡಿಶಾ ರೈಲು ದುರಂತ; ಮೃತರ ಸಂಖ್ಯೆ 288ಕ್ಕೆ, ಬುಧವಾರದಿಂದ ಸಂಚಾರ ಆರಂಭಿಸಲಿದೆ ಕೋರಮಂಡಲ್ ಎಕ್ಸ್‌ಪ್ರೆಸ್
ಸಾಂದರ್ಭಿಕ ಚಿತ್ರ

Updated on: Jun 06, 2023 | 10:35 PM

ಭುವನೇಶ್ವರ: ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದೆ ಎಂದು ಒಡಿಶಾ ಸರ್ಕಾರ ಮಂಗಳವಾರ ತಿಳಿಸಿದೆ. ಹಲವಾರು ಮೃತದೇಹಗಳನ್ನು ಪರಿಶೀಲಿಸಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದ ನಂತರ ಇದೀಗ ಸಾವಿನ ಸಂಖ್ಯೆ ಹೆಚ್ಚಿರುವುದು ತಿಳಿದುಬಂದಿದೆ. ಹೌರಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express), ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದ 288 ಮಂದಿಯ ಪೈಕಿ 205 ಮೃತದೇಹಗಳನ್ನು ಇದುವರೆಗೆ ಗುರುತಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ.

83 ಅಪರಿಚಿತ ಶವಗಳನ್ನು ಗುರುತಿಸಲು ಬಾಕಿ ಇದ್ದು, ಭುವನೇಶ್ವರದ ಏಮ್ಸ್ ಮತ್ತು ಇತರ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಸಹಾಯವಾಣಿ ಸಂಖ್ಯೆಗಳಲ್ಲಿ ನಾವು ಅನೇಕ ಪ್ರಶ್ನೆಗಳನ್ನು ಸ್ವೀಕರಿಸಿದ್ದೇವೆ. ಎಲ್ಲಾ ದೇಹಗಳನ್ನು ಗುರುತಿಸಲಾಗುವುದು. ಈ ಬಗ್ಗೆ ನಾವು ಆಶಾವಾದಿಗಳಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಬುಧವಾರದಿಂದ ಕೋರಮಂಡಲ್ ಎಕ್ಸ್​ಪ್ರೆಸ್ ಸಂಚಾರ ಪುನರಾರಂಭ

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಬುಧವಾರ ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ.

ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿತ್ಯ ಚೌಧರಿ ಪ್ರಕಾರ, ರೈಲು ಹಿಂದಿನ ಮಾರ್ಗದಲ್ಲೇ ಸಂಚರಿಸಲಿದೆ ಎಂದು ಅವರು ಹೇಳಿದ್ದರೆ.

ಇದನ್ನೂ ಓದಿ: Odisha Train Accident: ಒಡಿಶಾ ಭೀಕರ ರೈಲು ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳು ಹೇಳೋದೇನು?

ಅಪಘಾತಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ 39 ಮೃತರ ಕುಟುಂಬಗಳಿಗೆ ಪರಿಹಾರ ಪಾವತಿಗಾಗಿ 1.95 ಕೋಟಿ ರೂ. ಘೋಷಿಸಿದ್ದಾರೆ.

ಈ ಮಧ್ಯೆ, ರೈಲು ದುರಂತದ ಸ್ಥಳಕ್ಕೆ ಭೇಟಿ ನೀಡಿರುವ ಸಿಬಿಐ, ಈಗಾಗಲೇ ತನಿಖಾ ಪ್ರಕ್ರಿಯೆ ಆರಂಭಿಸಿದೆ.

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us