AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: ಒಂದೇ ದಿನ 4,205 ಕೊವಿಡ್ ರೋಗಿಗಳು ಸಾವು, ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

Covid 19 India: ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ. ಮಾರ್ಚ್ 9 ರ ನಂತರ ಈ ರೀತಿ ಇಳಿಕೆ ಕಂಡಿರುವುದು ಇದೇ ಮೊದಲು. ಮಹಾರಾಷ್ಟ್ರದಲ್ಲಿ ಸುಮಾರು 41,000 ಪ್ರಕರಣ ವರದಿಯಾಗಿದೆ. ಇದು ಕಳೆದ ಕೆಲವು ವಾರಗಳಲ್ಲಿ ಸರಾಸರಿಗಿಂತಲೂ ಕಡಿಮೆಯಾಗಿದೆ.

Coronavirus India Update: ಒಂದೇ ದಿನ 4,205 ಕೊವಿಡ್ ರೋಗಿಗಳು ಸಾವು, ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ
ಸಾಂಕೇತಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: May 12, 2021 | 10:46 AM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು 4,205ಮಂದಿ ಮೃತಪಟ್ಟಿದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇಲ್ಲಿಯವರೆಗೆ ಅತೀ ಹೆಚ್ಚು ಕೊವಿಡ್ ರೋಗಿಗಳು ಮೃತಪಟ್ಟ ದಿನವಾಗಿದೆ ಮೇ 11. ದೇಶದಲ್ಲಿ 2,33,40,938 ಕೊವಿಡ್ ರೋಗಿಗಳಿದ್ದು 37,04,099 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಮೃತಪಟ್ಟವರ ಸಂಖ್ಯೆ 2,54,197 ಆಗಿದೆ. ಕಳೆದ 24ಗಂಟೆಗಳಲ್ಲಿ 3,55,338 ರೋಗಿಗಳು ಚೇತರಿಸಿಕೊಂಡಿದ್ದು ಇಲ್ಲಿಯವರೆಗೆ ಚೇತರಿಕೆ ಕಂಡವರ ಸಂಖ್ಯೆ 1,93,82,642 ಆಗಿದೆ.

ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ. ಮಾರ್ಚ್ 9 ರ ನಂತರ ಈ ರೀತಿ ಇಳಿಕೆ ಕಂಡಿರುವುದು ಇದೇ ಮೊದಲು. ಮಹಾರಾಷ್ಟ್ರದಲ್ಲಿ ಸುಮಾರು 41,000 ಪ್ರಕರಣಗಳು ವರದಿಯಾಗಿದೆ. ಇದು ಕಳೆದ ಕೆಲವು ವಾರಗಳಲ್ಲಿ ಸರಾಸರಿಗಿಂತಲೂ ಕಡಿಮೆಯಾಗಿದೆ. ಕರ್ನಾಟಕ, ಕೇರಳ ತಲಾ 40,000 ಪ್ರಕರಣಗಳು ವರದಿಯಾಗಿದೆ. ಮಂಗಳವಾರ ವರದಿಯಾದ 4,205 ಸಾವುಗಳಲ್ಲಿ ಮಹಾರಾಷ್ಟ್ರದಲ್ಲಿ 800 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಮಹಾರಾಷ್ಟ್ರವನ್ನು ಹೊರತುಪಡಿಸಿ ಕರ್ನಾಟಕ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬ್ ಈ ಆರು ರಾಜ್ಯಗಳಲ್ಲಿ ದಿನಕ್ಕೆ 200 ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ.

ದೇಶದ 700 ಜಿಲ್ಲೆಗಳ ಪೈಕಿ 533 ರಷ್ಟು ಜಿಲ್ಲೆಗಳಲ್ಲಿ ಈಗ ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಗ್ರಾಮೀಣ ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವ್ಯಾಪಕ ಹರಡುವಿಕೆಯೂ ಇದೆ. ಒಟ್ಟು 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ; ಆರು ರಾಜ್ಯಗಳಲ್ಲಿ 50,000 ರಿಂದ 1 ಲಕ್ಷ ಸಕ್ರಿಯ ಪ್ರಕರಣಗಳಿವೆ; ಮತ್ತು 17 ರಾಜ್ಯಗಳಲ್ಲಿ 50,000 ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಸರ್ಕಾ ತಿಳಿಸಿದೆ. ದೇಶಾದ್ಯಂತ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 37 ಲಕ್ಷಕ್ಕಿಂತ ಹೆಚ್ಚಾಗಿದೆ.

ಅಲ್ಲದೆ, ಸರ್ಕಾರದ ಇತ್ತೀಚಿನ ಮಾಹಿತಿಯ ಪ್ರಕಾರ ಕೊವಿಡ್ ಪಟ್ಟಿಯ ಅಗ್ರಸ್ಥಾನದಲ್ಲಿರುವ ಐದು ರಾಜ್ಯಗಳು ದೇಶದ ಒಟ್ಟು ಸಕ್ರಿಯ ಪ್ರಕರಣದ ಪೈಕಿ ಶೇ 54ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿವೆ. ಕೇಂದ್ರ ಸರ್ಕಾರವು 33 ರಾಜ್ಯ ಮತ್ತು ಕೇಂದ್ರಾಡಳಿತಪ್ರದೇಶಗಳಿಗೆ ನಿಗದಿಪಡಿಸಿದ ದ್ರವ ವೈದ್ಯಕೀಯ ಆಮ್ಲಜನಕದ (ಎಲ್‌ಎಂಒ) ಕೇವಲ 42 ಶೇಕಡಾವನ್ನು ಮಾತ್ರ ಇವುಗಳು ಪಡೆಯುತ್ತವೆ.

ಮತ್ತೊಂದೆಡೆ, ಕೇರಳ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಗೋವಾದಂತಹ ರಾಜ್ಯಗಳಲ್ಲಿ ದೈನಂದಿನ ಪ್ರಕರಣಗಳ ಹೆಚ್ಚುತ್ತಿವೆ ವರದಿ ಮಾಡುತ್ತಿವೆ. ಸುಮಾರು 26 ರಾಜ್ಯಗಳು ಇನ್ನೂ ಶೇ 15 ಕ್ಕಿಂತ ಹೆಚ್ಚು ಪಾಸಿಟಿವಿಟಿದರ ಹೊಂದಿವೆ. ಅವುಗಳಲ್ಲಿ ಒಂಬತ್ತು ಶೇ 25 ರಷ್ಟು ಪಾಸಿಟಿವಿಟಿ ದರ ಹೊಂದಿದ್ದು ಕಟ್ಟು ನಿಟ್ಟಿನ ಕ್ರಮಗಳು ಮುಂದುವರಿಯಲಿರುವ ಸಾಧ್ಯತೆಯನ್ನು ತೋರಿಸುತ್ತದೆ. ದೇಶದಲ್ಲಿ ಪಾಸಿಟಿವಿಟಿ ದರ ಸುಮಾರು ಶೇ 21 ರಷ್ಟಿದೆ ಮತ್ತು ಸುಮಾರು ಶೇ 42 (310/734) ಜಿಲ್ಲೆಗಳು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು ಪಾಸಿಟಿವಿಟಿ ದರವನ್ನು ವರದಿ ಮಾಡಿವೆ.

ಹೊಸ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿರುವ 18 ರಾಜ್ಯಗಳಲ್ಲಿ ದೆಹಲಿ, ಮಹಾರಾಷ್ಟ್ರವೂ ಇದೆ ಆಂಧ್ರಪ್ರದೇಶ, ಬಿಹಾರ, ಹರ್ಯಾಣ ಮತ್ತು ಉತ್ತರಾಖಂಡದಂತಹ ಹೆಚ್ಚಿನ ರಾಜ್ಯಗಳು ಕೊವಿಡ್ -19 ರ ಹೊಸ ಪ್ರಕರಣಗಳು ಕ್ಷೀಣಿಸುತ್ತಿರುವ ಆರಂಭಿಕ ಪ್ರವೃತ್ತಿಯನ್ನು ತೋರಿಸುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ, ಕಳೆದ ಹದಿನೈದು ದಿನಗಳ ಪ್ರಕರಣಗಳನ್ನು ಅವಲೋಕಿಸಿದಾಗ ಕಂಟೇನ್ಮೆಂಟ್, ದೈಹಿಕ ಅಂತರ ,ಮಾಸ್ಕ್ ಮೊದಲಾದ ಕ್ರಮಗಳನ್ನು ಅನುಸರಿಸಿದರೆ ಪ್ರಕರಣಗ ಸಂಖ್ಯೆ ಕಡಿಮೆ ಮಾಡಬಹುದು ಎಂದು ಸಚಿವಾಲಯ ಹೇಳಿದೆ.

ಪ್ರಸ್ತುತ, 18 ರಾಜ್ಯಗಳನ್ನು ಹೊಸ ಪ್ರಕರಣಗಳ ಇಳಿಕೆ ಕಂಡುಬಂದಿದೆ. ಕಳೆದ ವರಾ ಇಳಿಕೆ ಕಂಡು ಬಂದ ಗೋವಾದಲ್ಲಿ ಮತ್ತೆ ಪ್ರಕರಣಗಳು ಹೆಚ್ಚಿವೆ . ಮುಖ್ಯವಾಗಿ, ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಛತ್ತೀಸಗಡ ಮತ್ತು ಗುಜರಾತ್ ಹೊಸ ಕೊವಿಡ್ 19 ಪ್ರಕರಣಗಳಲ್ಲಿ ಇಳಿಕೆ ತೋರಿಸುತ್ತಿವೆ.

ಇದನ್ನೂ ಓದಿ: ಎನ್​​440ಕೆ ಕೊವಿಡ್ ರೂಪಾಂತರದ ಬಗ್ಗೆ ಜನರಲ್ಲಿ ಭಯ ಹುಟ್ಟಿಸಿದ ಆರೋಪ; ಚಂದ್ರಬಾಬು ನಾಯ್ಡು ವಿರುದ್ಧ ಎಫ್​ಐಆರ್​

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

(Coronavirus India reported 348421 new Covid-19 cases and 4205 deaths in the last 24 hours)

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು