AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

ಕೊರೊನಾ ಮೂರನೇ ಅಲೆಯ ಕುರಿತಂತೆ ಎನ್​ಸಿಡಿಸಿಯ ಸುಜೀತ್ ಸಿಂಗ್ ಮಾತನಾಡಿದ್ದಾರೆ. ಇನ್ನು ಆರು ತಿಂಗಳಲ್ಲಿ ಕೊರೊನಾ ಸ್ಥಳೀಯವಾಗಿ ಕಾಣಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್
ಸಾಂದರ್ಭಿಕ ಚಿತ್ರ
TV9 Web
| Updated By: shivaprasad.hs|

Updated on:Sep 17, 2021 | 12:42 PM

Share

ಕೊರೊನಾವೈರಸ್‌ನ ಹೊಸ ರೂಪಾಂತರವೊಂದೇ ಮೂರನೇ ಅಲೆಗೆ ಕಾರಣವಾಗುವುದಿಲ್ಲ. ಸೋಂಕು ಮುಂದಿನ ಆರು ತಿಂಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಕಾಣಿಸಿಕೊಳ್ಳಬಹುದು  ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ನಿರ್ದೇಶಕ ಸುಜೀತ್ ಸಿಂಗ್ ಹೇಳಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾಣಿಸಿಕೊಳ್ಳುವುದರಿಂದ ಸೋಂಕನ್ನು ನಿರ್ವಹಿಸಬಹುದಾಗಿದೆ ಮತ್ತು ಆರೋಗ್ಯ ಮೂಲಸೌಕರ್ಯದ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ಸಾವು ಮತ್ತು ಸೋಂಕು ಹರಡುವುದು ನಿಯಂತ್ರಣದಲ್ಲಿದ್ದರೆ, ನಂತರ ರೋಗವನ್ನು ನಿರ್ವಹಿಸಬಹುದಾಗಿದೆ ಎಂದು ಸುಜೀತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವಾರಗಳಿಂದ ಕೋವಿಡ್‌ನೊಂದಿಗಿನ ತೀವ್ರ ಸೆಣಸಾಡುತ್ತಿರುವ ಕೇರಳವೂ ನಿಧಾನವಾಗಿ ಅದರಿಂದ ಹೊರಬರುತ್ತಿದೆ ಎಂದು ಸಿಂಗ್ ಹೇಳಿದ್ದಾರೆ. ವೈರಸ್ ವಿರುದ್ಧ ಹೋರಾಡುವಲ್ಲಿ ಲಸಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಿಂಗ್, ಜನರು ಕೊರೊನಾ ಕುರಿತ ಸೂಕ್ತ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. 20 ರಿಂದ 30 ಪ್ರತಿಶತದಷ್ಟು ಪ್ರಕರಣಗಳಲ್ಲಿ ಸಂಪೂರ್ಣ ಲಸಿಕೆ ಪಡೆದ ಜನರು ಸೋಂಕಿಗೆ ಒಳಗಾಗುತ್ತಾರೆ. ಆದ್ದರಿಂದ ಎಚ್ಚರಿಕೆ ಅಗತ್ಯ ಎಂದು ಅವರು ನುಡಿದಿದ್ದಾರೆ.

ಹೊಸ ರೂಪಾಂತರಿ ತಳಿಗಳು ಸುಧಾರಿತ ಸೋಂಕಿಗೆ ಕಾರಣವಾಗಬಹುದು ಎಂದು ಸಿಂಗ್ ತಿಳಿಸಿದ್ದಾರೆ. “ವ್ಯಾಕ್ಸಿನೇಷನ್ ಮಾಡಿದ 70 ರಿಂದ 100 ದಿನಗಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಲು ಆರಂಭವಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ” ಎಂದು ಅವರು ಹೇಳಿದ್ದಾರೆ. ದೇಶದಲ್ಲಿ 70 ಕೋಟಿ ಲಸಿಕೆಯನ್ನು ನೀಡಲಾಗಿದೆ. ಲಸಿಕೆಯು ಕೊರೊನಾ ವಿರುದ್ಧ 70 ಪ್ರತಿಶತ ಪರಿಣಾಮಕಾರಿ ಎಂಬ ನೆಲೆಯಲ್ಲಿ ಗಮನಿಸಿದರೆ, ಸುಮಾರು 50 ಕೋಟಿ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಕೇವಲ ಒಂದು ಡೋಸ್ ಲಸಿಕೆ ಪಡೆದಿದ್ದವರು ಸುಮಾರು 30 ಪ್ರತಿಶತದಷ್ಟು ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ,ಅವರಿಗೂ ಸಹ ರೋಗನಿರೋಧಕ ಶಕ್ತಿ ಇದೆ ಎಂದು ಪರಿಗಣಿಸಲಾಗುತ್ತದೆ ಎಂದು ಸಿಂಗ್ ಹೇಳಿದ್ದಾರೆ.

ವರದಿಯಲ್ಲಿ ಸಿಂಗ್ ಮತ್ತೊಂದು ಅಚ್ಚರಿಯ ವಿಚಾರ ಹೊರಹಾಕಿದ್ದಾರೆ. C1.2 ಮತ್ತು Mu ತಳಿಗಳು ದೇಶದಲ್ಲಿ ಇನ್ನೂ ಕಂಡುಬಂದಿಲ್ಲ. “ಕೇವಲ ಒಂದು ಹೊಸ ರೂಪಾಂತರವು ಮೂರನೇ ತರಂಗವನ್ನು ಉಂಟುಮಾಡುವುದಿಲ್ಲ”ಎಂದು ಸಿಂಗ್ ಹೇಳಿದ್ದಾರೆ. ಆದರೂ ಮುಂಬರುವ ಹಬ್ಬದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Narendra Modi Birthday: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ, ಗೃಹ ಸಚಿವ ಸೇರಿ ಗಣ್ಯರ ಶುಭಾಶಯ, ದಿಟ್ಟ ನಾಯಕನೆಂದು ಬಣ್ಣನೆ

ಕೊರೊನಾದಿಂದ ಮೃತಪಟ್ಟ ಚಿನ್ನದ ಅಂಗಡಿ ಮಾಲೀಕ: ತಮ್ಮ ನಿಂದಲೇ ಕುಟುಂಬಕ್ಕೆ 4 ಕೋಟಿ ರೂ. ಮೋಸ; ಗ್ರಾಹಕರು ಕಂಗಾಲು

(Corona will become endemic in six months and 3rd wave not possible by a single variant says NCDC Chief)

Published On - 9:24 am, Fri, 17 September 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​