Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

Covid 19 India Cases : ಭಾರತದಲ್ಲಿ ಈವರೆಗೆ ಒಟ್ಟು 103,558 ಸೋಂಕು ಪ್ರಕರಣಗಳು ದಾಖಲಾಗಿದ್ದು, 57,700ಕ್ಕಿಂತಲೂ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ.

Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Apr 05, 2021 | 12:33 PM

ದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದು ಕಳೆದ 24ಗಂಟೆಗಳಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಪಿಡುಗು ದೇಶದಲ್ಲಿ ಕಾಣಿಸಿಕೊಂಡ ನಂತರ ಗರಿಷ್ಠ ಪ್ರಕರಣ ಭಾನುವಾರ ದಾಖಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 16ರಂದು 97,894 ಪ್ರಕರಣಗಳು ಪತ್ತೆಯಾಗಿತ್ತು. ದೇಶದಲ್ಲಿ ಈವರೆಗೆ ಒಟ್ಟು 103,558 ಸೋಂಕು ಪ್ರಕರಣಗಳು ದಾಖಲಾಗಿದ್ದು, 57,700ಕ್ಕಿಂತಲೂ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಸೋಂಕು ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಲಾಕ್​ಡೌನ್ ಮತ್ತು ನಿರ್ಬಂಧಗಳನ್ನು ಹೇರಲಾಗಿದೆ. ಪುಣೆ ಮತ್ತು ಮುಂಬೈನಲ್ಲಿ ಅತ್ಯಧಿಕ ಸೋಂಕು ಪ್ರಕರಣಗಳು ಕಂಡು ಬಂದಿದ್ದು ಭಾನುವಾರ ಕ್ರಮವಾಗಿ 12,472 ಮತ್ತು 11,206 ಪ್ರಕರಣಗಳು ದಾಖಲಾಗಿವೆ.

ದೆಹಲಿ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ 4,000ಕ್ಕಿಂತಲೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಛತ್ತೀಸ್​ಗಢದಲ್ಲಿ ಎರಡನೇ ದಿನ 5,000ಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ 7.4 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು 478 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಸಾವಿಗೀಡಾದವರ ಸಂಖ್ಯೆ 222 ಆಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 26 ನೇ ದಿನವೂ ಏರಿಕೆಯಾಗಿದ್ದು 741,830ಕ್ಕೆ ತಲುಪಿದೆ. ಫೆಬ್ರವರಿ 12ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 135,926 ಆಗಿತ್ತು. ಕಳೆದ 24ಗಂಟೆಗಳಲ್ಲಿ 52,847 ಮಂದಿ ಚೇತರಿಸಿಕೊಂಡಿದ್ದು ಈವರೆಗೆ ಒಟ್ಟು 11,682,136 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆಯ ಪ್ರಮಾಣ 92.79 ಆಗಿದೆ.

ಕಳೆದ ಎರಡು ವಾರಗಳಲ್ಲಿ ಮಹಾರಾಷ್ಟ್ರದಲ್ಲಿ 426,108 ಪ್ರಕರಣಗಳು ಪತ್ತೆಯಾಗಿದ್ದು ಪಂಜಾಬ್​ನಲ್ಲಿ 35,754 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಮಾರ್ಚ್ 23ರವರೆಗೆ ಹೊಸ ಸೋಂಕು ಪ್ರಕರಣಗಳ ಏರಿಕೆ ಪ್ರಮಾಣ ಮಹಾರಾಷ್ಟ್ರದಲ್ಲಿ ಶೇ.3.6ಆಗಿದ್ದು ಪಂಜಾಬ್ ನಲ್ಲಿ ಶೇಕಡಾ3.2 ಆಗಿದೆ.ಎರಡು ವಾರಗಳಲ್ಲಿ ದೇಶದಲ್ಲಿ ಸಂಭವಿಸಿದ ಸಾವಿನ ಪ್ರಮಾಣದ ಶೇಕಡಾ 60ರಷ್ಟು ಸಾವು ಪಂಜಾಬ್ ಮತ್ತು ಮಹಾರಾಷ್ಟ್ರದಲ್ಲಿ ಸಂಭವಿಸಿದೆ.

ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಕೇರಳ, ಛತ್ತೀಸ್​ಗಢ, ಚಂಡೀಗಢ , ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ದೆಹಲಿ, ಹರ್ಯಾಣ ಈ ರಾಜ್ಯಗಳಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾವಿನ ಸಂಖ್ಯೆ ಯೂ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಏಪ್ರಿಲ್ 05ರವರೆಗಿನ ಅಂಕಿ ಅಂಶಗಳ ಪ್ರಕಾರ  ಕೊವಿಡ್ ಚೇತರಿಕೆ ಪ್ರಮಾಣ  ಶೇ92.80 ಆಗಿದೆ.

ಇಲ್ಲಿಯವರೆಗೆ ದೇಶದಲ್ಲಿ  8 ಕೋಟಿ ಜನರಿಗೆ ಕೊವಿಡ್ ಲಸಿಕೆ ವಿತರಿಸಲಾಗಿದೆ. ಕಳೆದ 24ಗಂಟೆಗಳಲ್ಲಿ 16,38,464 ಲಸಿಕೆ ನೀಡಲಾಗಿದೆ.  ಎಂಟು ರಾಜ್ಯಗಳಲ್ಲಿ ಶೇ.60 ರಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.

ದೆಹಲಿಯಲ್ಲಿ ಪ್ಲಾಸ್ಮಾಗೆ ಹೆಚ್ಚಿದ ಬೇಡಿಕೆ

ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಪ್ಲಾಸ್ಮಾಗೆ ಬೇಡಿಕೆ ಹೆಚ್ಚಾಗಿದೆ. ಪ್ಲಾಸ್ಮಾ ದಾನಿಗಳ ಸಂಖ್ಯೆಯೂ ಕಡಿಮೆಯಾಗಿದ್ದು, ಪ್ಲಾಸ್ಮಾ ಬ್ಯಾಂಕ್​ಗಳ ಮುಂದೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಸದ್ಯ ಸಾಕಷ್ಟು ಪ್ಲಾಸ್ಮಾ ಸಂಗ್ರಹ ಇದೆ ಎಂದು ಪ್ಲಾಸ್ಮಾ ಬ್ಯಾಂಕ್ ಹೇಳಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ 1-2 ಮಂದಿ ಮಾತ್ರ ಪ್ಲಾಸ್ಮಾ ದಾನ ನೀಡಲು ಬಂದಿದ್ದು, ದಿನವೊಂದಕ್ಕೆ ಸುಮಾರು 10 ರೋಗಿಗಳಿಗೆ ಪ್ಲಾಸ್ಮಾದ ಅಗತ್ಯವಿದೆ.

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

(Coronavirus India detected more than one lakh cases over 57700 infections reported from Maharashtra)

Published On - 10:39 am, Mon, 5 April 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ