Covid India Update: ಭಾರತದಲ್ಲಿ 13086 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, 19 ಸಾವು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 05, 2022 | 11:12 AM

ಒಂದು ದಿನದಲ್ಲಿ ಚೇತರಿಸಿಕೊಂಡವರ ಸಂಖ್ಯೆ 12,456.

Covid India Update: ಭಾರತದಲ್ಲಿ 13086 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, 19 ಸಾವು
ಪ್ರಾತಿನಿಧಿಕ ಚಿತ್ರ
Follow us on

ದೆಹಲಿ: ಭಾರತದಲ್ಲಿ ಮಂಗಳವಾರ (ಜುಲೈ 5) ಒಟ್ಟು 13,086 ಹೊಸ ಕೊವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು ಕಳೆದ 24 ಗಂಟೆಗಳಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ ಚೇತರಿಸಿಕೊಂಡವರ ಸಂಖ್ಯೆ 12,456. ಸೋಮವಾರ (ಜುಲೈ 4) ಒಟ್ಟು 16,135 ಪ್ರಕರಣಗಳು ವರದಿಯಾಗಿದ್ದವು. ಈ ಸಂಖ್ಯೆಗೆ ಹೋಲಿಸಿದರೆ ಮಂಗಳವಾರ ವರದಿಯಾಗಿರುವ ಪ್ರಕರಣಗಳ ಸಂಖ್ಯೆ ಸುಮಾರು 3 ಸಾವಿರದಷ್ಟು ಕಡಿಮೆ. ದೇಶದಲ್ಲಿ ಪ್ರಸ್ತುತ 1,14,475 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 5,25,242 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ 4,28,91,933 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದ ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 2.90 ಇದ್ದರೆ ವಾರದ ಪಾಸಿಟಿವಿಟಿ ಸರಾಸರಿಯು ಶೇ 3.81 ಇದೆ. ದೇಶದಲ್ಲಿ ಈವರೆಗೆ 198.09 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಇರುವ ಕಾರಣಗಳ ಬಗ್ಗೆ ವಿಜ್ಞಾನಿಗಳು ಪರಿಶೀಲಿಸುತ್ತಿದ್ದಾರೆ. BA.2.75 ಮತ್ತು ಇತರ ಕೆಲವು ಒಮಿಕ್ರಾನ್ ರೂಪಾಂತರಿಯ ಉಪತಳಿಗಳು ಹೆಚ್ಚು ಗಮನ ಸೆಳೆಯುತ್ತಿದೆ. BA.2.75 ಉಪತಳಿಯು BA.2 ತಳಿಗೆ ಸೇರಿದ್ದು, ಭಾರತದಲ್ಲಿ ಕಳೆದ ಒಂದು ವರ್ಷದಿಂದ ಇದು ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕಂಡುಬರುತ್ತಿರುವ ಒಮಿಕ್ರಾನ್ ಉಪತಳಿಗಳಲ್ಲಿ ಈ ತಳಿಯು ಶೇ 18ರಷ್ಟು ಹೆಚ್ಚಾಗಿ ಕಂಡುಬರುತ್ತಿದೆ.

ಕರ್ನಾಟಕದಲ್ಲಿಯೂ ಕೊರೊನಾ ಸೋಂಕು ಪ್ರಕರಣಗಳ (Coronavirus) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಒಮಿಕ್ರಾನ್ (Omicron)​ ರೂಪಾಂತರಿಯ ಉಪತಳಿ ಎನಿಸಿರುವ BA.3, BA.4, BA.5 ವೈರಾಣುಗಳು ಪತ್ತೆಯಾಗಿವೆ. ಹೊಸದಾಗಿ ಪತ್ತೆಯಾಗಿರುವ ತಳಿಗಳ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಿದೆ.

Published On - 11:09 am, Tue, 5 July 22