Covaxin: ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ​ಗೆ ಅನುಮತಿ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ

Covid Vaccination: ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ಲೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆ ನಡೆದಿದೆ.

Covaxin: ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ​ಗೆ ಅನುಮತಿ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)

ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆ ಸಭೆ ನಡೆಸಿದೆ. ಈ ವೇಳೆ ಕೋವ್ಯಾಕ್ಸಿನ್ ಲಸಿಕೆಯ ಬಳಕೆಗೆ ತುರ್ತು ಅನುಮತಿ ನೀಡುವ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಡಬ್ಲುಎಚ್​ಒ ತಿಳಿಸಿದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮುಂದಿನ ವಾರ ಮತ್ತೊಂದು ಸಭೆ ನಿಗದಿಪಡಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮೂಲಕ ತಿಳಿಸಿದೆ.

ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ಲೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆ ನಡೆದಿದೆ. ಈ ಎಕ್ಸ್ ಫರ್ಟ್ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡಬೇಕೇ ಬೇಡವೇ ಎನ್ನುವ ಬಗ್ಗೆ ಚರ್ಚೆ ಮಾಡಲಾಗಿದೆ. ಇದು ಶಿಫಾರಸು ಮಾಡಿದ ನಂತರ ವಿಶ್ವ ಆರೋಗ್ಯ ಸಂಸ್ಥೆಯು ಅಂತಿಮ ತೀರ್ಮಾನ ಕೈಗೊಳ್ಳಲಿದೆ. ನಿನ್ನೆ ನಡೆದ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ವೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸಿರುವ ಭಾರತ್ ಬಯೋಟೆಕ್ ಕಂಪನಿಯ ಪ್ರತಿನಿಧಿಗಳು ಲಸಿಕೆಯ ಬಗ್ಗೆ ದಾಖಲೆ ಹಾಗೂ ದತ್ತಾಂಶಗಳನ್ನು ನೀಡಿದ್ದಾರೆ. ಕೊವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಕೊರೊನಾ ವೈರಸ್ ವಿರುದ್ದ ಪರಿಣಾಮಕಾರಿತನ ಹಾಗೂ 1ರಿಂದ 3ನೇ ಹಂತದ ಪ್ರಯೋಗದವರೆಗಿನ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಬಳಕೆಗೆ ಅನುಮೋದನೆ ಸಿಕ್ಕರೆ ಕೊವ್ಯಾಕ್ಸಿನ್ ಲಸಿಕೆ ಪಡೆದವರು ವಿಶ್ವದಲ್ಲಿ ಯಾವುದೇ ನಿರ್ಬಂಧ ಇಲ್ಲದೇ ಸಂಚಾರ ಮಾಡಬಹುದು. ಈ ಕಾರಣಕ್ಕಾಗಿ ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಗೆ ಅನುಮೋದನೆ ಸಿಗುವುದು ಬಹಳ ಮಹತ್ವದ ವಿಷಯವಾಗಿದೆ.

ಭಾರತ್ ಬಯೋಟೆಕ್ ಕಂಪನಿಯು ಕಳೆದ ಜೂನ್ ತಿಂಗಳಲ್ಲೇ ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ವೈದ್ಯಕೀಯ ಪರೀಕ್ಷೆಯ ಅಂಕಿ-ಅಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿದೆ. ಈಗ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ನೀಡುವ ಮುನ್ನ ವೈದ್ಯಕೀಯ ಪ್ರಯೋಗದ ಅಂಕಿ-ಅಂಶಗಳನ್ನು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ

ZyCov-D Vaccine: ಅ.2ರಂದು ಭಾರತಕ್ಕೆ ಮತ್ತೊಂದು ಕೊವಿಡ್ ಲಸಿಕೆ ಲಭ್ಯ; ಜೈಕೋವ್-ಡಿ ಬೆಲೆ ನಿಗದಿ ಬಗ್ಗೆ ಚರ್ಚೆ

Read Full Article

Click on your DTH Provider to Add TV9 Kannada