West Bengal Elections 2021: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳ!

ಪಶ್ಚಿಮ ಬಂಗಾಳದಲ್ಲಿ ಯಾವುದೇ ರ‍್ಯಾಲಿ, ಪಾದಯಾತ್ರೆ ಅಥವಾ ರೋಡ್​ ಶೋಗಳು ನಡೆಯುವಂತಿಲ್ಲ ಎಂದು ಚುನಾವಣಾ ಆಯೋಗವು ಏಪ್ರಿಲ್ 22ಕ್ಕೆ ಸಂಜೆ ಘೋಷಿಸಿದೆ. ಕೊರೊನಾ ವಿಚಾರದಲ್ಲಿ ಚುನಾವಣಾ ಆಯೋಗದ ವರ್ತನೆಯನ್ನು ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ತರುವಾಯ ಆಯೋಗ ಈ ಆದೇಶ ಹೊರಡಿಸಿತ್ತು.

West Bengal Elections 2021: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳ!
ಪ್ರಾತಿನಿಧಿಕ ಚಿತ್ರ
Follow us
|

Updated on:Apr 24, 2021 | 7:59 AM

ಕೋಲ್ಕತ್ತಾ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 23 ರಂದು ಕೊರೊನಾ ಪಾಸಿಟಿವ್ ದರ ಶೇ.25ಕ್ಕೆ ಏರಿದೆ. ಬಹುತೇಕ 75 ಸಾವಿರಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು ಏರಿಕೆಯಾಗಿದೆ.

ಚುನಾವಣಾ ಆಯೋಗದ ಘೋಷಣೆ ಪಶ್ಚಿಮ ಬಂಗಾಳದಲ್ಲಿ ಯಾವುದೇ ರ‍್ಯಾಲಿ, ಪಾದಯಾತ್ರೆ ಅಥವಾ ರೋಡ್​ ಶೋಗಳು ನಡೆಯುವಂತಿಲ್ಲ ಎಂದು ಚುನಾವಣಾ ಆಯೋಗವು ಏಪ್ರಿಲ್ 22ಕ್ಕೆ ಸಂಜೆ ಘೋಷಿಸಿದೆ. ಕೊರೊನಾ ವಿಚಾರದಲ್ಲಿ ಚುನಾವಣಾ ಆಯೋಗದ ವರ್ತನೆಯನ್ನು ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ತರುವಾಯ ಆಯೋಗ ಈ ಆದೇಶ ಹೊರಡಿಸಿತ್ತು. ರ‍್ಯಾಲಿ ಮತ್ತು ಪಾದಯಾತ್ರೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಈ ಹಿಂದೆ ನೀಡಿದ್ದ ಎಲ್ಲ ಆದೇಶ, ಅನುಮತಿಗಳು ಇದೀಗ ರದ್ದಾಗಲಿವೆ. ಯಾವುದೇ ಸಭೆಯಲ್ಲಿ 500 ಜನರಿಗಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ರ‍್ಯಾಲಿಗಳು ಕೊರೊನಾ ಸೋಂಕು ವೇಗವಾಗಿ ಹರಡಲು ಸೂಪರ್ ಸ್ಪ್ರೆಡರ್​ಗಳಾಗಿ ಕೆಲಸ ಮಾಡಬಲ್ಲವು ಎಂಬ ಆತಂಕ ವ್ಯಕ್ತವಾದ ಹಿನ್ನಲೆಯಲ್ಲಿ ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಚುನಾವಣಾ ಪ್ರಚಾರದಿಂದ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಚುನಾವಣಾ ಆಯೋಗ ತೆಗೆದುಕೊಂಡ ಕ್ರಮಗಳನ್ನು ನಾಳೆಯೊಳಗೆ (ಏಪ್ರಿಲ್ 23) ತಿಳಿಸಬೇಕೆಂದು, ಕಾರ್ಯಪಾಲನಾ ವರದಿ ಸಲ್ಲಿಸಬೇಕೆಂದು ಸೂಚಿಸಿತ್ತು. ಒಂದು ವೇಳೆ ಚುನಾವಣಾ ಆಯೋಗವು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ವಿಫಲವಾದರೆ, ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ನ್ಯಾಯಮೂರ್ತಿಗಳು ಕಟುನುಡಿಗಳಲ್ಲಿ ಹೇಳಿದ್ದರು.

ಇದನ್ನೂ ಓದಿ

ಕೊವಿಡ್-19 ಪಿಡುಗಿನ ಎರಡನೇ ಅಲೆ ಕೊನೆಗೊಂಡ ನಂತರ ಮೂರನೇ ಅಲೆ ಎದುರಿಸಲು ಸಿದ್ಧರಾಗಿರಬೇಕು: ಡಾ ವಿವೇಕ್ ಜವಳಿ

ರೆಮ್​ಡೆಸಿವಿರ್ ಇಂಜೆಕ್ಷನ್​ 25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ

Coronavirus positive cases increased in West Bengal from election rally

Published On - 7:56 am, Sat, 24 April 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ