ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ನ್ಯಾಯಾಲಯವು ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಮಕ್ಕಳಾದ ತೇಜ್ ಪ್ರತಾಪ್ ಮತ್ತು ಪುತ್ರಿ ಹೇಮಾ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಈ ಮೂವರಿಗೂ ಮಾರ್ಚ್ 11ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಲಾಗಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೂಡ ಹೊಸ ಸಮನ್ಸ್ ಜಾರಿ ಮಾಡಿದ್ದಾರೆ.
ಸಿಬಿಐ ಈ ಹಿಂದೆ ಎತ್ತಿದ್ದ ಕೆಲವು ಅಂಶಗಳ ಕುರಿತು ಸ್ಪಷ್ಟೀಕರಣಗಳನ್ನು ಕೇಳಿದ ನಂತರ ನ್ಯಾಯಾಲಯವು ಕಳೆದ ವಾರದ ಆರಂಭದಲ್ಲಿ ಫೆಬ್ರವರಿ 25ರಂದು ಪ್ರಕರಣವನ್ನು ಮುಂದೂಡಿತ್ತು.
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 11ರಂದು ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: ನಿಮಗೆ ಬಾಗಿಲು ತೆರೆದಿದೆ ಎಂದ ಲಾಲು ಯಾದವ್ಗೆ ನಿತೀಶ್ ಕುಮಾರ್ ಹೇಳಿದ್ದೇನು?
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಮಗ ತೇಜ್ ಪ್ರತಾಪ್ ಯಾದವ್ ಮತ್ತು ಮಗಳು ಹೇಮಾ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಲಾಲು ಅವರ ಕಿರಿಯ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ರೌಸ್ ಅವೆನ್ಯೂ ನ್ಯಾಯಾಲಯವು ಹೊಸ ಸಮನ್ಸ್ ಜಾರಿಗೊಳಿಸಿದ್ದು, ಮಾರ್ಚ್ 11 ರಂದು ಹಾಜರಾಗುವಂತೆ ಸೂಚಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ಈ ಪ್ರಕರಣದಲ್ಲಿ 30 ಸರ್ಕಾರಿ ಅಧಿಕಾರಿಗಳು ಸೇರಿದಂತೆ 78 ಜನರನ್ನು ಸಂಸ್ಥೆ ಹೆಸರಿಸಿದೆ. ಇಡಿ ತನಿಖೆ ನಡೆಸುತ್ತಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ಲಾಲು ಯಾದವ್ ಮತ್ತು ಅವರ ಇಬ್ಬರು ಪುತ್ರರು ಈಗಾಗಲೇ ಜಾಮೀನು ಪಡೆದಿದ್ದಾರೆ.
ಇದನ್ನೂ ಓದಿ: ಜಂಗಲ್ ರಾಜ್ ಜನರು ನಮ್ಮ ನಂಬಿಕೆಯನ್ನು ದ್ವೇಷಿಸುತ್ತಾರೆ; ಲಾಲು ಯಾದವ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಲಾಲು ಪ್ರಸಾದ್ ಯಾದವ್ 2004 ಮತ್ತು 2009ರ ನಡುವೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಬಿಐ ಪ್ರಕರಣವು ಕೇಂದ್ರ ರೈಲ್ವೆಯಲ್ಲಿ ಗ್ರೂಪ್ ಡಿ ಉದ್ಯೋಗಗಳಲ್ಲಿ ನೇಮಕಾತಿಗಾಗಿ ಆರ್‌ಜೆಡಿ ಮುಖ್ಯಸ್ಥ ಮತ್ತು ಅವರ ಕುಟುಂಬ ಸದಸ್ಯರಿಗೆ ಅಗ್ಗದ ದರದಲ್ಲಿ ಭೂಮಿಯನ್ನು ವರ್ಗಾಯಿಸಿದ ಆರೋಪಕ್ಕೆ ಸಂಬಂಧಿಸಿದೆ.
ಭೂ ವರ್ಗಾವಣೆಗಳು ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್ ಅವರ ಹೆಸರಿನಲ್ಲಿ ನಡೆದಿವೆ ಎಂದು ಸಿಬಿಐ ಆರೋಪಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ