ಲಕ್ನೋ, ಜ.3: ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ (Vrindavan) ಬಾಲಕಿಯರ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಉದ್ಘಾಟಿಸಿದ್ದಾರೆ. ಇದು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯಾಗಿದೆ. “ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಕ್ಷಣ” ಎಂದು ಬಣ್ಣಿಸಿದರು ರಾಜನಾಥ್ ಸಿಂಗ್ (Rajnath Singh ) ಬಣ್ಣಿಸಿದ್ದಾರೆ. ಇದು ಬಾಲಕಿಯರಿಗೆ ಬೆಳಕು ನೀಡಲಿದೆ ಎಂದು ಹೇಳಿದ್ದಾರೆ. ತಾಯ್ನಾಡಿಗೆ ಸೇವೆ ಸಲ್ಲಿಸಲು ಸಶಸ್ತ್ರ ಪಡೆಗಳನ್ನು ಸೇರಲು ಇದು ಮಹಿಳೆಯರಿಗೆ ಉತ್ತಮ ಅವಕಾಶ ಎಂದು ಹೇಳಿದ್ದಾರೆ.
ಈ ಶಾಲೆಯಲ್ಲಿ ಸುಮಾರು 870 ವಿದ್ಯಾರ್ಥಿಗಳನ್ನು ಹೊಂದಿದ್ದು, ಇಂತಹ ಬಾಲಕಿಯರ ಸೈನಿಕ ಶಾಲೆಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್‌ಜಿಒಗಳು/ಖಾಸಗಿ/ರಾಜ್ಯ ಸರ್ಕಾರಿ ಶಾಲೆಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದರು. ಅದರಲ್ಲಿ ಈಗಾಗಲೇ 42 ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಸಿಬಿಎಸ್‌ಇ-ಸಂಯೋಜಿತ ಶಾಲೆಯಲ್ಲಿ ತರಬೇತಿಯನ್ನು ಮಾಜಿ ಸೈನಿಕರಿಂದ ನೀಡಲಾಗುವುದು. ಸಂಸ್ಥೆಯು 120 ಸೀಟುಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ.
ಇನ್ನು ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ , ಸರ್ಕಾರವು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ಸರಿಯಾದ ಸ್ಥಾನವನ್ನು ನೀಡಿದೆ. ಅನೇಕ ವರ್ಷಗಳಿಂದ ಮಹಿಳೆಯರಿಗೆ ಹೆಚ್ಚಿನ ಸ್ಥಾನವನ್ನು ಸೇನೆಯಲ್ಲಿ ನೀಡಿರಲಿಲ್ಲ. ಮಹಿಳೆಯರು ಕೂಡ ದೇಶದ ರಕ್ಷಣೆಯಲ್ಲಿ ಪುರುಷರಂತೆ ಮಹಿಳೆಯರು ಸಮಾನರಾಗಿರುತ್ತಾರೆ. ಈ ಶಾಲೆಯ ಮೂಲಕ ರಕ್ಷಣಾ ವ್ಯವಸ್ಥೆಯಲ್ಲಿ ಹಾಗೂ ಮಹಿಳೆಯರ ಸಬಲೀಕರಣದಲ್ಲಿ ಸುವರ್ಣ ಯುಗ ಎಂದು ಹೇಳಿದ್ದಾರೆ.
ಇದನ್ನೂ ಓದಿ: 08 ಕೌನ್ಸಿಲರ್, ವಾರ್ಡ್ ಬಾಯ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಉದ್ಘಾಟನಾ ಸಮಾರಂಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣವಿಲ್ಲದೆ ಸದೃಢ ಸಮಾಜ ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಸಮಾಜವನ್ನು ಸಂಪ್ರದಾಯವಾದಿ ಮನಸ್ಥಿತಿಯಿಂದ ಹೊರತರಬೇಕು ಎಂದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ