AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 7:36 PM

Share

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ