Covaxin: ವಿಶ್ವ ಆರೋಗ್ಯ ಸಂಸ್ಥೆಯಿಂದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಇಂದು ಅನುಮತಿ ಸಾಧ್ಯತೆ

Bharat Biotech: ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿಯು ಇಂದು ಸಭೆ ಸೇರಲಿದ್ದು, ಸಭೆಯ ನಂತರ ಕೋವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

Covaxin: ವಿಶ್ವ ಆರೋಗ್ಯ ಸಂಸ್ಥೆಯಿಂದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಇಂದು ಅನುಮತಿ ಸಾಧ್ಯತೆ
ಕೊವಿಡ್ ಲಸಿಕೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 03, 2021 | 12:52 PM

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ತಂಡ ಭಾರತ್ ಬಯೋಟೆಕ್​ನ (Bharat Biotech) ಕೋವ್ಯಾಕ್ಸಿನ್ ಲಸಿಕೆಯ (Covaxin Vaccine) ತುರ್ತು ಬಳಕೆಯ ಅನುಮೋದನೆಗೆ ಹೆಚ್ಚುವರಿ ದಾಖಲೆಗಳನ್ನು ಕೋರಿತ್ತು. ಕೋವಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಈ ಲಸಿಕೆಯ ತುರ್ತು ಬಳಕೆಯ ಅನುಮತಿಗಾಗಿ ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ EOI ಸಲ್ಲಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆ (WHO) ಈಗಾಗಲೇ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಗಾಗಿ ಅನುಮೋದನೆಗೆ ಸಂಬಂಧಿಸಿದ ನಿರ್ಧಾರವನ್ನು ನೀಡಲು ಸಾಕಷ್ಟು ವಿಳಂಬ ಮಾಡಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಇಂದು ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಯ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಭಾರತ ಮೂಲದ ಕೊವಿಡ್ ಲಸಿಕೆಗಳ ತುರ್ತು ಬಳಕೆಯ ಪಟ್ಟಿಗಾಗಿ ಕೋವ್ಯಾಕ್ಸಿನ್​ನಲ್ಲಿನ ಡೇಟಾವನ್ನು ಪರಿಶೀಲಿಸಲು ತಾಂತ್ರಿಕ ಸಲಹಾ ತಂಡ ಕಳೆದ ತಿಂಗಳು ಸಭೆ ಸೇರಿತ್ತು. ಈ ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ಮೌಲ್ಯಮಾಪನವನ್ನು ನಡೆಸಲು ತಯಾರಕರಿಂದ ಹೆಚ್ಚುವರಿ ಸ್ಪಷ್ಟೀಕರಣಗಳ ಅಗತ್ಯವಿದೆ ಎಂದು ಸಭೆಯ ಬಳಿಕ ತಿಳಿಸಿತ್ತು. WHO ನ ಸ್ವತಂತ್ರ ಸಲಹಾ ಸಮಿತಿಯಾದ ತಾಂತ್ರಿಕ ಸಲಹಾ ತಂಡ (TAG) ಭಾರತೀಯ ಕೊವಿಡ್ ಲಸಿಕೆಯಾದ ಕೋವ್ಯಾಕ್ಸಿನ್​ನ ತುರ್ತು ಬಳಕೆಯ ಪಟ್ಟಿ (EUL) ಅನುಮೋದನೆಗೆ ಸಂಬಂಧಿಸಿದಂತೆ ಇಂದು ಮತ್ತೊಂದು ಸಭೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಈ ಹಿಂದೆ ಘೋಷಿಸಿತ್ತು.

WHOನ ತಾಂತ್ರಿಕ ಸಲಹಾ ತಂಡ ಈ ಹಿಂದೆ ಭಾರತ್ ಬಯೋಟೆಕ್ ಅನ್ನು ಕೋವಾಕ್ಸಿನ್ ಅನುಮೋದನೆಯನ್ನು ಮೇಲ್ವಿಚಾರಣೆ ಮಾಡಲು ಹೆಚ್ಚುವರಿ ಸ್ಪಷ್ಟೀಕರಣಗಳನ್ನು ನೀಡುವಂತೆ ಕೇಳಿಕೊಂಡಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿಯು ಇಂದು ಸಭೆ ಸೇರಲಿದ್ದು, ಸಭೆಯ ನಂತರ ಕೋವಾಕ್ಸಿನ್‌ಗೆ ಅನುಮೋದನೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ತುರ್ತು ಬಳಕೆಯ ಪಟ್ಟಿಗಾಗಿ ಕೋವಾಕ್ಸಿನ್‌ನ ಅನುಮೋದನೆಯು ಗುರುತಿಸುವಿಕೆಗೆ ಸಮಾನವಾಗಿರುತ್ತದೆ ಮತ್ತು ಇತರ ದೇಶಗಳಲ್ಲಿ ಲಸಿಕೆ ಆದೇಶಗಳಿಗೆ ಅರ್ಹತೆ ಪಡೆಯಲು ಡೋಸ್ ತೆಗೆದುಕೊಂಡ ಜನರಿಗೆ ದಾರಿ ಮಾಡಿಕೊಡಲು ಸಹಾಯ ಮಾಡುತ್ತದೆ. ಅಕ್ಟೋಬರ್ ಅಂತ್ಯದ ವೇಳೆಗೆ WHO ಅನುಮೋದನೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಜೈವಿಕ ತಂತ್ರಜ್ಞಾನ ಕಂಪನಿಯು ಇನ್ನೂ ಅನುಮೋದನೆಗಾಗಿ ಕಾಯುತ್ತಿದೆ.

ಕೊವಿಡ್ ಸೋಂಕಿನ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ. 77.8ರಷ್ಟು ಪರಿಣಾಮಕಾರಿಯಾಗಿದೆ. ಹಾಗೇ ಹೊಸ ಡೆಲ್ಟಾ ರೂಪಾಂತರಿ ವೈರಸ್ ವಿರುದ್ಧ ಶೇ. 65.2ರಷ್ಟು ರಕ್ಷಣೆಯನ್ನು ಪ್ರದರ್ಶಿಸಿದೆ. ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಭಾರತದಲ್ಲಿ ವ್ಯಾಪಕವಾಗಿ ಬಳಸಲಾಗುವ ಎರಡು ಲಸಿಕೆಗಳಾಗಿವೆ. ವಿಶ್ವ ಆರೋಗ್ಯ ಸಂಸ್ಥೆ ಇದುವರೆಗೆ ಫೈಜರ್-ಬಯೋಎನ್​ಟೆಕ್, ಆಸ್ಟ್ರಾಜೆನೆಕಾ, ಎಸ್​ಕೆ ಬಯೋ/ಸೆರಂ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ, ಜಾನ್ಸನ್ ಆ್ಯಂಡ್ ಜಾನ್ಸನ್-ಜಾನ್​ಸ್ಸೆನ್, ಮಾಡರ್ನಾ ಮತ್ತು ಸಿನೋಫಾರ್ಮ್ ಕೊವಿಡ್-19 ಲಸಿಕೆಗಳ ತುರ್ತು ಬಳಕೆಗಾಗಿ ಅನುಮೋದನೆ ನೀಡಿದೆ.

ಜಾಗತಿಕ ಮಟ್ಟದಲ್ಲಿ ತುರ್ತು ಬಳಕೆ ಪಟ್ಟಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಭಾರತ್ ಬಯೋಟೆಕ್​ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿತ್ತು. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಕೇಳಲಾಗಿತ್ತು. ನಿರೀಕ್ಷಿತ ಸಮಯದಲ್ಲಿ ಡೇಟಾ ಲಭ್ಯವಾದಲ್ಲಿ ನವೆಂಬರ್ 3ಕ್ಕೆ ಅಂತಿಮ ಮೌಲ್ಯಮಾಪನ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿ ಮತ್ತೊಮ್ಮೆ ಸಭೆ ಸೇರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದರು. ಅದರಂತೆ ಇಂದು ಈ ಬಗ್ಗೆ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಲು ಭಾರತ್ ಬಯೋಟೆಕ್​ನಿಂದ ಹೆಚ್ಚುವರಿ ಸ್ಪಷ್ಟನೆ ಕೇಳಿದ WHO

Covaxin: ನವೆಂಬರ್​ನಲ್ಲಿ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಸಾಧ್ಯತೆ; ಆರೋಗ್ಯ ಸಮಸ್ಯೆ ಇರುವವರಿಗೆ ಆದ್ಯತೆ

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್