ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾ 3ನೇ ಅಲೆಯಲ್ಲಿ ಮಕ್ಕಳು ಹೆಚ್ಚು ಬಾಧೆಗೆ ಒಳಗಾಗುತ್ತಾರೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮಗುವನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವ ಪೋಷಕರು ಈ ವೇಳೆ ಕೊರೊನಾ ಸೋಂಕಿತರಾಗುವ ಅಪಾಯ ಹೆಚ್ಚಾಗಿದೆ ಎಂದು ನ್ಯಾಯಾಲಯವು ಸರ್ಕಾರಕ್ಕೆ ಎಚ್ಚರಿತು.

ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ
ಸುಪ್ರೀಂಕೋರ್ಟ್​
Follow us
|

Updated on:May 06, 2021 | 3:04 PM

ದೆಹಲಿ: ಕೊರೊನಾ ಪಿಡುಗಿನ 3ನೇ ಅಲೆ ತಡೆಯಲು ಅಸಾಧ್ಯ ಎಂದು ಭಾರತ ಸರ್ಕಾರವು ಒಪ್ಪಿಕೊಂಡ ವಿಚಾರವನ್ನು ಸುಪ್ರೀಂಕೋರ್ಟ್​ ಗುರುವಾರ (ಮೇ 6) ಪ್ರಸ್ತಾಪಿಸಿತು. ಒಂದು ವೇಳೆ ದೇಶಕ್ಕೆ ಕೊರೊನಾ 3ನೇ ಅಲೆ ಅಪ್ಪಳಿಸಿದರೆ ಅದನ್ನು ನಿರ್ವಹಿಸಲು ಏನೆಲ್ಲಾ ಸಿದ್ಧತೆ ಮಾಡಿಕೊಂಡಿದ್ದೀರಿ ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು. ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯದಲ್ಲಿ ಹಾಜರಿದ್ದರು.

ಕೊರೊನಾ 3ನೇ ಅಲೆಯಲ್ಲಿ ಮಕ್ಕಳು ಹೆಚ್ಚು ಬಾಧೆಗೆ ಒಳಗಾಗುತ್ತಾರೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮಗುವನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವ ಪೋಷಕರು ಈ ವೇಳೆ ಕೊರೊನಾ ಸೋಂಕಿತರಾಗುವ ಅಪಾಯ ಹೆಚ್ಚಾಗಿದೆ. ದೇಶದಲ್ಲಿ 3ನೇ ಅಲೆ ವ್ಯಾಪಿಸಿಕೊಳ್ಳುವ ಹೊತ್ತಿಗೆ ಈ ವಯೋಮಾನದವರಿಗೆ ಲಸಿಕೆ ನೀಡುವ ಕೆಲಸ ಮುಗಿಸಿರಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ದೆಹಲಿಗೆ ಆಕ್ಸಿಜನ್ ಪೂರೈಕೆ ಕುರಿತು ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಮಾಹಿತಿ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೆಹಲಿಗೆ 700 ಮೆಟ್ರಿಕ್ ಟನ್ ಆಕ್ಸಿಜನ್ ಮೀಸಲಿಡುವ ವಿಚಾರದಲ್ಲಿ ಅಸಹಾಯಕತೆ ವ್ಯಕ್ತಪಡಿಸಿದರು. ದೆಹಲಿಯ ಆಕ್ಸಿಜನ್ ಮೀಸಲು ಪ್ರಮಾಣ ಹೆಚ್ಚಿಸಿದರೆ ಇತರ ರಾಜ್ಯಗಳಿಗೆ ತೊಂದರೆಯಾಗುತ್ತದೆ ಎಂದು ಹೇಳಿದರು.

ಈಗ ಆಕ್ಸಿಜನ್ ಬೇಕು ಎಂದು ತುರ್ತುಕರೆ ಮೊಳಗಿಸುತ್ತಿರುವ ಹಲವು ಆಸ್ಪತ್ರೆಗಳು ಕೋವಿಡ್ ಆಸ್ಪತ್ರೆಗಳಲ್ಲ. ಈ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಶೇಖರಣೆಗೆ ಬೇಕಾದ ಸಂಗ್ರಹ ವ್ಯವಸ್ಥೆ ಇಲ್ಲ. ಆಕ್ಸಿಜನ್ ಸಿಲಿಂಡರ್​ಗಳಲ್ಲಿ ಮೆಡಿಕಲ್ ಆಕ್ಸಿಜನ್​ ಅನ್ನು 12 ಗಂಟೆಗಳ ಅವಧಿಗೆ ಮಾತ್ರ ಶೇಖರಿಸಿ ಇಡಬಹುದಾಗಿದೆ. ಹಲವು ಆಸ್ಪತ್ರೆಗಳಲ್ಲಿ ಸಮರ್ಪಕ ಟ್ಯಾಂಕ್ ಇಲ್ಲ. ಹೀಗಾಗಿಯೇ ತುರ್ತುಕರೆಯ ಸಂದೇಶಗಳನ್ನು ಈ ಆಸ್ಪತ್ರೆಗಳು ನೀಡುತ್ತಿವೆ ಎಂದು ತುಷಾರ್ ಮೆಹ್ತಾ ಹೇಳಿದರು.

ಇತರ ರಾಜ್ಯಗಳಿಗೆ ಮೀಸಲಿರಿಸಿರುವ ಆಮ್ಲಜನಕವನ್ನು ದೆಹಲಿಗೆ ನೀಡಿದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಉತ್ತರ ನೀಡುವುದು ಕಷ್ಟವಾಗುತ್ತದೆ ಎಂದು ಮೆಹ್ತಾ ಹೇಳಿದರು. ಮಧ್ಯಪ್ರವೇಶಿಸಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್, ದೆಹಲಿಯ ಅವಶ್ಯತೆಯನ್ನು ನೀವು ಸರಿಯಾಗಿ ಲೆಕ್ಕ ಹಾಕಿಲ್ಲ. ಹೀಗಾಗಿ ನೀವು ರೂಪಿಸಿರುವ ಸೂತ್ರವನ್ನು ಮರುಪರಿಶೀಲಿಸಿ ಎಂದರು.

(Coronavirus 3rd wave Supreme Court Asks Indian Govt to Explain the measures to deal with 3rd surge of pandemic)

ಇದನ್ನೂ ಓದಿ: 3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಇದನ್ನೂ ಓದಿ: ಕೊವಿಡ್ 3ನೇ ಅಲೆ ತಡೆ ಅಸಾಧ್ಯ, ಕೊರೊನಾವೈರಸ್ ಸೋಂಕು ಅಧಿಕ: ಕೇಂದ್ರ ಸರ್ಕಾರ

Published On - 3:03 pm, Thu, 6 May 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ