AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ: ಟಿಎಂಸಿ ಪಕ್ಷದ ಮಾಜಿ ಸಚಿವ ಶ್ಯಾಮಪ್ರಸಾದ್ ಮುಖರ್ಜಿ ಬಂಧನ

ಬಂಕುರಾ ನ್ಯಾಯಾಲಯ ಭಾನುವಾರ ಮಧ್ಯಾಹ್ನ ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತು. ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಮುಖರ್ಜಿ "ನನ್ನನ್ನು ಏಕೆ ಬಂಧಿಸಲಾಯಿತು ಎಂದು ನನಗೆ ತಿಳಿದಿಲ್ಲ" ಎಂದಿದ್ದಾರೆ.

ಭ್ರಷ್ಟಾಚಾರ ಆರೋಪ: ಟಿಎಂಸಿ ಪಕ್ಷದ ಮಾಜಿ ಸಚಿವ ಶ್ಯಾಮಪ್ರಸಾದ್ ಮುಖರ್ಜಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 22, 2021 | 6:17 PM

Share

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಮಾಜಿ ಸಚಿವ ಶ್ಯಾಮಪ್ರಸಾದ್ ಮುಖರ್ಜಿಯವರನ್ನು ಬಂಕುರಾ ಜಿಲ್ಲಾ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. 2020 ರವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಬಿಷ್ಣುಪುರ ಪುರಸಭೆಯ ಭ್ರಷ್ಟಾಚಾರದ ಆರೋಪದ ಮೇಲೆ ಮುಖರ್ಜಿ ಬಂಧನ ನಡೆದಿದೆ.  ಬಿಷ್ಣುಪುರದ ಉಪವಿಭಾಗಾಧಿಕಾರಿ ದೂರು ದಾಖಲಿಸಿದ್ದು, ಬಿಷ್ಣುಪುರ ಪುರಸಭೆಯಿಂದ ಟೆಂಡರ್‌ಗಳಲ್ಲಿನ ಅಕ್ರಮಗಳ ತನಿಖೆಯ ನಂತರ ಪೊಲೀಸರು ಮುಖರ್ಜಿಯನ್ನು ಬಂಧಿಸಿದ್ದಾರೆ. ಅವರು 9.91 ಕೋಟಿ ಮೊತ್ತದ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬಂಕುರಾ ನ್ಯಾಯಾಲಯ ಭಾನುವಾರ ಮಧ್ಯಾಹ್ನ ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತು. ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಮುಖರ್ಜಿ “ನನ್ನನ್ನು ಏಕೆ ಬಂಧಿಸಲಾಯಿತು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮುಖರ್ಜಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಡಿಸೆಂಬರ್ 19, 2020 ರಂದು ಸೇರಿಕೊಂಡಾಗ ಸುವೇಂದು ಅಧಿಕಾರಿ ಮತ್ತು ಟಿಎಂಸಿ ನಾಯಕರು ಟಿಎಂಸಿ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರು. ಆದಾಗ್ಯೂ, ಮುಖರ್ಜಿ ಅವರನ್ನು ಯಾವುದೇ ಬಿಜೆಪಿ ಸಮಾರಂಭದಲ್ಲಿ ನೋಡಿಲ್ಲ ಅಥವಾ ಅವರಿಗೆ ರಾಜ್ಯ ಸಮಿತಿಯಲ್ಲಿ ಯಾವುದೇ ಹುದ್ದೆಯನ್ನು ನೀಡಲಾಗಿಲ್ಲ.

ಬಿಷ್ಣುಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಮೊದಲ ಟಿಎಂಸಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು ಆದರೆ ನಂತರ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೈಬಿಟ್ಟರು. ಅವರು ಮಾರ್ಚ್-ಏಪ್ರಿಲ್ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ.

“ಅಕ್ರಮಗಳನ್ನು ವಿವರಿಸಲು ವಿಫಲವಾದ ನಂತರ ಮುಖರ್ಜಿಯನ್ನು ಬಂಧಿಸಲಾಯಿತು” ಎಂದು ಬಂಕುರಾ ಪೊಲೀಸ್ ವರಿಷ್ಠಾಧಿಕಾರಿ ಧೃತಿಮಾನ್ ಸರ್ಕಾರ್ ಹೇಳಿದರು.

“50 ಟೆಂಡರ್‌ಗಳಲ್ಲಿ ಅವ್ಯವಹಾರಗಳು ಕಂಡುಬಂದಿವೆ. ಇವೆಲ್ಲವೂ ಮುಖ್ಯಮಂತ್ರಿಗಳು ಆರಂಭಿಸಿದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿವೆ ಎಂದು ಬಂಕುರಾದ ಕೊತುಲ್ಪುರದ ಮಾಜಿ ಸಚಿವ ಹಾಗೂ ಟಿಎಂಸಿ ಶಾಸಕರಾದ ಶ್ಯಾಮಲ್ ಸಾಂತರ ಹೇಳಿದರು.

“ಮುಖರ್ಜಿ ಎಂದಿಗೂ ನಮ್ಮ ಪಕ್ಷದಲ್ಲಿ ಸಕ್ರಿಯವಾಗಿರಲಿಲ್ಲ. ಅವರು ಟಿಎಂಸಿಯಲ್ಲಿದ್ದಾಗ ಆಪಾದಿತ ಅಪರಾಧ ನಡೆಯಿತು. ಬಿಜೆಪಿಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಂಗಾಳ ಬಿಜೆಪಿಯ ಮುಖ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಹೇಳಿದರು.

ಇದನ್ನೂ ಓದಿ: Yakshagana: ಭೂಜಾತೆ ಸೀತೆಗೆ ಭೂಮಿಯಷ್ಟೇ ಸಹನೆ; ಅದು ನಮಗೆ ದಾರಿದೀಪ

ಇದನ್ನೂ ಓದಿ: Sydney Diary : ಹುಲಲಲ ಹುರ್ರೆ ‘ಯಾರೇ ಸತ್ತರೂ ತಮಗೆ ಇಷ್ಟು ದುಃಖವಾಗಲು ಹೇಗೆ ಸಾಧ್ಯ?’

(Corruption case Former TMC minister Shyamaprasad Mukherjee arrested)

Published On - 6:17 pm, Sun, 22 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ