ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ

ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Feb 18, 2021 | 8:31 PM

ನಾಗಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾದ ಕಾರಣ ಫೆ.20ರ ರಾತ್ರಿ 8ರಿಂದ ಫೆ.22ರ ಬೆಳಿಗ್ಗೆ 7 ಗಂಟೆಯವರೆಗೂ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಲಾಗಿದೆ. ಶನಿವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಮಾರುಕಟ್ಟೆಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ದಿಲೀಪ್ ರಾನ್​ಮಲೆ ಹೇಳಿದ್ದಾರೆ.

ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ. ಮಹಾರಾಷ್ಟ್ರದ ಅಮರಾವತಿ, ಯವತ್ಮಾಳ, ಅಕೋಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಕಳೆದ ಕೆಲದಿನಗಳಿಂದ ಹೆಚ್ಚಾಗುತ್ತಿದೆ. ಅಮರಾವತಿಯಲ್ಲಿ ಸೋಂಕು ಹರಡುತ್ತಿರುವ ವೇಗ ಅಧಿಕಾರಿಗಳಲ್ಲಿ ಆತಂಕ ಉಂಟುಮಾಡಿದೆ.

ಎರಡು ದಿನಗಳ ಹಿಂದಷ್ಟೇ ಅಮರಾವತಿಯಲ್ಲಿ ಜಿಲ್ಲಾಡಳಿತ ರಾತ್ರಿ ಕರ್ಫ್ಯೂ ವಿಧಿಸಿತ್ತು. ಅಕೋಲಾದಲ್ಲಿ ತಪಾಸಣೆ ಮಾಡಿದ ಶೇ 40ರಷ್ಟು ಮಾದರಿಗಳು ಪಾಸಿಟಿವ್ ಬಂದಿವೆ. ಹೀಗಾಗಿ ಅಲ್ಲಿಯೂ ಫೆಬ್ರುವರಿ 28ರವರೆಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಅಕೋಲದಲ್ಲಿ ನಿರ್ಬಂಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ ಮೆರವಣಿಗೆಗಳು, ಹಬ್ಬ, ಸಾರ್ವಜನಿಕ ಸಮಾರಂಭ ಮತ್ತು ಮದುವೆಗಳಲ್ಲಿ ಕೇವಲ 50 ಜನರು ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್​ ಕೇಂದ್ರಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಕೊವಿಡ್​-19 ಸೋಂಕು ಪತ್ತೆ ಹಚ್ಚಲು ನಾಯಿಗಳಿಗೆ ತರಬೇತಿ ನೀಡಿದ ಭಾರತೀಯ ಸೇನೆ

ಇದನ್ನೂ ಓದಿ: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

Published On - 7:54 pm, Thu, 18 February 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ