9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ: ಪ್ರಧಾನಿ ಭಾಷಣಕ್ಕೆ ಕೌಂಟ್ಡೌನ್ ಶುರು
ಇಂದು ಬೆಳಗ್ಗೆ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ Live Updates ಟಿವಿ9 ಕನ್ನಡ ಡಿಜಿಟಲ್ ವೆಬ್ಸೈಟ್ನಲ್ಲಿ ಲಭ್ಯ.
ವಿಡಿಯೋ ಕಾನ್ಫರೆನ್ಸ್ನಲ್ಲಿ ಬಟನ್ ಒತ್ತುವ ಮೂಲಕ ಪಿಎಂ ಮೋದಿ ಅವರು ದೇಶದ 9 ಕೋಟಿ ಫಲಾನುಭವಿ ರೈತ ಕುಟುಂಬಗಳಿಗೆ ತಲಾ ₹ 2 ಸಾವಿರದಂತೆ ₹ 18 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಲಿದ್ದಾರೆ. ಈ ಪೈಕಿ ಇಂದು ರಾಜ್ಯದ 53,01,252 ರೈತರ ಖಾತೆಗೆ ಹಣ ಜಮೆಯಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ 6 ರಾಜ್ಯಗಳ ರೈತರ ಜತೆ ಸಂವಾದ ನಡೆಸಲಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟದ ನಡುವೆ ದೇಶಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೇದಿಕೆಯನ್ನು ಬಳಸಿಕೊಂಡು 3 ಕೃಷಿ ತಿದ್ದುಪಡಿ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಲು ಕೇಂದ್ರ ಯತ್ನಿಸಲಿದೆ.
ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ಗಣ್ಯರಿಂದ ಪುಷ್ಪನಮನ, ರೈತರ ಖಾತೆಗೆ ಬರಲಿದೆ ಕಿಸಾನ್ ಸಮ್ಮಾನ್ ಹಣ..
Published On - 9:46 am, Fri, 25 December 20