ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ, ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿ

Night curfew and restrictions imposed: ಕೊರೊನಾ ಸೋಂಕು ಹರಡುವ ವೇಗಕ್ಕೆ ತಡೆಯೊಡ್ಡುವ ಉದ್ದೇಶದಿಂದ ದೇಶದ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿಗೊಳಿಸಿ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ.

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ, ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿ
ಲಾಕ್​ಡೌನ್ (ಸಂಗ್ರಹ ಚಿತ್ರ)
Follow us
|

Updated on:Apr 08, 2021 | 5:22 PM

ದೆಹಲಿ: ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ, ಮಧ್ಯ ಪ್ರದೇಶ ಸೇರಿದಂತೆ ಭಾರತದ ವಿವಿಧೆಡೆ ಕೊರೊನಾ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ. ಕೊರೊನಾ ಸೋಂಕು ಹರಡುವ ವೇಗಕ್ಕೆ ತಡೆಯೊಡ್ಡುವ ಉದ್ದೇಶದಿಂದ ದೇಶದ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿಗೊಳಿಸಿ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ. ದೇಶದ ಕೊರೊನಾ ಹಾಟ್​ಸ್ಪಾಟ್ ಆಗಿ ಹೊರಹೊಮ್ಮಿರುವ ಛತ್ತೀಸಗಡದ ರಾಜಧಾನಿ ರಾಯಪುರದಲ್ಲಿ ಏಪ್ರಿಲ್ 9ರಿಂದ 19ರವರೆಗೆ 10 ದಿನಗಳ ಅವಧಿಗೆ ಸಂಪೂರ್ಣ ಲಾಕ್​ಡೌನ್ ಮಾಡಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ.

ಒಡಿಶಾದ ಸುಂದರಗಡ, ಬಾರಾಗಡ, ಝುರ್ಸುಗಡ, ಸಾಂಬಾಲ್​ಪುರ, ಬಾಲಂಗೀರ್, ನುಪಾದ, ಕಾಳಹಂದಿ, ಮಲ್ಕಾನ್​ಗಿರಿ, ಕೊರಾಪುಟ್ ಮತ್ತು ನಬರಂಗ್​ಪುರ ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ನಗರಗಳಲ್ಲಿ ಭಾನುವಾರ ನೈಟ್​ಕರ್ಫ್ಯೂ ಮತ್ತು ಲಾಕ್​ಡೌನ್ ಘೋಷಿಸಲಾಗಿದೆ. ಛತ್ತೀಸಗಡಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಏಪ್ರಿಲ್ 30ರವರೆಗೆ ರಾಜ್ಯದಲ್ಲಿ ರಾಜಕೀಯ ಸಮಾವೇಶಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಇಡೀ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಸಲು ಪಂಜಾಬ್ ನಿರ್ಧರಿಸಿದೆ.

ಉತ್ತರ ಪ್ರದೇಶದ ಲಖನೌ, ವಾರಣಾಸಿ, ಕಾನ್ಪುರ ನಗರಗಳಲ್ಲಿ ಏಪ್ರಿಲ್ 8ರಿಂದ 16ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ. ಈ ನಗರಗಳಲ್ಲಿ ಏಪ್ರಿಲ್ 8ರ ರಾತ್ರಿ 9ರಿಂದ ಏಪ್ರಿಲ್ 16ರ ಬೆಳಿಗ್ಗೆ 6ರವರೆಗೆ ನಿರ್ಬಂಧದ ಆದೇಶ ಜಾರಿಯಲ್ಲಿರುತ್ತದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್, ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಈ ಅವಧಿಯಲ್ಲಿ ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ನೊಯ್ಡಾ, ಗಾಜಿಯಾಬಾದ್​ನಲ್ಲಿ ಏಪ್ರಿಲ್ 17ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನಿರ್ಬಂಧದ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ. ಏಪ್ರಿಲ್ 10ರಿಂದ ಎಲ್ಲ ರೀತಿಯ ಧಾರ್ಮಿಕ ಸಮಾವೇಶಗಳನ್ನು ತಮಿಳುನಾಡು ನಿಷೇಧಿಸಿದೆ. ಚಿತ್ರಮಂದಿರಗಳಲ್ಲಿ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಪ್ರವೇಶಾವಕಾಶ ಸಿಗಲಿದೆ. ಡೆಹ್ರಾಡೂನ್​​ನ ಪ್ರತಿಷ್ಠಿತ ಡೂನ್​ ಶಾಲೆಯ 12 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಡೂನ್ ಶಾಲೆಯನ್ನು ಕಂಟೇನ್​ಮೆಂಟ್​ ವಲಯ ಎಂದು ಘೋಷಿಸಲಾಗಿದೆ. ಶಾಲೆಯ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.

ಲಾಕ್​ಡೌನ್ ಖಂಡಿಸಿ ಸಾಮೂಹಿಕ ಕೇಶಮುಂಡನ ಮಹಾರಾಷ್ಟ್ರದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಲಾಕ್​ಡೌನ್ ಜಾರಿ ಮಾಡಿರುವುದರಿಂದ ಕಂಗಾಲಾಗಿರುವ ಔರಂಗಾಬಾದ್​ ವ್ಯಾಪಾರಿಗಳು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಕ್ಷೌರಿಕರೂ ಸಹ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು ಸರ್ಕಾರದ ಪ್ರತಿಕೃತಿ ದಹಿಸಲು ನಿರ್ಧರಿಸಿದ್ದಾರೆ. ಏಪ್ರಿಲ್ 14ರಂದು ಗಂಟೆಗಳನ್ನು ಹೊಡೆಯುವ ಮೂಲಕ ಮತ್ತು ಏಪ್ರಿಲ್ 22ರಂದು ಸಾಮೂಹಿಕ ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ಸರ್ಕಾರದ ನಿರ್ಧಾರವನ್ನು ವಿರೋಧಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚು ಸೋಂಕಿತರು ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಛತ್ತೀಸಗಡದಲ್ಲಿ ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10,000 ಗಡಿದಾಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 1,29,28,574ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ. ಈ ಪೈಕಿ 8,43,473 ಸಕ್ರಿಯ ಪ್ರಕರಣಗಳಿದ್ದು 1,18,51,393 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 1,66,862 ಮಂದಿ ಸಾವಿಗೀಡಾಗಿದ್ದಾರೆ. 9,01,98,673 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 59,258 ಮಂದಿ ಚೇತರಿಸಿಕೊಂಡಿದ್ದು 685 ಮಂದಿ ಮೃತಪಟ್ಟಿದ್ದಾರೆ.

ಅನುದಾನಕ್ಕೆ ಸೆರಮ್ ಇನ್​ಸ್ಟಿಟ್ಯೂಟ್ ಮನವಿ ಈ ನಡುವೆ ದೇಶದಲ್ಲಿ ಲಸಿಕೆ ಕೊರತೆಯ ವಿವಾದ ಸಹ ಮುಂದುವರಿದಿದೆ. ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದಕ ಸಂಸ್ಥೆ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ತುರ್ತಾಗಿ ₹ 3000 ಕೋಟಿ ಬಿಡುಗಡೆ ಮಾಡಬೇಕೆಂದು ಬೇಡಿಕೆಯಿಟ್ಟಿದೆ. ಇಷ್ಟು ಅನುದಾನ ನೀಡಿದರೆ ಆಸ್ಟ್ರಾಜೆನೆಕಾ ಲಸಿಕೆ ಉತ್ಪಾದನೆಯ ಪ್ರಮಾಣ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

(Coronavirus infection high in Maharashtra Odisha other states Night curfew and restrictions imposed in more parts of the India)

ಇದನ್ನೂ ಓದಿ: Covid-19 India Update: ಭಾರತದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು, ಗುರುವಾರ ಮುಖ್ಯಮಂತ್ರಿಗಳೊಂದಿಗೆ ನರೇಂದ್ರ ಮೋದಿ ಸಭೆ

ಇದನ್ನೂ ಓದಿ: Covid-19 vaccination: ಲಸಿಕೆಗೆ ವಯೋಮಿತಿ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ

Published On - 5:20 pm, Thu, 8 April 21

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?