
ನವದೆಹಲಿ, ಅಕ್ಟೋಬರ್ 28: ಇನ್ಶೂರೆನ್ಸ್ ಏಜೆಂಟ್ನ ಶವ ಚರಂಡಿಯಲ್ಲಿ ಪತ್ತೆಯಾಗಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಫಿಯಾನ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಚಂದರ್ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾರಣ ಆತನನ್ನು ಕೊಲೆ(Murder) ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಶವ ಪತ್ತೆಯಾಗಿತ್ತು. ಸಮೀಪದಲ್ಲಿ ನಿಲ್ಲಿಸಿದ್ದ ಬೈಕ್‌ನ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಶವವನ್ನು ಗುರುತಿಸಲಾಯಿತು. ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂಬುದು ತಿಳಿದುಬಂದಿದೆ.
ಅವರ ಕುಟುಂಬವನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ನಂತರ, ಕೊಲೆ ಪ್ರಕರಣ ದಾಖಲಿಸಲಾಯಿತು.
ತನಿಖೆಯ ಸಮಯದಲ್ಲಿ, ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿಸಿದ್ದಾರೆ. ಲಕ್ಷ್ಮಿ ಪೊಲೀಸರಿಗೆ ಚಂದರ್ ತನಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ, ಅವನು ಲಕ್ಷ್ಮಿಯನ್ನು ಬ್ಲಾಕ್ ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡ ಎಂದು ಹೇಳಿದ್ದ.
ಮತ್ತಷ್ಟು ಓದಿ: UPSC ಆಕಾಂಕ್ಷಿಯಾಗಿದ್ದ ಪ್ರಿಯಕರನ ಕಥೆ ಮುಗಿಸಿದ ಪ್ರಿಯತಮೆ: ರಾಸಲೀಲೆ ವಿಡಿಯೋಕ್ಕಾಗಿ ನಡೆಯಿತು ಕೊಲೆ
ಈ ಬ್ಲ್ಯಾಕ್ ಮೇಲ್ನಿಂದ ಬೇಸತ್ತ ಆಕೆ ಮತ್ತು ಕೇಶವ್ ಜತೆ ಸೇರಿ ಚಂದರ್ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದಳು ಎಂದು ಪೊಲೀಸ್ ವಕ್ತಾರ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ. ಅಕ್ಟೋಬರ್ 25 ರಂದು, ಲಕ್ಷ್ಮಿ ಚಂದರ್ ಅವರನ್ನು ದೆಹಲಿಯ ಮಿಥಾಪುರಕ್ಕೆ ಕರೆಸಿಕೊಂಡಿದ್ದಳು. ಬೈಕ್ನಲ್ಲಿ ಫರಿದಾಬಾದ್‌ನ ಆತ್ಮದ್‌ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋಗಲು ಕೇಳಿಕೊಂಡರು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು.
ಉಸಿರುಗಟ್ಟಸಿ ಕೊಂದು, ಆರೋಪಿಗಳು ಶವವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು. ಆರೋಪಿಗಳು ಚಂದರ್ ಅವರ ಜೇಬಿನಿಂದ ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಬೈಕ್‌ನ ಸಂಖ್ಯೆ ಪೊಲೀಸರಿಗೆ ಯಾರೆಂದು ಪತ್ತೆ ಹಚ್ಚಲು ಸಹಾಯ ಮಾಡಿತ್ತು. ಅಪರಾಧದಲ್ಲಿ ಭಾಗಿಯಾಗಿರುವ ಕೇಶವ್ ಅವರ ಇಬ್ಬರು ಸಹಚರರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:43 am, Tue, 28 October 25