ಪಂಜಾಬ್​ ವಿಧಾನಸಭೆ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ; ಸಿಎಂ ಛನ್ನಿಗೆ ಶಾಕ್​ ಕೊಟ್ಟ ಅವರ ಸೋದರ ಸಂಬಂಧಿ

117 ಕ್ಷೇತ್ರಗಳಿರುವ ಪಂಜಾಬ್​​ನಲ್ಲಿ ಫೆಬ್ರವರಿ 14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ. 2017ರಲ್ಲಿ ಕಾಂಗ್ರೆಸ್​​ಗೆ ಇಲ್ಲಿ 77 ಕ್ಷೇತ್ರಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿತ್ತು. ಅದು ಬಿಟ್ಟರೆ ಆಪ್​ 20 ಸೀಟ್​ ಗೆದ್ದುಕೊಂಡಿತ್ತು.

ಪಂಜಾಬ್​ ವಿಧಾನಸಭೆ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ; ಸಿಎಂ ಛನ್ನಿಗೆ ಶಾಕ್​ ಕೊಟ್ಟ ಅವರ ಸೋದರ ಸಂಬಂಧಿ
ಪಂಜಾಬ್​ ಮುಖ್ಯಮಂತ್ರಿ ಛನ್ನಿ
Follow us
TV9 Web
| Updated By: Lakshmi Hegde

Updated on:Jan 13, 2022 | 10:08 AM

ದೆಹಲಿ: ಪಂಜಾಬ್​ನಲ್ಲಿ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ (Punjab Assembly Elections) ನಡೆಯಲಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿಗೆ ಅವರ ಸೋದರ ಸಂಬಂಧಿಯೊಬ್ಬರು ಶಾಕ್​ ನೀಡಿದ್ದಾರೆ. ಛನ್ನಿ ಸೋದರ ಸಂಬಂಧಿಯಾದ ಜಸ್ವಿಂದರ್ ಸಿಂಗ್ ಧಳಿವಾಲ್​ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಮ್ಮುಖದಲ್ಲಿ ಚಂಡಿಗಢ್​​ನಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಇನ್ನು ಜಸ್ವಿಂದರ್​ ಮಾತ್ರವಲ್ಲ ಅವರೊಟ್ಟಿಗೆ ಪಂಜಾಬ್​ ಮಾಜಿ ಶಾಸಕ ಅರವಿಂದ್​ ಖನ್ನಾ, ಶಿರೋಮಣಿ ಅಖಾಲಿ ದಳ್​​ದ ನಾಯಕ ಗುರ್ದೀಪ್​ ಸಿಂಗ್​ ಗೋಶಾ, ಅಮೃತಸರ್​​ದ ಮಾಜಿ ಕೌನ್ಸಿಲರ್​ ಧರ್ಮವೀರ್ ಸರಿನ್​ ಕೂಡ ಬಿಜೆಪಿಗೆ ಸೇರಿದ್ದಾರೆ.  

ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್​ ಆಂತರಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಇದೀಗ ಬರುವ ತಿಂಗಳು ಚುನಾವಣೆ ನಡೆಯಲಿರುವ ಪಂಜಾಬ್​ ಮತ್ತು ಉತ್ತರಾಖಂಡ್​ಗಳಲ್ಲಿ ಕೂಡ ಕಾಂಗ್ರೆಸ್ ಮಧ್ಯೆ ಆಂತರಿಕ ಬಿಕ್ಕಟ್ಟು ಇದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಎಲ್ಲ ಬೆಳವಣಿಗೆಗಳನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ವಿರುದ್ಧ ಮಾತನಾಡುವವರನ್ನು, ಬಂಡಾಯ ಏಳುವವರು ಪಕ್ಷದಿಂದ ಅಮಾನತು ಮಾಡಲೂ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವ ಪಕ್ಷದ ಸ್ವಾಸ್ಥ್ಯ ಕೆಡುವುದು ಇಷ್ಟವಿಲ್ಲ ಎಂದು ಹೈಕಮಾಂಡ್ ಹೇಳಿದ್ದಾಗಿ ವರದಿಯಾಗಿದೆ. ಆದರೆ ಪಂಜಾಬ್​​ನಲ್ಲಿ ಮುಖ್ಯಮಂತ್ರಿಯ ಹತ್ತಿರದ ಸಂಬಂಧಿಯೇ ಬಿಜೆಪಿ ಸೇರಿದ್ದು ಸದ್ಯ ತಲೆನೋವಾಗಿ ಪರಿಣಮಿಸಿದೆ.

ಪಂಜಾಬ್​​ನಲ್ಲಿ ಮುಂದಿನ ಸಿಎಂ ಯಾರು? ಪಂಜಾಬ್​​ನಲ್ಲಿ ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಅರ್ಧದಲ್ಲಿಯೇ ಅಧಿಕಾರ ಬಿಟ್ಟ ಬಳಿಕ, ಚರಣಜಿತ್ ಸಿಂಗ್ ಛನ್ನಿ ಮುಖ್ಯಮಂತ್ರಿಯಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ಅಥವಾ ಬೇರೆ ಯಾರನ್ನಾದರೂ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಿದೆಯಾ? ಹೀಗೊಂದು ಪ್ರಶ್ನೆ ಎದ್ದಿದೆ.  ಪಂಜಾಬ್​​ನಲ್ಲಿ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಈಗಾಗಲೇ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದವರು. ಹಿಂದಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್​ ರಾಜೀನಾಮೆಗೆ ಅವರೇ ಕಾರಣ ಎಂದೇ ಹೇಳಲಾಗಿದೆ. ಹಾಗೇ, ಛನ್ನಿ ಸಿಎಂ ಆದ ಬಳಿಕ ಮುನಿಸಿಕೊಂಡು ತಮ್ಮ ಪ್ರದೇಶ ಸಮಿತಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ತಾವೂ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂಬುದನ್ನು ಸೂಕ್ಷ್ಮವಾಗಿಯೇ ಹೇಳಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್​ ಹೈಕಮಾಂಡ್​ ಕೂಡ ಸೂಕ್ಷ್ಮವಾಗಿಯೇ ಹೆಜ್ಜೆ ಇಡುತ್ತಿದೆ ಎನ್ನಲಾಗಿದೆ.

117 ಕ್ಷೇತ್ರಗಳಿರುವ ಪಂಜಾಬ್​​ನಲ್ಲಿ ಫೆಬ್ರವರಿ 14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ. 2017ರಲ್ಲಿ ಕಾಂಗ್ರೆಸ್​​ಗೆ ಇಲ್ಲಿ 77 ಕ್ಷೇತ್ರಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿತ್ತು. ಅದು ಬಿಟ್ಟರೆ ಆಪ್​ 20 ಸೀಟ್​ ಗೆದ್ದುಕೊಂಡಿತ್ತು. ಶಿರೋಮಣಿ ಅಖಾಲಿ ದಳ 15 ಕ್ಷೇತ್ರಗಳನ್ನು ಗೆದ್ದಿದ್ದರೆ, ಬಿಜೆಪಿ 3 ಕ್ಷೇತ್ರದಲ್ಲಿ ಜಯಸಾಧಿಸಿತ್ತು. ಈ ಬಾರಿಯೂ ಕೂಡ ಅಲ್ಲಿ ಬಿಜೆಪಿಗೆ ಅಧಿಕಾರ ಹಿಡಿಯುವುದು ಕಷ್ಟ ಎಂದೇ ಭಾವಿಸಲಾಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆಗಳ ವಿರುದ್ಧ ತಿರುಗಿಬಿದ್ದವರು ಈ ಪಂಜಾಬ್​ ರೈತರೇ ಆಗಿದ್ದಾರೆ. ಹೀಗಾಗಿ ಅಲ್ಲಿ ಬಿಜೆಪಿಗೆ ಜಾಸ್ತಿ ವಿರೋಧ ವ್ಯಕ್ತವಾಗುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಂದಕಿಶೋರ್​, ಧರ್ಮ ಕೀರ್ತಿರಾಜ್​ ಫ್ರೆಂಡ್​ಶಿಪ್​ ಮೆಲುಕು; ಗೆಳೆಯನ ಚಿತ್ರಕ್ಕೆ ‘ಪೊಗರು’ ಡೈರೆಕ್ಟರ್​ ಸಾಥ್​

Published On - 9:48 am, Thu, 13 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ