ಸಾವಿರದ ಗಡಿ ದಾಟಿಯೇ ಬಿಟ್ಟಿತು ಕೊರೊನಾ ಅಟ್ಟಹಾಸ

ನವದೆಹಲಿ: ಭಾರತದಲ್ಲಿ ಕೊರೊನಾ ರೌದ್ರಾವತಾರ ಮುಂದುವರೆದಿದೆ. ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 1,007 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 73 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಂದೇ ದಿನ ಭಾರತದಲ್ಲಿ ಅತಿಹೆಚ್ಚು ಜನರು ಬಲಿಯಾಗಿದ್ದಾರೆ. ಕೊರೊನಾ ವೈರಸ್ ಪೀಡಿತರ ಸಂಖ್ಯೆ 31,332ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,897 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7,696 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 22,629 ಕೊರೊನಾ ಸೋಂಕಿತರಿಗೆ […]

ಸಾವಿರದ ಗಡಿ ದಾಟಿಯೇ ಬಿಟ್ಟಿತು ಕೊರೊನಾ ಅಟ್ಟಹಾಸ
ಸಾಧು ಶ್ರೀನಾಥ್​

Updated on: Apr 29, 2020 | 10:32 AM

ನವದೆಹಲಿ: ಭಾರತದಲ್ಲಿ ಕೊರೊನಾ ರೌದ್ರಾವತಾರ ಮುಂದುವರೆದಿದೆ. ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 1,007 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 73 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಂದೇ ದಿನ ಭಾರತದಲ್ಲಿ ಅತಿಹೆಚ್ಚು ಜನರು ಬಲಿಯಾಗಿದ್ದಾರೆ.

ಕೊರೊನಾ ವೈರಸ್ ಪೀಡಿತರ ಸಂಖ್ಯೆ 31,332ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,897 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7,696 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 22,629 ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 9,318 ಕ್ಕೆ ಏರಿಕೆಯಾಗಿದೆ. ಗುಜರಾತ್​​ 3,744, ದೆಹಲಿ 3314, ಮಧ್ಯಪ್ರದೇಶ 2387, ರಾಜಸ್ಥಾನ 2364, ತಮಿಳುನಾಡು 2058 ಜನರಿಗೆ ಸೋಂಕು ತಗುಲಿದೆ.

Published On - 10:30 am, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us