Coronavirus Updates: ಭಾರತದಲ್ಲಿ 11,793 ಹೊಸ ಕೊವಿಡ್ ಪ್ರಕರಣ ದಾಖಲು, 27 ಜನ ಸಾವು

| Updated By: ಸುಷ್ಮಾ ಚಕ್ರೆ

Updated on: Jun 28, 2022 | 10:09 AM

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಕೊವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ.

Coronavirus Updates: ಭಾರತದಲ್ಲಿ 11,793 ಹೊಸ ಕೊವಿಡ್ ಪ್ರಕರಣ ದಾಖಲು, 27 ಜನ ಸಾವು
ಸಾಂಕೇತಿಕ ಚಿತ್ರ
Follow us on

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊರೊನಾವೈರಸ್ ಪ್ರಕರಣಗಳು (Coronavirus Cases) ದಾಖಲಾಗಿದ್ದು, ಒಟ್ಟು ಕೊವಿಡ್-19 ಪ್ರಕರಣಗಳ ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ಸಕ್ರಿಯ ಕೊವಿಡ್ (Covid-19) ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 27 ಜನ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,25,047ಕ್ಕೆ ಏರಿದೆ.

ಭಾರತದ ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇ. 0.21 ಅನ್ನು ಒಳಗೊಂಡಿವೆ. ಆದರೆ, ರಾಷ್ಟ್ರೀಯ ಕೊವಿಡ್ ಚೇತರಿಕೆ ದರವು ಶೇ. 98.58ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ ಇದುವರೆಗೆ 197.31 ಕೋಟಿ ಡೋಸ್​ ಕೊವಿಡ್ ಲಸಿಕೆಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 9,486 ಚೇತರಿಕೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 4,27,97,092 ಜನರು ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: India Covid Updates: ಭಾರತದಲ್ಲಿ ಹೊಸದಾಗಿ 15,940 ಮಂದಿಗೆ ಕೊರೊನಾ ಸೋಂಕು, 20 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ 86.14 ಕೋಟಿ ಕೊವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 4,73,717 ಪರೀಕ್ಷೆಗಳನ್ನು ನಡೆಸಲಾಗಿದೆ.

24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ 2,280 ಪ್ರಕರಣಗಳ ಹೆಚ್ಚಳ ದಾಖಲಾಗಿದೆ. ದೈನಂದಿನ ಧನಾತ್ಮಕತೆಯ ದರವು ಶೇ.2.49ರಷ್ಟಿದ್ದರೆ ವಾರದ ಧನಾತ್ಮಕತೆಯ ದರವು ಶೇ.3.36ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.