ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣ ಶೇ 70ರಷ್ಟು ಇಳಿಕೆ: ಲವ್ ಅಗರ್ವಾಲ್

ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣ ಶೇ 70ರಷ್ಟು ಇಳಿಕೆ: ಲವ್ ಅಗರ್ವಾಲ್
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್

ಕಳೆದ ಮೇ 7ರಂದು ಕೊರೊನಾ ಸೋಂಕು ಉನ್ನತ ಹಂತದಲ್ಲಿತ್ತು. ಅಲ್ಲಿಂದಾಚೆಗೆ ಸೋಂಕು ಸತತವಾಗಿ ಕಡಿಮೆಯಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ಗೆ 2ನೇ ಡೋಸ್ ನೀಡಲು ರಾಜ್ಯಗಳು ಆದ್ಯತೆ ನೀಡಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Jun 11, 2021 | 7:00 PM

ದೆಹಲಿ: ಭಾರತದ 196 ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ ಶೇ 70ರಷ್ಟು ಕಡಿಮೆಯಾಗಿದೆ ಎಂದು ದೆಹಲಿಯಲ್ಲಿ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ.

ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಒಟ್ಟು ಸೋಂಕಿತರ ಸಂಖ್ಯೆ ಕಳೆದ ನಾಲ್ಕು ದಿನಗಳಿಂದ ಒಂದು ಲಕ್ಷಕ್ಕೂ ಕಡಿಮೆಯಾಗಿದೆ. ದೇಶಾದ್ಯಂತ ಹೊಸ ಪ್ರಕರಣಗಳ ಪತ್ತೆ ಕಡಿಮೆಯಾಗಿದೆ. ಸೋಂಕಿತರು ಗುಣಮುಖರಾಗುವ ಪ್ರಮಾಣವೂ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ರಿಕವರಿ ರೇಟ್ ಶೇ 94.9ರಷ್ಟು ಇದೆ. 4 ದಿನಗಳಿಂದ ಪಾಸಿಟಿವಿಟಿ ರೇಟ್ ಶೇ 5ಕ್ಕಿಂತ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಮೇ 7ರಂದು ಕೊರೊನಾ ಸೋಂಕು ಉನ್ನತ ಹಂತದಲ್ಲಿತ್ತು. ಅಲ್ಲಿಂದಾಚೆಗೆ ಸೋಂಕು ಸತತವಾಗಿ ಕಡಿಮೆಯಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ಗೆ 2ನೇ ಡೋಸ್ ನೀಡಲು ರಾಜ್ಯಗಳು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜನರಲ್ಲಿ ಪ್ರತಿಕಾಯಗಳು ಎಷ್ಟರಮಟ್ಟಿಗೆ ಉತ್ಪತ್ತಿಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ರಾಷ್ಟ್ರೀಯ ಸೆರೊ ಸಮೀಕ್ಷೆ ಇದೇ ತಿಂಗಳಲ್ಲಿ ಆರಂಭವಾಗುವ ಸಾಧ್ಯತೆಯಿದೆ. ರಾಜ್ಯಗಳು ಸಹ ರಾಜ್ಯವಾರು ಸೆರೊ ಸರ್ವೆ ನಡೆಸಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದರು.

(Coronavirus Infection Declining in India From May 7 says Govt India Health Ministry)

ಇದನ್ನೂ ಓದಿ: ರಾಜ್ಯಗಳ ಬಳಿ 1.17 ಕೋಟಿ ಡೋಸ್ ಕೊವಿಡ್ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಇಲಾಖೆ

ಇದನ್ನೂ ಓದಿ: ಕೊರೊನಾ ಲಸಿಕೆ ಎರಡನೇ ಡೋಸ್​ ಪಡೆಯುವವರ ಗಮನಕ್ಕೆ: ನಿಮಗೆ ನಿಗದಿಪಡಿಸಿರುವ ದಿನಾಂಕವನ್ನು ಹೆಚ್ಚು ಮುಂದೂಡಬೇಡಿ

Follow us on

Most Read Stories

Click on your DTH Provider to Add TV9 Kannada