AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು ಎಂದು ಆರೋಪಿಸಿದ್ದಾರೆ.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 19, 2021 | 9:36 AM

Share

18 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಉತ್ತರ ಬಿಹಾರದ ಕೋರ್ಟ್​​ವೊಂದು ಆದೇಶ ನೀಡಿದೆ. ಈ 18 ಮಂದಿ ಪೊಲೀಸರು ವರ್ಷದ ಪ್ರಾರಂಭದಲ್ಲಿ ನಿವೃತ್ತ ಸೈನಿಕರೊಬ್ಬರ ಮನೆಯಿಂದ ಸುಮಾರು 50 ಲಕ್ಷ ರೂ.ಮೌಲ್ಯದ ನಗದು, ಚಿನ್ನಾಭರಣಗಳನ್ನು ಕದ್ದಿದ್ದಾರೆ ಎಂಬ ಆರೋಪದಡಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯನ್ನು ಅಡಿಶನಲ್​ ಚೀಫ್​ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್​ ನಯನ್​ ಕುಮಾರ್​ ನಡೆಸಿದ್ದರು. ರಸಲ್ಪುರ ಪ್ರದೇಶದ ಹರಿದ್ವಾರ್​ ಪ್ರಸಾದ್ ಠಾಕೂರ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಸ್ಥಳೀಯ ಪೊಲೀಸ್​ ಠಾಣೆಗೆ ಈ ಬಗ್ಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು. ಇದೇ ವೇಳೆ ನಮ್ಮ ಮನೆಯಲ್ಲಿ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ಠಾಕೂರ್​ ಆರೋಪಿಸಿದ್ದಾರೆ. 2016ರಿಂದಲೂ ಬಿಹಾರದಲ್ಲಿ ಅಲ್ಕೋಹಾಲ್​ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ಪೊಲೀಸರು ಲಿಕರ್​ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ಚ್ ವಾರಂಟ್​ ಕೊಡುವಂತೆ ನಾನು ಹೇಳಿದ್ದಕ್ಕೆ, ಕೋಪಗೊಂಡು ನನಗೆ ಹೊಡೆದರು. ನನ್ನ ಮಗ, ಸೊಸೆಯ ಮೇಲೆಯೂ ಹಲ್ಲೆ ನಡೆಸಿದರು ಎಂದು ಆರೋಪ ಮಾಡಿದ್ದಾರೆ.

ಈ ಪೊಲೀಸರು ನಮ್ಮ ಮನೆಯಿಂದ ಸುಮಾರು 49 ಲಕ್ಷ ರೂ.ಕದ್ದಿದ್ದಾರೆ. ಅಲ್ಲದೆ, ಮೂರು ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದೂ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಸಂಚಾರದ ಬಗ್ಗೆ ಇಂದು ಮಹತ್ವದ ನಿರ್ಧಾರ; ಷರತ್ತುಗಳ ಅನ್ವಯ ಸಾಧ್ಯತೆ

Follow Us
Lakshmi Hegde
Lakshmi Hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್