ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ: 9 ದಿನಗಳಲ್ಲಿ ಕೋವಿಡ್ ಪ್ರಕರಣ ದ್ವಿಗುಣ

ದೇಶದಲ್ಲಿ ಸಕ್ರಿಯ ಕೊರೊನಾ ರೋಗಿಗಳ ಸಂಖ್ಯೆ 1970ಕ್ಕೆ ತಲುಪಿದೆ. ಮಂಗಳವಾರ 142 ಹೊಸ ಪ್ರಕರಣಗಳು ವರದಿಯಾಗಿವೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಜ್ಯಗಳೊಂದಿಗೆ ಪರಿಶೀಲನಾ ಸಭೆಯನ್ನು ಕರೆದಿದ್ದಾರೆ. ಇದರಲ್ಲಿ ಆರೋಗ್ಯ ಸೌಲಭ್ಯಗಳು ಮತ್ತು ಸೋಂಕು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ: 9 ದಿನಗಳಲ್ಲಿ ಕೋವಿಡ್ ಪ್ರಕರಣ ದ್ವಿಗುಣ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Dec 20, 2023 | 9:18 AM

ನವದೆಹಲಿ, ಡಿಸೆಂಬರ್ 20: ಕೊರೊನಾ ವೈರಸ್ (Coronavirus) ದೇಶದಲ್ಲಿ ಮತ್ತೊಮ್ಮೆ ಹರಡುತ್ತಿದೆ. ಕೊರೊನಾದ ಹೊಸ ರೂಪಾಂತರ JN.1, ಜನರಲ್ಲಿ ಭೀತಿಯನ್ನು ಸೃಷ್ಟಿಸಿದೆ. ಏತನ್ಮಧ್ಯೆ, ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು (ಬುಧವಾರ) ರಾಜ್ಯಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಇದರಲ್ಲಿ ಆರೋಗ್ಯ ಸಚಿವರು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಸೇರಿದಂತೆ ಅನೇಕ ಜನರು ಭಾಗವಹಿಸಲಿದ್ದಾರೆ. ಆರೋಗ್ಯ ಸೌಲಭ್ಯಗಳು ಮತ್ತು ಸನ್ನದ್ಧತೆ ಹಾಗೂ ಸೋಂಕು ತಡೆಗಟ್ಟುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕೇರಳ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 115 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಂತರ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 1,749 ಕ್ಕೆ ಏರಿದೆ. ಮಹಾರಾಷ್ಟ್ರ, ಗೋವಾ, ಉತ್ತರ ಪ್ರದೇಶದಲ್ಲೂ ಕೋವಿಡ್ ಪ್ರಕರಣಗಳು ವರದಿಯಾಗಿವೆ, ಮಹಾರಾಷ್ಟ್ರದಲ್ಲಿ ಜೆಎನ್.1 ರ 18 ಮತ್ತು ಗೋವಾದಲ್ಲಿ 18 ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1970ಕ್ಕೆ ತಲುಪಿದೆ. ಕಳೆದ 9 ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಗುಣಗೊಂಡಿದೆ.

ಆದರೆ, ಆತಂಕ ಪಡುವ ಅಗತ್ಯವಿಲ್ಲ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ರಾಜ್ಯ ಸರ್ಕಾರ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದೆ. ಸೋಂಕು ತಡೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ. ಸೋಂಕಿನ ಲಕ್ಷಣಗಳನ್ನು ತೋರಿಸುವ ಜನರನ್ನು ಪರೀಕ್ಷಿಸಲು ಮತ್ತು ಅವರ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ದೆಹಲಿಯಲ್ಲಿ ಮಾಸ್ಕ್ ಧರಿಸಲು, ಜನಸಂದಣಿಯನ್ನು ತಪ್ಪಿಸಲು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸಲು ಜನರಿಗೆ ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ

ಕೊರೊನಾ ಜೆಎನ್​1 ರೂಪಾಂತರದ ಮೊದಲ ಪ್ರಕರಣವು ಡಿಸೆಂಬರ್ 8 ರಂದು ಕೇರಳದಲ್ಲಿ ಕಂಡುಬಂದಿತ್ತು. 79 ವರ್ಷದ ಮಹಿಳೆಯಲ್ಲಿ ಈ ಸೋಂಕು ಪತ್ತೆಯಾಗಿತ್ತು. ಮತ್ತೊಂದೆಡೆ, ವಿದೇಶದಲ್ಲಿಯೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಸಿಂಗಾಪುರದಲ್ಲಿ ಒಂದು ವಾರದಲ್ಲಿ 56 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಮಲೇಷ್ಯಾ ಮತ್ತು ಇಂಡೋನೇಷ್ಯಾದಲ್ಲಿ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ