ದೆಹಲಿಯಲ್ಲಿ 1 ಕೋಟಿ ಡೋಸ್​ ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ – ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಪ್​ ಸರ್ಕಾರ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಪಟ್ಟಿಯನ್ನು ಈಗಾಗಲೇ ತಯಾರಿಸಿದೆ. ಈ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಶೀಘ್ರವೇ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ದೆಹಲಿ ಸಿ.ಎಂ ಕೇಜ್ರಿವಾಲ್​ ಹೇಳಿದ್ದಾರೆ.

ದೆಹಲಿಯಲ್ಲಿ 1 ಕೋಟಿ ಡೋಸ್​ ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ - ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​
Edited By:

Updated on: Dec 24, 2020 | 3:49 PM

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ದೆಹಲಿ ಸರ್ಕಾರ ಸಕಲ ತಯಾರಿಗಳನ್ನೂ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ತಿಳಿಸಿದ್ದಾರೆ. ಕೊವಿಡ್​ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸೇವಕರು ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್​ ಮಾಹಿತಿ ನೀಡಿದ್ದಾರೆ.

ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಪ್​ ಸರ್ಕಾರ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಪಟ್ಟಿಯನ್ನು ಈಗಾಗಲೇ ತಯಾರಿಸಿದೆ. ಈ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಶೀಘ್ರವೇ ಲಸಿಕೆ ವಿತರಣೆ ಆರಂಭಿಸುತ್ತೇವೆ. ಒಬ್ಬರಿಗೆ ಎರಡು ಡೋಸ್​ ಕೊರೊನಾ ಲಸಿಕೆ ನೀಡಲು ಯೋಚಿಸಿದ್ದು ಸದ್ಯ ದೆಹಲಿಗೆ 1.02 ಕೋಟಿ ಡೋಸ್​ ಲಸಿಕೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ದೆಹಲಿಯಲ್ಲಿ 74 ಲಕ್ಷ ಡೋಸ್​ ಕೊರೊನಾ ಲಸಿಕೆ ಸಂಗ್ರಹಿಸುವ ಸಾಮರ್ಥ್ಯವಿದೆ. ಇನ್ನು ಒಂದು ವಾರದಲ್ಲಿ 1.15 ಕೋಟಿ ಲಸಿಕೆ ಸಂಗ್ರಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಪ್ರತಿಯನ್ನು ವಿಧಾನಸಭೆಯಲ್ಲಿ ಹರಿದುಹಾಕಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್