ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

| Updated By: Skanda

Updated on: Apr 01, 2021 | 7:45 PM

ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. ಅದರಲ್ಲೂ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ.

ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಕೊರೊನಾ ಲಸಿಕೆ ವಿತರಣೆಯ ವೇಗ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ನಿರ್ಧಾರ ಕೈಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸರ್ಕಾರಿ ರಜಾ ದಿನಗಳಲ್ಲಿಯೂ ಕೊರೊನಾ ಲಸಿಕೆ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ‌ ಎರಡೂ ಬಗೆಯ ಲಸಿಕಾ ಕೇಂದ್ರಗಳಲ್ಲಿ ಕೊರೊನಾ ಲಸಿಕೆಯನ್ನು ಏಪ್ರಿಲ್ ತಿಂಗಳ ಸರ್ಕಾರಿ ರಜಾ ದಿನಗಳಲ್ಲಿಯೂ ವಿತರರಣೆ ಮಾಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ದೇಶದಲ್ಲಿ ಇಂದಿನಿಂದ (ಏಪ್ರಿಲ್ 1 ) 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. ಲಸಿಕೆ ಪಡೆಯಬಯಸುವವರು ಕೊವಿನ್ ಪೋರ್ಟಲ್​ನಲ್ಲಿ ತಮ್ಮ ಹೆಸರು ರಿಜಿಸ್ಟರ್ ಮಾಡಿಕೊಳ್ಳಬೇಕಿದ್ದು, 45 ವರ್ಷಕ್ಕಿಂತ ಮೇಲ್ಪಟ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ.

ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ
ಭಾರತದಲ್ಲಿ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಕೊರೊನಾದ ಹೊಡೆತದಿಂದ ತಪ್ಪಿಸಿಕೊಳ್ಳಲು ಕೊರೊನಾ ಲಸಿಕೆಯೇ ರಾಮಬಾಣ. ಆದರೆ, ಲಸಿಕೆ ಲಭ್ಯವಿದ್ದರೂ, ಜನರು ಲಸಿಕೆ ಪಡೆಯಲು ಸ್ವಪ್ರೇರಣೆಯಿಂದ ಮುಂದೆ ಬರುತ್ತಿಲ್ಲ. ಇದುವರೆಗೂ ದೇಶದಲ್ಲಿ 45 ವರ್ಷ ಮೇಲ್ಪಟ್ಟ ಬೇರೆ ಬೇರೆ ರೋಗದಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿತ್ತು. ಜೊತೆಗೆ ಮೊದಲನೇ ಹಂತದಲ್ಲಿ ದೇಶದಲ್ಲಿ ಜನವರಿ 16 ರಿಂದ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬಳಿಕ ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರು, ರೋಗದಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಆದರೂ ಕೂಡ ದೇಶದಲ್ಲಿ ಮಾರ್ಚ್ 30ರ ಸಂಜೆ 7 ಗಂಟೆಯವರೆಗೂ 6.24 ಕೋಟಿ ಜನರು ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.

ದೇಶದಲ್ಲಿ ಹೆಚ್ಚಿನ ಜನರಿಗೆ ಲಸಿಕೆ ನೀಡಿ, ಕೊರೊನಾದಿಂದ ರಕ್ಷಣೆ ನೀಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಹದಿನೈದು ದಿನದ ಹಿಂದೆಯೇ ಒಪ್ಪಿಗೆ ನೀಡಲಾಗಿದೆ. ಇಂದಿನಿಂದ ದೇಶಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ವೈರಸ್ ವಿರುದ್ಧದ ಲಸಿಕೆ ನೀಡಲಾಗುತ್ತದೆ. 45 ವರ್ಷ ಮೇಲ್ಪಟ್ಟಿದ್ದು, ರೋಗಗಳಿಂದ ಬಳಲದೇ ಇದ್ದರೂ ಲಸಿಕೆ ನೀಡಲಾಗುತ್ತೆ. ಜನವರಿ 1, 1977ಕ್ಕಿಂತ ಮುಂಚೆ ಹುಟ್ಟಿದ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುತ್ತದೆ.ಈ ಲಸಿಕೆ ವಿತರಣೆ ಅಭಿಯಾನವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಹೋಗಿ ಹೊಸ ವೈರಸ್​ಗೆ ಆಹ್ವಾನ ನೀಡುತ್ತಿದ್ದೇವಾ? ಅತಿಯಾದ ಸ್ಯಾನಿಟೈಸರ್​ ಬಳಕೆಯೇ ತಿರುಗುಬಾಣವಾಗಬಹುದು ಎಚ್ಚರ!

TV9 Digital Live| ಕೊವಿಡ್​ ನಿಯಂತ್ರಣ ಮಾಡಲು ಸರ್ಕಾರ ತಂದ ಹೊಸ ಮಾರ್ಗಸೂಚಿ ಸಹಕಾರಿಯಾಗಬಹುದೇ?

Published On - 3:15 pm, Thu, 1 April 21