AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ

ಎಲ್ ನಿನೋ ಪರಿಸ್ಥಿತಿಗಳು ದುರ್ಬಲಗೊಂಡಿವೆ. ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಎಲ್ ನಿನೊ ಸಾಮಾನ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಬಿಸಿ ಗಾಳಿಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಉರಿ ಬೇಸಿಗೆಯನ್ನು ನಿರೀಕ್ಷಿಸಬಹುದು. ಆದರೆ ಋತುವಿನ ಮೊದಲ 15 ದಿನಗಳವರೆಗೆ, ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ .

ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Mar 01, 2024 | 6:42 PM

Share

ದೆಹಲಿ ಮಾರ್ಚ್ 01: ಎಲ್ ನಿನೊ (El Nino) ಪರಿಸ್ಥಿತಿಗಳು ದುರ್ಬಲಗೊಂಡಿವೆ ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಕಾರಣವಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ವಾಯುವ್ಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ಎಲ್ ನಿನೊ ಪರಿಸ್ಥಿತಿಗಳಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಮಾರ್ಚ್‌ನಿಂದ ಮೇ ವರೆಗೆ ಸಾಮಾನ್ಯ ಹಗಲು ಮತ್ತು ರಾತ್ರಿ ತಾಪಮಾನವನ್ನು(Heat Wave) ಭಾರತ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿರುವುದರಿಂದ ಈಶಾನ್ಯ, ಮಧ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳು ಉರಿ ಬಿಸಿಲು ಅನುಭವಿಸುವ ಸಾಧ್ಯತೆಯಿದೆ.ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ಅಥವಾ ರಾತ್ರಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಶುಕ್ರವಾರ ತಿಳಿಸಿದೆ.

ಪರ್ಯಾಯ ದ್ವೀಪ ಪ್ರದೇಶ, ಈಶಾನ್ಯ, ಪಶ್ಚಿಮ ಮಧ್ಯ ಪ್ರದೇಶ ಮತ್ತು ವಾಯುವ್ಯದ ಹೆಚ್ಚಿನ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಮಾಸಿಕ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪೂರ್ವ ಮತ್ತು ಪೂರ್ವ-ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ತಾಪಮಾನವು ಮುಂದುವರಿಯುವ ಸಾಧ್ಯತೆಯಿದೆ.

ಹಿಮಾಲಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ರಾತ್ರಿಯ ಉಷ್ಣತೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.ಅಲ್ಲಿ ಮಾರ್ಚ್‌ನಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವು ಹೆಚ್ಚಾಗಿ ಇರುತ್ತದೆ ಎಂದು ಐಎಂಡಿ ಹೇಳಿದೆ.

ಈಶಾನ್ಯ ಭಾರತ, ಪಶ್ಚಿಮ ಹಿಮಾಲಯ ಪ್ರದೇಶ, ನೈಋತ್ಯ ಪರ್ಯಾಯ ದ್ವೀಪ ಮತ್ತು ಪಶ್ಚಿಮ ಕರಾವಳಿಯನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ದಿನಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮಾರ್ಚ್‌ನಲ್ಲಿ, ಈಶಾನ್ಯ ಪರ್ಯಾಯದ್ವೀಪದ ಭಾರತದ ಹೆಚ್ಚಿನ ಪ್ರದೇಶಗಳು, ಮಹಾರಾಷ್ಟ್ರದ ಹಲವು ಪ್ರದೇಶಗಳು ಮತ್ತು ಒಡಿಶಾದ ಕೆಲವು ಭಾಗಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಇರಬಹುದು.

“ಎಲ್ ನಿನೋ ಪರಿಸ್ಥಿತಿಗಳು ದುರ್ಬಲಗೊಂಡಿವೆ. ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಎಲ್ ನಿನೊ ಸಾಮಾನ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಬಿಸಿ ಗಾಳಿಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಉರಿ ಬೇಸಿಗೆಯನ್ನು ನಿರೀಕ್ಷಿಸಬಹುದು. ಆದರೆ ಋತುವಿನ ಮೊದಲ 15 ದಿನಗಳವರೆಗೆ, ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ ಸಕ್ರಿಯ ಪಾಶ್ಚಿಮಾತ್ಯ ಅಡಚಣೆಗಳು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಡೈರೆಕ್ಟರ್ ಜನರಲ್ ಎಂ ಮೊಹಾಪಾತ್ರ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

ಮಾರ್ಚ್ ತಿಂಗಳಲ್ಲಿ ದೇಶದಾದ್ಯಂತ ಸರಾಸರಿ ಮಳೆಯ ಮುನ್ಸೂಚನೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ದಕ್ಷಿಣ ಪೆನಿನ್ಸುಲಾದ ತೀವ್ರ ಆಗ್ನೇಯ ಪ್ರದೇಶಗಳು ಮತ್ತು ಈಶಾನ್ಯ ಮತ್ತು ತೀವ್ರ ವಾಯುವ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 1 March 24

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ