Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ
ಪ್ರಾತಿನಿಧಿಕ ಚಿತ್ರ
Follow us
Skanda
|

Updated on: May 12, 2021 | 11:02 AM

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಸೋಂಕು ಹಬ್ಬುವಿಕೆ ಹೆಚ್ಚಾಗಿದ್ದು, ಇನ್ನು ಕೆಲ ತಿಂಗಳ ಬಳಿಕ ಮೂರನೇ ಅಲೆ ಬರುವ ಸಾಧ್ಯತೆಯೂ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಸನ್ನಿವೇಶಗಳನ್ನು ಎದುರಿಸಲು ಸಜ್ಜಾಗಿರಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ 2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎರಡು ಹಾಗೂ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ಆರಂಭಿಸುವಂತೆ ತಜ್ಞರ ಸಮಿತಿ ಭಾರತ್ ಬಯೋಟೆಕ್ ಸಂಸ್ಥೆಗೆ ಸಲಹೆ ನೀಡಿದೆ.

ವೈದ್ಯಕೀಯ ಪರೀಕ್ಷೆಯು ದೆಹಲಿ ಹಾಗೂ ಪಾಟ್ನಾದ AIIMS ಹಾಗೂ ನಾಗ್ಪುರದ ಮೆಡಿತ್ರಿನ ವೈದ್ಯಕೀಯ ವಿಜ್ಞಾನದ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆಯಲಿದ್ದು 525 ವಿಚಾರಗಳತ್ತ ಗಮನ ಹರಿಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

ಜನವರಿ 16, 2021ರಿಂದ ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 55 ವರ್ಷ ಮೇಲ್ಪಟ್ಟವರಿಗೆ ಹಾಗೂ ಫ್ರಂಟ್​ಲೈನ್ ವಾರಿಯರ್ಸ್​ಗೆ ನೀಡಲಾಗುತ್ತಿದ್ದು, ಮೇ 1 ರಿಂದ 18-44 ವರ್ಷದವರಿಗೂ ಲಸಿಕೆ ವಿತರಣೆ ಆರಂಭವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಲಸಿಕೆಯ ಕೊರತೆ ಉಂಟಾಗಿರುವುದರಿಂದ ಅಭಿಯಾನಕ್ಕೆ ಹಿನ್ನೆಡೆ ಉಂಟಾಗುತ್ತಿದೆ.

ಇದನ್ನೂ ಓದಿ: ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಕೊಟ್ಟು ಮುಗಿಸಬೇಕು ಎಂದರೆ ಎಷ್ಟು ದಿನ ಬೇಕು? ಇಲ್ಲಿದೆ ನೋಡಿ ವಿವರ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ