AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಬೆಂಗಳೂರಿನಲ್ಲಿ 27 ಸಕ್ರಿಯ ಕ್ಲಸ್ಟರ್​ಗಳು

ಕರ್ನಾಟಕದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಜೂನ್ 19) ರಾಜ್ಯದಲ್ಲಿ ಒಟ್ಟು 623 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಭಾರತದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಬೆಂಗಳೂರಿನಲ್ಲಿ 27 ಸಕ್ರಿಯ ಕ್ಲಸ್ಟರ್​ಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 20, 2022 | 7:08 AM

Share

ದೆಹಲಿ: ಭಾರತದಲ್ಲಿ ಭಾನುವಾರ ಒಟ್ಟು 12,899 ಮಂದಿಯಲ್ಲಿ ಕೊರೊನಾ ಸೋಂಕು (Coronavirus) ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 72,474 ಸಕ್ರಿಯ ಪ್ರಕರಣಗಳಿವೆ (Active Cases). ದೇಶದಲ್ಲಿ ಈವರೆಗೆ ಒಟ್ಟು 4,32,96,692 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು 5,24,855 ಮಂದಿ ಮೃತಪಟ್ಟಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ (Positivity Rate) ಶೇ 2.89, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.50 ಇದೆ. ಚೇತರಿಕೆ ಪ್ರಮಾಣ ಶೇ 98.62 ಇದೆ.

ಕರ್ನಾಟಕದಲ್ಲಿ 623 ಹೊಸ ಪ್ರಕರಣಗಳು

ಕರ್ನಾಟಕದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಜೂನ್ 19) ರಾಜ್ಯದಲ್ಲಿ ಒಟ್ಟು 623 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,60,831 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ 40,071 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 5,035 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ವರದಿಯಾಗಿರುವ 623 ಸೋಂಕು ಪ್ರಕರಣಗಳ ಪೈಕಿ ಬೆಂಗಳೂರು ನಗರ ಒಂದರಲ್ಲಿಯೇ 588 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. 19 ಜಿಲ್ಲೆಗಳಲ್ಲಿ ಹೊಸ ಕೊವಿಡ್ ಪ್ರಕರಣ ಕಂಡುಬಂದಿಲ್ಲ. ದಕ್ಷಿಣ ಕನ್ನಡದಲ್ಲಿ 19, ಮೈಸೂರಿನಲ್ಲಿ 6, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು 23,170 ವ್ಯಕ್ತಿಗಳಿಂದ ಸಂಗ್ರಹಿಸಿದ ಮಾದರಿಗಳನ್ನು ನಿನ್ನೆ ಪರೀಕ್ಷಿಸಲಾಯಿತು.

ಕಳೆದ ಮೇ 20ರ ನಂತರ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 2.68ಕ್ಕೆ ಮುಟ್ಟಿದೆ. ಬೆಂಗಳೂರು ನಗರದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಪ್ರಸ್ತುತ ನಗರ ವ್ಯಾಪ್ತಿಯಲ್ಲಿ 27 ಸಕ್ರಿಯ ಕ್ಲಸ್ಟರ್​ಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿ 129 ವಾರ್ಡ್​ಗಳಲ್ಲಿ 10ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಸೋಂಕು ನಿಯಂತ್ರಣಕ್ಕೆಂದು ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 am, Mon, 20 June 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ