ರಾಜ್ಯದಲ್ಲಿ ಇಂದು 324 ಜನರಲ್ಲಿ ಕೊರೊನಾ ಕೇಸ್ ದೃಢ
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 324 ಜನರಿಗೆ ಕೊರೊನಾ ದೃಢವಾಗಿದೆ.
ಬೆಂಗಳೂರು: ದೇಶದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಹಂಚಿಕೆ ಆರಂಭವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 324 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,34,576 ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ ಮಿತಿ ಮೀರಿ ಕಡಿಮೆ ಆಗಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,190 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,15,382 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 6,985 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.
ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು