5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?

ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ. 

5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 10, 2022 | 8:06 AM

ಇನ್ನೇನು ಕೆಲವೇ ಹೊತ್ತಲ್ಲಿ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಪಂಜಾಬ್​, ಗೋವಾಗಳಲ್ಲಿ ಯಾವ ಪಕ್ಷ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಸಹಜವಾಗಿಯೇ ದೇಶಾದ್ಯಂತ ಮೂಡಿದೆ. ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದ್ದು, ಉತ್ತರಾಖಂಡ್​​ನಲ್ಲಿ ಕಾಂಗ್ರೆಸ್​ ಸರ್ಕಾರ ರಚಿಸುವ ಸಾಧ್ಯತೆ ಇದೆ. ಪಂಜಾಬ್​​ನಲ್ಲಿ ಅರವಿಂದ್​ ಕ್ರೇಜಿವಾಲ್​ ನೇತೃತ್ವದ ಆಮ್​ ಆದ್ಮಿ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಅದೇನೇ ಇದ್ದರೂ ಮತ ಎಣಿಕೆ ಮುಗಿದ ಬಳಿಕವೇ ಯಾವ ರಾಜ್ಯದಲ್ಲಿ, ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬ ವಿಚಾರ ಸ್ಪಷ್ಟವಾಗುವುದು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರ ಪಾಲನೆಯೊಂದಿಗೆ ಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಪ್ರಾರಂಭವಾದ ಒಂದೆರಡು ಗಂಟೆಗಳಲ್ಲಿ  ರಾಜ್ಯದಲ್ಲಿ ಆರಂಭಿಕ ಟ್ರೆಂಡ್​ ಗೊತ್ತಾಗಲಿದೆ. ಆದರೆ ಗೋವಾದಲ್ಲಿ ಸ್ವಲ್ಪ ಕಷ್ಟವಾಗಬಹುದು. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ರಚಿತಗೊಳ್ಳಲಿದೆ ಎಂದೇ ಹೇಳಿವೆ. ಇನ್ನು ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ.  ಉತ್ತರಪ್ರದೇಶದ ಪ್ರಯಾಗ್​ ರಾಜ್​ ಸೇರಿ ಹಲವು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮುಂಡೇರಾ ಮಂಡಿ ಎಂಬಲ್ಲಿ ಒಟ್ಟು 12 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದ್ದು, ಅಲ್ಲಿ ನಾಲ್ಕು ಲೇಯರ್​ಗಳ ಭದ್ರತೆ ಕಲ್ಪಿಸಲಾಗಿದೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂದು ಹೊರಬಿದ್ದಿದ್ದೇ ಅಲ್ಲಿ ಸಿಎಂ ಅಭ್ಯರ್ಥಿ ಭಗವಂತ್ ಮನ್​ ಮುಖದಲ್ಲಿ ಮಂದಹಾಸ ಮೂಡಿದೆ. ಆಪ್​ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಉತ್ತರಾಖಂಡ್​ನಲ್ಲಿ ಕಾಂಗ್ರೆಸ್​ ಬಗ್ಗೆ ಸಮೀಕ್ಷೆಗಳು ಒಲವು ತೋರಿದ್ದರೂ ಬಿಜೆಪಿ ಮಾತ್ರ ಅದನ್ನು ಒಪ್ಪಿಕೊಂಡಿಲ್ಲ. ಈ ಬಾರಿಯೂ ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳು ನಮಗೇ ಎಂಬ ಆತ್ಮವಿಶ್ವಾಸದಲ್ಲಿ ಇದೆ. ಗೋವಾದಲ್ಲಿ ಅತಂತ್ರ ವಿಧಾನಸಭೆ ಬರುವ ಸಾಧ್ಯತೆಯನ್ನು ಯಾರೂ ಅಲ್ಲಗಳೆಯುವಂತಿಲ್ಲ. ಚುನಾವಣಾ ಮತ ಎಣಿಕೆ ಸಂಬಂಧ ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ: Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್

Published On - 7:46 am, Thu, 10 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ