Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

Rahul Gandhi on Corona Vaccine Utsav: ದೇಶದ ಜನರಿಗೇ ಕೊರೊನಾ ಲಸಿಕೆ ನೀಡದೇ ವಿದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುವ ಅವಶ್ಯಕತೆ ಏನಿದೆ ಎಂದು ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಪ್ರಶ್ನಿಸಿದ್ದಾರೆ.

Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
guruganesh bhat
|

Updated on:Apr 09, 2021 | 6:38 PM

ದೆಹಲಿ: ದೇಶದಲ್ಲಿ ಕೊರೊನಾ ಲಸಿಕೆಯ ಕುರಿತು ಉತ್ಸವ ಆಚರಿಸುವ ಪರಿಸ್ಥಿತಿ ಇಲ್ಲ, ಬದಲಿಗೆ ಲಸಿಕೆ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ  ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಟೀಕಿಸಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ಅಭಾವವಿದೆ. ವಿದೇಶಗಳಿಗೆ ಕೊರೊನಾ ಲಸಿಕೆ ಕೊಡುವುದನ್ನು ನಿಲ್ಲಿಸಿ. ಅಗತ್ಯವಿರುವ ಎಲ್ಲಾ ರಾಜ್ಯಗಳ ಕೊರೊನಾ ಲಸಿಕೆ ಒದಗಿಸಿ. ಎಲ್ಲರೂ ಲಸಿಕೆ ಪಡೆಯುವ ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿಯಷ್ಟೇ ಏಪ್ರಿಲ್ 11ರಿಂದ 14ರವರೆಗೆ ಟಿಕಾ ಉತ್ಸವ ಅಥವಾ ಲಸಿಕೆ ಉತ್ಸವವನ್ನು ಆಚರಿಸುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನೀಡಿದ್ದರು.

ಮಹಾರಾಷ್ಟ್ರ ರಾಜ್ಯವೂ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ಲಸಿಕೆಯ ಕೊರತೆ ಎದ್ದುಕಾಣುತ್ತಿದೆ. ಕೇಂದ್ರ ಸರ್ಕಾರದ ಬಳಿ ರಾಜ್ಯಸರ್ಕಾರಗಳು ಬೇಡಿಕೆಯಿಟ್ಟಷ್ಟು ಲಸಿಕೆ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಎಷ್ಟೋ ಲಸಿಕೆ ವಿತರಣಾ ಕೇಂದ್ರಗಳು ಕೊರೊನಾ ಲಸಿಕೆ ಖಾಲಿಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಿವೆ. ಪರಿಸ್ಥಿತಿ ಇಷ್ಟು ದುಸ್ಥರವಾಗಿರುವಾಗ ಕೊರೊನಾ ಲಸಿಕೆಯ ಉತ್ಸವ ಮಾಡುವುದು ಹೇಗೆ? ಉತ್ಸವ ಆಚರಿಸುವದರಲ್ಲಿ ಯಾವ ಅರ್ಥವಿದೆ? ದೇಶದ ಜನರಿಗೇ ಕೊರೊನಾ ಲಸಿಕೆ ನೀಡದೇ ವಿದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುವ ಅವಶ್ಯಕತೆ ಏನಿದೆ ಎಂದು ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಯಾವುದೇ ಪಕ್ಷಪಾತವಿಲ್ಲದೇ ಕೊರೊನಾ ಲಸಿಕೆ ವಿತರಿಸಬೇಕು. ಕೊರೊನಾ ಲಸಿಕೆಯ ಉತ್ಸವ ಮಾಡುವ ಪರಿಸ್ಥಿತಿಯಲ್ಲಿ ರಾಜ್ಯಗಳಿಲ್ಲ. ಸಮಸ್ಯೆಯನ್ನು ಉತ್ಸವ ಎಂದು ಆಚರಿಸುವುದು ಸಾಧ್ಯವಿಲ್ಲ. ಕೊರೊನಾ ಲಸಿಕೆ ರಫ್ತು ಪ್ರಕ್ರಿಯೆ ದೇಶದ ನಾಗರಿಕರನ್ನು ಸಮಸ್ಯೆಗೆ ಸಿಲುಕಿಸುತ್ತಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಬೇಕು ಎಂದು ಅವರು ಟ್ವಿಟ್ ಮಾಡಿದ್ದಾರೆ.

ನಿನ್ನೆ ಪ್ರಧಾನಿ ನರೇಂದ್ರ ಮೊದಿ ಹೇಳಿದ್ದೇನು? ಲಸಿಕೆ ವ್ಯರ್ಥವಾಗುವುದನ್ನು ತಡೆಯಲು ಎಲ್ಲ ರೀತಿಯ ಗಮನ ಕೊಡಬೇಕು. ಅಗತ್ಯವಿರುವ ವಯೋಮಾನಕ್ಕೆ ಬೇಗನೇ ಲಸಿಕೆ ಸಿಗುವಂತೆ ಮಾಡಿ. ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನ ನಡೆಸೋಣ. ಶೂನ್ಯ ವ್ಯರ್ಥದ ಗುರಿಯ ಜೊತೆಗೆ ಹೆಚ್ಚು ಜನರಿಗೆ ಲಸಿಕೆ ಸಿಗುವಂತೆ ಮಾಡೋಣ.

ಕೊರೊನಾ ಲಸಿಕೆ ಕೊರತೆ ಆರೋಪ ದೇಶದಲ್ಲಿ ಕೊರೊನಾ ಲಸಿಕೆ ಕೊರತೆ ಎದ್ದು ಕಾಣುತ್ತಿದೆ ಎಂದು ವಿವಿಧ ರಾಜ್ಯಗಳೂ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿವೆ.  ಸದ್ಯ ನಮ್ಮಲ್ಲಿ 5.34ಲಕ್ಷ ಡೋಸ್ ಇದೆ. ಪ್ರತಿದಿನ ನಾವು 2.5 ಲಕ್ಷ ಡೋಸ್ ನೀಡುತ್ತಿದ್ದೇವೆ. ಹಾಗಾಗಿ ನಮ್ಮಲ್ಲಿರುವ ಲಸಿಕೆ ಸಂಗ್ರಹ ಇನ್ನೆರಡು ದಿನಕ್ಕೆ ಸಾಕಾಗಬಹುದು. 10 ದಿನಗಳಿಗೆ ಕನಿಷ್ಠ 25 ಲಕ್ಷ ಡೋಸ್ ನಮಗೆ ಕಳುಹಿಸಿಕೊಟ್ಟರೆ ನಾವು ಸರಿಯಾಗಿ ಲಸಿಕೆ ನೀಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಇಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದೆ ಎಂದು ಒಡಿಶಾ ಆರೋಗ್ಯ ಸಚಿವರು  ಹೇಳಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರವೂ ಸಹ ಕೊರೊನಾ ಲಸಿಕೆ ಕೊರತೆಯನ್ನು ಎದುರಿಸುತ್ತಿದ್ದೇವೆ ಎಂದು ಈಚೆಗೆ ತಿಳಿಸಿತ್ತು.

ಇದನ್ನೂ ಓದಿ: ಮಹಾಕುಂಭಮೇಳದಲ್ಲೊಂದು ಸುಂದರ ಸಂಗಮ; 5ವರ್ಷದ ಹಿಂದೆ ಅರ್ಧಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತೆ ಕುಟುಂಬ ಕೂಡಿಕೊಂಡದ್ದು ಹೇಗೆ?

PM Narendra Modi Speech: ದೇಶದಲ್ಲಿ ಲಾಕ್​ಡೌನ್​ ಇಲ್ಲ; ಮೋದಿ ಸ್ಪಷ್ಟನೆ

(Corona vaccine shortage is problem not a Utsav Congress leader Rahul Gandhi criticized PM Modi)

Published On - 12:51 pm, Fri, 9 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್