ದೇಶದಲ್ಲಿ ಈವರೆಗೆ 2.60 ಕೋಟಿ​ಗೂ ಅಧಿಕ ಕೊರೊನಾ ಲಸಿಕೆ ವಿತರಣೆ; ಪಂಜಾಬ್​ನಲ್ಲಿ ಮತ್ತೆ ಶುರುವಾಯ್ತು ನೈಟ್​ ಕರ್ಫ್ಯೂ

ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 2,60,73,517 ಕೊವಿಡ್ ಲಸಿಕೆ ಹಂಚಿಕೆಯಾಗಿದೆ. ಕಳೆದ 55 ದಿನಗಳಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ 2.60ಕೋಟಿಗೂ ಅಧಿಕ ಡೋಸ್​ ಲಸಿಕೆ ಹಂಚಿಕೆಯಾಗಿರುವುದು ಈ ಮೂಲಕ ತಿಳಿದುಬಂದಿದೆ.

ದೇಶದಲ್ಲಿ ಈವರೆಗೆ 2.60 ಕೋಟಿ​ಗೂ ಅಧಿಕ ಕೊರೊನಾ ಲಸಿಕೆ ವಿತರಣೆ; ಪಂಜಾಬ್​ನಲ್ಲಿ ಮತ್ತೆ ಶುರುವಾಯ್ತು ನೈಟ್​ ಕರ್ಫ್ಯೂ
ಸಾಂದರ್ಭಿಕ ಚಿತ್ರ
Follow us
Skanda
| Updated By: ಆಯೇಷಾ ಬಾನು

Updated on:Mar 12, 2021 | 6:49 AM

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳಾಗುತ್ತಿದ್ದು, ಲಸಿಕೆ ನೀಡುವ ಕಾರ್ಯ ಭರದಿಂದ ಸಾಗಿದೆ. ಇತ್ತೀಚೆಗಷ್ಟೇ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊರೊನಾ ಲಸಿಕೆ ಪಡೆದು ಜನರಲ್ಲಿ ಧೈರ್ಯ ತುಂಬಿದ್ದರು. ಇದೀಗ ಅವರ ತಾಯಿಯೂ ಲಸಿಕೆ ಪಡೆದಿದ್ದು, ಅರ್ಹ ಜನರೆಲ್ಲರೂ ಲಸಿಕೆ ಸ್ವೀಕರಿಸುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಇದೀಗ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಲ್ಲಿಯ ತನಕ ಎಷ್ಟು ಲಸಿಕೆ ವಿತರಣೆ ಆಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 2,60,73,517 ಕೊವಿಡ್ ಲಸಿಕೆ ಹಂಚಿಕೆಯಾಗಿದೆ. ಕಳೆದ 55 ದಿನಗಳಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ 2.60ಕೋಟಿಗೂ ಅಧಿಕ ಡೋಸ್​ ಲಸಿಕೆ ಹಂಚಿಕೆಯಾಗಿರುವುದು ಈ ಮೂಲಕ ತಿಳಿದುಬಂದಿದೆ. ಸದ್ಯ ಕೊವಿನ್​ ಆ್ಯಪ್​ನಲ್ಲಿ ಕೆಲ ಬದಲಾವಣೆಗಳನ್ನೂ ತಂದಿದ್ದು ಹಿರಿಯ ನಾಗರೀಕರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸಿರುವುದರಿಂದ ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆ ವೇಗ ಪಡೆಯುವ ಸಾಧ್ಯತೆ ಇದೆ.

ಪಂಜಾಬ್​ನ ಹಲವೆಡೆ ನೈಟ್​ ಕರ್ಫ್ಯೂ ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಸಾಕಷ್ಟು ಇಳಿಮುಖವಾಗಿದೆಯಾದರೂ ಕೆಲವು ರಾಜ್ಯಗಳಲ್ಲಿ ಇದ್ದಕ್ಕಿದ್ದಂತೆ ಸೋಂಕು ಮತ್ತೆ ಹರಡಲು ಪ್ರಾರಂಭಿಸಿದೆ. ಪಂಜಾಬ್​ನ ಹಲವೆಡೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದ್ದು, ಪಟಿಯಾಲ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಚ್ 12ನೇ ತಾರೀಖಿನಿಂದ ರಾತ್ರಿ 11ರಿಂದ ಮುಂಜಾನೆ 5ರವರೆಗೆ ನೈಟ್​ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಪಟಿಯಾಲ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೊವಿಡ್​ ಲಸಿಕೆಗೂ ತಟ್ಟಿದ ಚುನಾವಣಾ ಕಾವು ಇನ್ನೊಂದೆಡೆ. ದೇಶದಲ್ಲಿ ಚುನಾವಣೆ ಕಾವು ಏರುತ್ತಿರುವುದರಿಂದ ವಿಧಾನಸಭೆ ಚುನಾವಣೆಗೆ ಸಿದ್ಧವಾಗಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ (vaccine certificates ) ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಆರೋಗ್ಯ ಸಚಿವಾಲಯ ಅಳಿಸಲಿದೆ. ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊವನ್ನು ಅಳಿಸಬೇಕು ಎಂದು ಚುನಾವಣಾ ಆಯೋಗ ಆದೇಶ ನೀಡಿದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಆರೋಗ್ಯ ಸಚಿವಾಲಯ ಮುಂದಾಗಿದೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ಕೊವಿಡ್ ಲಸಿಕೆ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ ಪಡೆದವರಿಗೆ ಒಂದು ಡಿಜಿಟಲ್​ ಸರ್ಟಿಫಿಕೇಟ್​ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ಪಡೆಯುತ್ತಿದ್ದಾರೆ ಎಂಬುದು ವಿಪಕ್ಷಗಳ ಆರೋಪ.

ಇದನ್ನೂ ಓದಿ: ಭಾರತದ ಫುಟ್ಬಾಲ್ ಮಾಂತ್ರಿಕ ಸುನಿಲ್ ಛೆತ್ರಿಗೆ ಕೊರೊನಾ ವೈರಸ್ ಪಾಸಿಟಿವ್

ಪಕ್ಕದ ಮಹಾರಾಷ್ಟ್ರದ ಹಲವೆಡೆ ಲಾಕ್​ಡೌನ್​, ಕೊರೊನಾ ಕಾಟ ನಮಗೂ ಕಾಡಬಹುದು

Published On - 6:48 am, Fri, 12 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್