ದೇಶದಲ್ಲಿ ಕೋಟಿಯತ್ತ ಕೊರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣ ಸಮಾಧಾನಕರ

ನವದೆಹಲಿ: ಕಳೆದ 24ಗಂಟೆಯಲ್ಲಿ ದೇಶದಲ್ಲಿ 46,232 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್​ -19 ಸೋಂಕಿತರ ಸಂಖ್ಯೆ 90,50,597 (90.50 ಲಕ್ಷ)ಕ್ಕೆ ಏರಿಕೆಯಾಗಿದೆ. ಹಾಗೇ ಒಂದು ದಿನದಲ್ಲಿ 564 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,32, 726ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ ರಿಕವರಿ ರೇಟ್​ ಶೇ. 93.67 ಇನ್ನು 24 ಗಂಟೆಯಲ್ಲಿ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೇವಲ 4,39,747 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ ಕೊರೊನಾದಿಂದ ಮುಕ್ತರಾದವರ […]

ದೇಶದಲ್ಲಿ ಕೋಟಿಯತ್ತ ಕೊರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣ ಸಮಾಧಾನಕರ
Edited By: ಸಾಧು ಶ್ರೀನಾಥ್​

Updated on: Nov 21, 2020 | 3:22 PM

ನವದೆಹಲಿ: ಕಳೆದ 24ಗಂಟೆಯಲ್ಲಿ ದೇಶದಲ್ಲಿ 46,232 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್​ -19 ಸೋಂಕಿತರ ಸಂಖ್ಯೆ 90,50,597 (90.50 ಲಕ್ಷ)ಕ್ಕೆ ಏರಿಕೆಯಾಗಿದೆ. ಹಾಗೇ ಒಂದು ದಿನದಲ್ಲಿ 564 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,32, 726ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದ ರಿಕವರಿ ರೇಟ್​ ಶೇ. 93.67
ಇನ್ನು 24 ಗಂಟೆಯಲ್ಲಿ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೇವಲ 4,39,747 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ ಕೊರೊನಾದಿಂದ ಮುಕ್ತರಾದವರ ಸಂಖ್ಯೆ 84, 78, 124. ಸದ್ಯ ದೇಶದ ರಿಕವರಿ ರೇಟ್​ ಶೇ.93.67 ಮತ್ತು ಸಾವಿನ ದರ ಶೇ.1.47ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ನವೆಂಬರ್​ 20ರವರೆಗೆ ಒಟ್ಟಾರೆ 13.06 ಕೋಟಿ ಜನರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿದೆ. 24 ಗಂಟೆಯಲ್ಲಿ 564 ಮಂದಿ ಮೃತಪಟ್ಟಿದ್ದು, ಅದರಲ್ಲಿ 155 ಸಾವು ಮಹಾರಾಷ್ಟ್ರ, 118 ದೆಹಲಿ, 50 ಪಶ್ಚಿಮ ಬಂಗಾಳ, 28 ಕೇರಳ, 25 ಹರ್ಯಾಣ, 20 ಉತ್ತರ ಪ್ರದೇಶದಿಂದ ವರದಿಯಾಗಿದೆ.  ಒಟ್ಟಾರೆ ಸಾವಿನ ಸಂಖ್ಯೆ ನೋಡಿದರೂ ಮಹಾರಾಷ್ಟ್ರದಲ್ಲೇ ಅತ್ಯಂತ ಹೆಚ್ಚು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us