ದೆಹಲಿಯಲ್ಲಿ 1 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ – ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಪ್ ಸರ್ಕಾರ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಪಟ್ಟಿಯನ್ನು ಈಗಾಗಲೇ ತಯಾರಿಸಿದೆ. ಈ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಶೀಘ್ರವೇ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ದೆಹಲಿ ಸಿ.ಎಂ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ದೆಹಲಿ ಸರ್ಕಾರ ಸಕಲ ತಯಾರಿಗಳನ್ನೂ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸೇವಕರು ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಪ್ ಸರ್ಕಾರ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಪಟ್ಟಿಯನ್ನು ಈಗಾಗಲೇ ತಯಾರಿಸಿದೆ. ಈ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಶೀಘ್ರವೇ ಲಸಿಕೆ ವಿತರಣೆ ಆರಂಭಿಸುತ್ತೇವೆ. ಒಬ್ಬರಿಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಲು ಯೋಚಿಸಿದ್ದು ಸದ್ಯ ದೆಹಲಿಗೆ 1.02 ಕೋಟಿ ಡೋಸ್ ಲಸಿಕೆ ಅಗತ್ಯವಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ದೆಹಲಿಯಲ್ಲಿ 74 ಲಕ್ಷ ಡೋಸ್ ಕೊರೊನಾ ಲಸಿಕೆ ಸಂಗ್ರಹಿಸುವ ಸಾಮರ್ಥ್ಯವಿದೆ. ಇನ್ನು ಒಂದು ವಾರದಲ್ಲಿ 1.15 ಕೋಟಿ ಲಸಿಕೆ ಸಂಗ್ರಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.
We would need 1.02 crore doses of vaccine for the first phase of vaccination since each person will get two doses. Currently, we have the capacity to store 74 lakh doses which will be increased to 1.15 crore within one week: Delhi CM Arvind Kejriwal https://t.co/vxQQs1mQbv
— ANI (@ANI) December 24, 2020
ಕೃಷಿ ಕಾಯ್ದೆಗಳ ಪ್ರತಿಯನ್ನು ವಿಧಾನಸಭೆಯಲ್ಲಿ ಹರಿದುಹಾಕಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್