Corona Third Wave: ಜಾಗತಿಕ ಮಟ್ಟದಲ್ಲಿ ಶೇ.16ರಷ್ಟು ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ; ಭಾರತಕ್ಕೆ ನಾಲ್ಕನೇ ಸ್ಥಾನ

ಭಾರತದಲ್ಲಿ ಒಂದು ವಾರದ ಅವಧಿಯಲ್ಲಿ 2.69 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರ ಹಿಂದಿನ ವಾರಕ್ಕೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಶೇ.8ರಷ್ಟು ಇಳಿಮುಖವಾಗಿದೆ. ಆದರೆ, ನಿನ್ನೆ ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಹೆಚ್ಚಾಗಿದ್ದು, ವಾರದಲ್ಲಿ 2ನೇ ಬಾರಿಗೆ ಈ ಪ್ರಮಾಣದ ಸೋಂಕು ಕಾಣಿಸಿಕೊಂಡಿದೆ.

Corona Third Wave: ಜಾಗತಿಕ ಮಟ್ಟದಲ್ಲಿ ಶೇ.16ರಷ್ಟು ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ; ಭಾರತಕ್ಕೆ ನಾಲ್ಕನೇ ಸ್ಥಾನ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Jul 18, 2021 | 12:15 PM

ದೆಹಲಿ: ಭಾರತದಲ್ಲಿ ಗಂಭೀರ ಸ್ವರೂಪಕ್ಕೆ ತಲುಪಿದ್ದ ಕೊರೊನಾ ಎರಡನೇ ಅಲೆ (Corona Second Wave) ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆಯಾದರೂ ಭೀತಿ ಇನ್ನೂ ಶಮನವಾಗಿಲ್ಲ. ಡೆಲ್ಟಾ ರೂಪಾಂತರಿಯ (Delta Variant) ಅಪಾಯಕಾರಿ ವರ್ತನೆ ಹಾಗೂ ಮೂರನೇ ಅಲೆ (Corona Third Wave) ಉದ್ಭವಿಸುವ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವುದರಿಂದ ಈ ಹಂತದಲ್ಲಿ ಮೈಮರೆಯುವುದು ಬಲು ಅಪಾಯಕಾರಿ. ಸದ್ಯ ಹೆಚ್ಚು ಸಕ್ರಿಯ ಸೋಂಕಿತರನ್ನು ಒಳಗೊಂಡ ದೇಶಗಳ ಪೈಕಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಭಾರತದಲ್ಲಿ (India) ನಿನ್ನೆ (ಜುಲೈ 17, ಶನಿವಾರ) 40 ಸಾವಿರಕ್ಕೂ ಅಧಿಕ ಸೋಂಕಿತರು ಹೊಸದಾಗಿ ಕಾಣಿಸಿಕೊಂಡಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇ ಬಾರಿಗೆ ಸೋಂಕಿತರ ಪ್ರಮಾಣ 40 ಸಾವಿರದ ಗಡಿ ದಾಟಿದ್ದು, ಕೇರಳ ಮತ್ತು ಮಣಿಪುರ ರಾಜ್ಯಗಳಲ್ಲಿ ಸೋಂಕು ಉಲ್ಬಣಿಸುತ್ತಿರುವುದು ಕಂಡುಬಂದಿದೆ.

ಬ್ರೆಜಿಲ್​ ದೇಶವನ್ನು ಹಿಂದಿಕ್ಕಿರುವ ಇಂಡೋನೇಶ್ಯಾ ಜಾಗತಿಕ ಮಟ್ಟದಲ್ಲಿ ಅತ್ಯಧಿಕ ಸೋಂಕಿತರು ಪತ್ತೆಯಾಗುತ್ತಿರುವ ನಂ.1ದೇಶ ಎಂದು ಗುರುತಿಸಿಕೊಂಡಿದೆ. ಇಂಡೋನೇಶ್ಯಾದಲ್ಲಿ ಕಳೆದೊಂದು ವಾರದಿಂದ 3.24ಲಕ್ಷಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದು, ಸೋಂಕಿತರ ಪ್ರಮಾಣ ಹಿಂದಿನ ವಾರಕ್ಕಿಂತಲೂ ಶೇ.43ರಷ್ಟು ಹೆಚ್ಚಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ ಒಂದು ವಾರದ ಅವಧಿಯಲ್ಲಿ 2.87 ಲಕ್ಷ ಸೋಂಕಿತರು ಕಂಡುಬಂದಿದ್ದರೆ, ಮೂರನೇ ಸ್ಥಾನದಲ್ಲಿರುವ ಬ್ರಿಟನ್​ನಲ್ಲಿ 2.75 ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆ.

ಇತ್ತ ಭಾರತದಲ್ಲಿ ಒಂದು ವಾರದ ಅವಧಿಯಲ್ಲಿ 2.69 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರ ಹಿಂದಿನ ವಾರಕ್ಕೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಶೇ.8ರಷ್ಟು ಇಳಿಮುಖವಾಗಿದೆ. ಆದರೆ, ನಿನ್ನೆ ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಹೆಚ್ಚಾಗಿದ್ದು, ವಾರದಲ್ಲಿ 2ನೇ ಬಾರಿಗೆ ಈ ಪ್ರಮಾಣದ ಸೋಂಕು ಕಾಣಿಸಿಕೊಂಡಿದೆ. ಶುಕ್ರವಾರ ದೇಶದಲ್ಲಿ 38,019 ಸೋಂಕು ಪತ್ತೆಯಾಗಿದ್ದರೆ ಶನಿವಾರದಂದು ಪ್ರಕರಣಗಳ ಸಂಖ್ಯೆ 41,246 ಕ್ಕೆ ಏರಿದೆ. ಈ ಪೈಕಿ ಕೇರಳದಲ್ಲಿ ಸುಮಾರು 38 ದಿನಗಳ ನಂತರ ಅತ್ಯಧಿಕ ಪ್ರಮಾಣದ ಸೋಂಕು ದಾಖಲಾಗಿದ್ದು ಒಟ್ಟು 16,148 ಹೊಸ ಪ್ರಕರಣಗಳನ್ನು ಗುರುತಿಸಲಾಗಿದೆ. ಇದೆಲ್ಲದರ ಜತೆಜತೆಗೆ ಸಾವಿನ ಪ್ರಮಾಣ ಗಮನಾರ್ಹವಾಗಿ ಇಳಿಕೆಯಾಗುತ್ತಿರುವುದು ಕೊಂಚ ಸಮಾಧಾನ ಮೂಡಿಸಿದೆ.

ಆದರೆ, ಜಾಗತಿಕ ಮಟ್ಟದ ಲೆಕ್ಕಾಚಾರ ತೆಗೆದುಕೊಂಡಾಗ ಕಳೆದೊಂದು ವಾರದಲ್ಲಿ ಸೋಂಕಿತರ ಸಂಖ್ಯೆ ಶೇ.16ರಷ್ಟು ಏರಿಕೆಯಾಗಿದೆ. ಇದು ವಿಶ್ವ ಮಟ್ಟದಲ್ಲಿ ಮೂರನೇ ಅಲೆ ಭೀತಿಯನ್ನು ಮತ್ತೆ ಹೆಚ್ಚಿಸಿದ್ದು ಆಗ್ನೇಯ ಏಷ್ಯಾ ಹಾಗೂ ಯರೋಪ್​ ಪ್ರಾಂತ್ಯದ ಕೆಲ ದೇಶಗಳಲ್ಲಿ ವೇಗವಾಗಿ ಸೋಂಕು ಹಬ್ಬುತ್ತಿರುವುದು ಆತಂಕ ಮೂಡಿಸಿದೆ. ಇಂಡೋನೇಶ್ಯಾದಲ್ಲಿ ಶೇ.43ರಷ್ಟು, ಮಲೇಶಿಯಾದಲ್ಲಿ ಶೇ.45ರಷ್ಟು, ಥೈಲ್ಯಾಂಡ್​ನಲ್ಲಿ ಶೇ.38ರಷ್ಟು, ಮಯನ್ಮಾರ್​ನಲ್ಲಿ ಶೇ.48ರಷ್ಟು ಏರಿಕೆ ಕಂಡಿದೆ. ಈ ಬೆಳವಣಿಗೆಯನ್ನು ನೋಡಿದಾಗ ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತ ವೇಗವಾಗಿ ವ್ಯಾಪಿಸಲಿದೆಯಾ ಎಂಬ ಅನುಮಾನವನ್ನೂ ಕೆಲ ತಜ್ಞರು ಹೊರಹಾಕಿದ್ದಾರೆ.

ಇದನ್ನೂ ಓದಿ: Delta Variant: ಕೊರೊನಾ ಲಸಿಕೆ ಪಡೆದ ನಂತರವೂ ಹಬ್ಬಿದ ಸೋಂಕಿನಲ್ಲಿ ಶೇ.86.09 ಪಾಲು ಡೆಲ್ಟಾ ತಳಿಯದ್ದು – ಐಸಿಎಂಆರ್ 

Corona third Wave: ಆಗಸ್ಟ್​ ಅಂತ್ಯಕ್ಕೆ ಕೊರೊನಾ ಮೂರನೇ ಅಲೆ ನಿಶ್ಚಿತ: ಐಸಿಎಂಆರ್​ ಹಿರಿಯ ವೈದ್ಯ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ