ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ರೈಲುImage Credit source: Amarujala.com
Follow us
ನಯನಾ ರಾಜೀವ್
|

Updated on: Sep 08, 2024 | 1:31 PM

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ದೆಹಲಿಯಿಂದ ಇಸ್ಲಾಂಪುರಕ್ಕೆ ಹೋಗುವ ಮಗಧ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತ್ತು.

ಮಗಧ್ ಎಕ್ಸ್‌ಪ್ರೆಸ್ ರೈಲು ಬಕ್ಸಾರ್‌ನ ತುದಿಗಂಜ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಲಿಸುವಾಗ ಎರಡು ಭಾಗಗಳಾಗಿ ಬೇರ್ಪಟ್ಟಿತು, ಇದರಿಂದಾಗಿ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕರು ಭಯಭೀತರಾದರು.

ಯಾವುದೇ ದೊಡ್ಡ ಅವಘಡ ಸಂಭವಿಸದಿರುವುದು ಸಮಾಧಾನದ ಸಂಗತಿ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಅವಘಡದ ನಂತರ ರೈಲ್ವೆ ಇಲಾಖೆಯಲ್ಲಿ ಸಂಚಲನ ಮೂಡಿದೆ. ಘಟನೆಯ ನಂತರ ರೈಲ್ವೆ ಅಧಿಕಾರಿಗಳು, ಜಿಆರ್‌ಪಿ, ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದರು. ರೈಲ್ವೆ ಸಚಿವಾಲಯವು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ತನಿಖಾ ವರದಿಯನ್ನು ಕೇಳಿದೆ. ಈ ಘಟನೆಯ ನಂತರ ಸ್ಥಳೀಯರ ಗುಂಪು ಸ್ಥಳದಲ್ಲಿ ಜಮಾಯಿಸಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್

ಎಸಿ ಇರುವ ಎಸ್-7 ಕೋಚ್ ಮುಂದೆ ಹೋಯಿತು. ಉಳಿದ ಕೋಚ್‌ಗಳು ಟ್ರ್ಯಾಕ್‌ನಲ್ಲಿ ನಿಂತಿತ್ತು. ಅಷ್ಟರಲ್ಲಿ ಲೋಕೋಪೈಲಟ್ ಕಣ್ಣಿಗೆ ಬಿದ್ದ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಮುಖ್ಯ ಮಾರ್ಗದಲ್ಲಿ ಕಾರ್ಯಾಚರಣೆಗಳು ಸ್ಥಗಿತಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್