AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೊವಿಡ್​ 19 ನಿಯಂತ್ರಣ ನಿಯಮ ಉಲ್ಲಂಘಿಸಿದವರಿಗೆ ವಿಧಿಸಲಾದ ದಂಡದ ಮೊತ್ತ ಬರೋಬ್ಬರಿ 350 ಕೋಟಿ ರೂ. !

ದೇಶದಲ್ಲಿ 2020ರಲ್ಲಿ ಮೊಟ್ಟಮೊದಲು ಕೊರೊನಾ ಕೇಸ್​ ಪತ್ತೆಯಾಗಿದ್ದು ಕೇರಳದಲ್ಲಿ. ಚೀನಾದಿಂದ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಬಳಿಕ ವೇಗವಾಗಿ ಹರಡಿತ್ತು.

ಕೇರಳದಲ್ಲಿ ಕೊವಿಡ್​ 19 ನಿಯಂತ್ರಣ ನಿಯಮ ಉಲ್ಲಂಘಿಸಿದವರಿಗೆ ವಿಧಿಸಲಾದ ದಂಡದ ಮೊತ್ತ ಬರೋಬ್ಬರಿ 350 ಕೋಟಿ ರೂ. !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 24, 2022 | 4:41 PM

Share

ಕೇರಳದಲ್ಲಿ (Kerala) ಕಳೆದ ಎರಡು ವರ್ಷದಲ್ಲಿ ಕೊವಿಡ್ 19 (Covid 19) ಮಾರ್ಗಸೂಚಿ ಉಲ್ಲಂಘನೆ ಮಾಡಿದವರಿಗೆ ವಿಧಿಸಿದ ದಂಡದ ಮೊತ್ತ ಬರೋಬ್ಬರಿ 350 ಕೋಟಿ ರೂಪಾಯಿ. ಇದರಲ್ಲಿ ಸುಮಾರು 214 ಕೋಟಿ ರೂಪಾಯಿ ದಂಡವನ್ನು ಮಾಸ್ಕ್ ಧರಿಸದೆ ಇರುವುದಕ್ಕೆ ವಿಧಿಸಲಾಗಿದೆ ಎಂದು ಸರ್ಕಾರಿ ಡಾಟಾದಲ್ಲಿ ಉಲ್ಲೇಖಿಸಲಾಗಿದೆ. 2020ರ ಪ್ರಾರಂಭದಲ್ಲಿ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದಲೂ ಅದನ್ನು ನಿಯಂತ್ರಣ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ನಿರ್ಬಂಧಗಳನ್ನು ವಿಧಿಸಿದ್ದವು. ಅದನ್ನು ಮೀರಿದರೆ ದಂಡ ಎಂಬುದನ್ನೂ ಹೇಳಿದ್ದವು. ಹಾಗಿದ್ದಾಗ್ಯೂ ಅನೇಕರು ಕೊರೊನಾ ನಿಯಂತ್ರಣ ನಿಯಮಗಳ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದು ದಂಡ ಕೊಟ್ಟಿದ್ದಾರೆ.

ದೇಶದಲ್ಲಿ 2020ರಲ್ಲಿ ಮೊಟ್ಟಮೊದಲು ಕೊರೊನಾ ಕೇಸ್​ ಪತ್ತೆಯಾಗಿದ್ದು ಕೇರಳದಲ್ಲಿ. ಚೀನಾದಿಂದ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಬಳಿಕ ವೇಗವಾಗಿ ಹರಡಿತ್ತು. ಕೊರೊನಾ ಹರಡುವಿಕೆ ಮತ್ತು ಸಾವಿನ ಪ್ರಮಾಣದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಇದ್ದರೆ, ಎರಡನೇ ಸ್ಥಾನದಲ್ಲಿ ಕೇರಳವೇ ಇತ್ತು. ಬಳಿಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಕೊರೊನಾವನ್ನು ಕಡಿಮೆ ಮಾಡಿದ್ದಕ್ಕಾಗಿ ವಿಶ್ವಸಂಸ್ಥೆಯಿಂದ ಶ್ಲಾಘನೆಗೂ ಪಾತ್ರವಾಗಿತ್ತು. ಕೊವಿಡ್​ 19 ಸೋಂಕಿನ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಹೇರಿದ್ದ ಕೇರಳ ಸರ್ಕಾರ ಅದನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತ್ತು. ಮಾಸ್ಕ್​ ಧರಿಸದೆ ಇದ್ದರೆ 2000 ರೂಪಾಯಿವರೆಗೂ ದಂಡ ವಿಧಿಸಿತ್ತು. ಆಗಿನಿಂದ ಇಲ್ಲಿಯವರೆಗೆ ಕೊವಿಡ್ 19 ನಿಯಮ ಉಲ್ಲಂಘಿಸಿದವರಿಗೆ ವಿಧಿಸಲಾದ ದಂಡದ ಮೊತ್ತ ಬರೋಬ್ಬರಿ 350 ಕೋಟಿ ರೂಪಾಯಿಗೆ ತಲುಪಿದೆ.

ಇನ್ನು ಮಾರ್ಚ್​ 31ರಿಂದ ದೇಶದಲ್ಲಿ ಕೊವಿಡ್​ 19 ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾರ್ಗಸೂಚಿಯೂ ಇರುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸುವುದಷ್ಟೇ ಕಡ್ಡಾಯ ಎಂದು ಕೇಂದ್ರ ಸರ್ಕಾರ ನಿನ್ನೆ ಹೇಳಿದೆ. ಕೊವಿಡ್ 19 ಸುರಕ್ಷತಾ ಕ್ರಮಗಳಿಗೆ ಸಂಬಂಧಪಟ್ಟಂತೆ ವಿಪತ್ತು ನಿರ್ವಹಣಾ ಕಾಯ್ದೆಯನ್ನೂ ಅನ್ವಯಿಸುವುದಿಲ್ಲ (ಕೊವಿಡ್​ 19 ನಿರ್ಬಂಧ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗುವುದಿಲ್ಲ) ಎಂದೂ ಸ್ಪಷ್ಟಪಡಿಸಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಜತೆಗೆ ಕೊವಿಡ್​ 19 ಲಸಿಕೆ ಅಭಿಯಾನವೂ ಅಚ್ಚುಕಟ್ಟಾಗಿ ನಡೆಯುತ್ತಿದೆ. ಮೂರನೇ ಅಲೆಗೆ ಕಾರಣವಾಗಿದ್ದ ಒಮಿಕ್ರಾನ್​ ಸೋಂಕಿನ ಪ್ರಸರಣ ತಗ್ಗಿದೆ. ಹಾಗಿದ್ದಾಗ್ಯೂ ಚೀನಾ, ದಕ್ಷಿಣ ಕೊರಿಯಾ, ಯುಕೆ, ಸಿಂಗಾಪುರ, ಫ್ರಾನ್ಸ್​, ಜರ್ಮನಿಗಳಲ್ಲಿ ಮತ್ತೆ ಹೊಸದಾಗಿ ಕೊವಿಡ್ 19 ಪ್ರಸರಣ ಉತ್ತುಂಗಕ್ಕೇರಿದ್ದು, ಲಾಕ್​ಡೌನ್​​ನಂಥ ನಿರ್ಬಂಧಗಳನ್ನು ಹೇರಲಾಗುತ್ತಿದೆ.  ಆದರೂ ಕೂಡ ಕೇಂದ್ರ ಸರ್ಕಾರ ಎಲ್ಲ ರೀತಿಯ ಕೊವಿಡ್ 19 ನಿರ್ಬಂಧ ಮಾರ್ಗಸೂಚಿಗಳನ್ನು ಮಾರ್ಚ್​ 31ರಿಂದ ತೆಗೆದುಹಾಕುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ; ಮೀನುಗಳಿಂದ 16 ಕೋಟಿ ರೂ. ಆದಾಯ ಗಳಿಕೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ