Covid 19 India Update: ಭಾರತದಲ್ಲಿ 6594 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, ಕೊವಿಡ್​ನಿಂದ 10 ಸಾವು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 14, 2022 | 11:51 AM

ದೇಶದಲ್ಲಿ ಪ್ರಸ್ತುತ 47,995 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣದ ಸರಾಸರಿಯು ಶೇ 2.71 ಇದೆ.

Covid 19 India Update: ಭಾರತದಲ್ಲಿ 6594 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, ಕೊವಿಡ್​ನಿಂದ 10 ಸಾವು
ಸಾಂಕೇತಿಕ ಚಿತ್ರ
Follow us on

ದೆಹಲಿ: ಭಾರತದಲ್ಲಿ ಮಂಗಳವಾರ (ಜೂನ್ 14) ಹೊಸದಾಗಿ 6,594 ಮಂದಿಗೆ ಕೊರೊನಾ ಸೋಂಕು (Coronavirus Infection) ಕಾಣಿಸಿಕೊಂಡಿದೆ. ಸೋಮವಾರ 8,084 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದಕ್ಕೆ ಹೋಲಿಸಿದರೆ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಕೊರೊನಾ ಸೋಂಕು ದೃಢಪಟ್ಟಿದ್ದವರ ಒಟ್ಟು ಸಂಖ್ಯೆ 4,32,30,101 ಮುಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ 10 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆಯು 5,24,771 ಆಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ದೇಶದಲ್ಲಿ ಪ್ರಸ್ತುತ 50,448 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣದ ಸರಾಸರಿಯು ಶೇ 2.05 ಇದೆ. ಚೇತರಿಕೆ ಪ್ರಮಾಣವು ಶೇ 98.68 ಇದೆ. ದೇಶದಲ್ಲಿ ಈವರೆಗೆ 195 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮತ್ತೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ (ಜೂನ್ 13) ರಾಜ್ಯದಲ್ಲಿ 415 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬೆಂಗಳೂರಿನಲ್ಲಿಯೇ 400 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ ಐದು, ಕಲಬುರಗಿ ಮೂರು ಹಾಗೂ ಬಳ್ಳಾರಿಯ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಬೆಳಗಾವಿ, ಧಾರವಾಡ, ಕೋಲಾರ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆಯು 39,56,749ಕ್ಕೆ ಮುಟ್ಟಿದೆ. ಪ್ರಸ್ತುತ ರಾಜ್ಯದಲ್ಲಿ 3,688 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ಈವರೆಗೆ ಒಟ್ಟು 40,066 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದರೆ, 39,12,953 ಜನರು ಚೇತರಿಸಿಕೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 am, Tue, 14 June 22