India Covid Updates: ವಿದೇಶಗಳಿಂದ ಬರುವವರಿಗೆ RT-PCR ಪರೀಕ್ಷೆ ಆರಂಭ: ಮನ್ಸುಖ್ ಮಾಂಡವೀಯ
ಚೀನಾದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಚೀನಾದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ವಿದೇಶದಿಂದ ಬರುವವರಿಗೆ ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಲಾಗುವುದು ಎಂದು ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. ವಿಶ್ವದಲ್ಲಿ ಪ್ರತಿದಿನ 5 ಲಕ್ಷ ಕೊರೊನಾ ಕೇಸ್ಗಳು ಪತ್ತೆಯಾಗುತ್ತಿದೆ, ಜಪಾನ್, ಅಮೆರಿಕ, ಫ್ರಾನ್ಸ್, ಚೀನಾದಲ್ಲಿ ಕೊರೊನಾ ಹೆಚ್ಚಾಗುತ್ತಿದೆ, ಈ ಹಿಂದೆ ಕೊರೊನಾವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇವೆ, ಕೊರೊನಾ ವಿರುದ್ಧ ಹೋರಾಡಲು ರಾಜ್ಯಗಳಿಗೆ ಕೇಂದ್ರದಿಂದ ನೆರವು ನೀಡಲಾಗಿದೆ.
ರೂಪಾಂತರಿ ತಳಿಯನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ, ದೇಶದಲ್ಲಿ 220 ಕೋಟಿ ಡೋಸ್ ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ, ಕೊರೊನಾ ನಿರ್ವಹಣೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.ಹೊಸ ಕೇಸ್ಗಳ ರೂಪಾಂತರ ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ, ಬೂಸ್ಟರ್ ಡೋಸ್ ನೀಡಲು ಎಲ್ಲಾ ರಾಜ್ಯಗಳಿಗೆ ಸೂಚಿಸಲಾಗಿದೆ.
ವಿದೇಶದಿಂದ ಬರುವ ಪ್ರಯಾಣಿಕರಿಗೆ ಸೂಕ್ತ ಪರೀಕ್ಷೆ ನಡೆಸಲಾಗುವುದು, ಹೊಸ ವರ್ಷ ಆಚರಣೆ, ಹಬ್ಬದ ದಿನಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು.
ಮತ್ತಷ್ಟು ಓದಿ: ಸದನದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ: ಜಗದೀಪ್ ಧನಕರ್
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು, ವಿದೇಶದಿಂದ ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆ ಪ್ರಾರಂಭಿಸಿದ್ದೇವೆ.
220ಕೋಟಿ ಡೋಸ್ ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ, ಕೊರೊನಾ ನಿರ್ವಹಣೆ ಮಾಡಲು ಸರಕಾರ ಸಿದ್ಧವಿದೆ, ವಿದೇಶಿದಿಂದ ಬರುವ ಪ್ರಯಾಣಿಕರಿಗೆ ಸೂಕ್ತ ಪರೀಕ್ಷೆ ನಡೆಸಲಾಗುವುದು ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ