ರಾಜ್ಯದಲ್ಲಿ ಇಂದು 324 ಜನರಲ್ಲಿ ಕೊರೊನಾ ಕೇಸ್​ ದೃಢ

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 324 ಜನರಿಗೆ ಕೊರೊನಾ ದೃಢವಾಗಿದೆ.

ರಾಜ್ಯದಲ್ಲಿ ಇಂದು 324 ಜನರಲ್ಲಿ ಕೊರೊನಾ ಕೇಸ್​ ದೃಢ
ಪ್ರಾತಿನಿಧಿಕ ಚಿತ್ರ

Updated on: Jan 22, 2021 | 8:52 PM

ಬೆಂಗಳೂರು: ದೇಶದಲ್ಲಿ ಜನವರಿ 16ರಿಂದ  ಕೊರೊನಾ ಲಸಿಕೆ ಹಂಚಿಕೆ ಆರಂಭವಾಗಿದೆ.  ಈ ಮಧ್ಯೆ  ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 324 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,34,576 ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ  ಮಿತಿ ಮೀರಿ ಕಡಿಮೆ ಆಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,190 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,15,382 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 6,985 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us