Covaxin for Children: 6-12 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ
Covaxin Vaccine: 6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆ ನೀಡಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಒಪ್ಪಿಗೆ ನೀಡಿದೆ.
ನವದೆಹಲಿ: ಭಾರತದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಕೊವಿಡ್ ನಿಯಮಗಳನ್ನು (Covid Guidelines) ಪಾಲಿಸಲು ಆದೇಶಿಸಲಾಗಿದೆ. ಇದರ ನಡುವೆ 6ರಿಂದ 12 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ (Covaxin) ನೀಡಲು ಅನುಮತಿ ಸಿಕ್ಕಿರುವುದರಿಂದ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯದಲ್ಲಿ ಕೊವಿಡ್ 4ನೇ ಅಲೆಯ ಆತಂಕದ ಬೆನ್ನಲ್ಲೇ ಸಿಹಿಸುದ್ದಿ ಲಭ್ಯವಾಗಿದ್ದು, ಕೊವ್ಯಾಕ್ಸಿನ್ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ದಿಂದ ಗ್ರೀನ್‌ಸಿಗ್ನಲ್ ಸಿಕ್ಕಿದೆ.
6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆ ನೀಡಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಒಪ್ಪಿಗೆ ನೀಡಿದೆ. ಈಗಾಗಲೇ ಕರ್ನಾಟಕದಲ್ಲಿ ಕೊರೊನಾ 4ನೇ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ಇದು ತಾರಕಕ್ಕೇರುವ ಸಂಭವವಿದೆ. ಈ ಕೊವಿಡ್ ನಾಲ್ಕನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಅಪಾಯವಿರುವುದರಿಂದ 6ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಭಾರತದಲ್ಲಿ ಮತ್ತೊಮ್ಮೆ ಕೊವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದಂತೆ ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ಇಂದು 6ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ನಿರ್ಬಂಧಿತ ತುರ್ತು ಬಳಕೆಯ ಅಧಿಕಾರವನ್ನು ನೀಡಲಾಗಿದೆ. 2021ರ ಡಿಸೆಂಬರ್ ತಿಂಗಳಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಲ್ಲಿ ತುರ್ತು ಬಳಕೆಗಾಗಿ ಕೋವಾಕ್ಸಿನ್ ಲಸಿಕೆ ನೀಡಲು ಅನುಮೋದನೆ ನೀಡಲಾಗಿತ್ತು.
ಭಾರತವು ಕಳೆದ ವರ್ಷ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಲಸಿಕೆಯನ್ನು ಪ್ರಾರಂಭಿಸಿತ್ತು. ಕಳೆದ ವರ್ಷ ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವೈರಲ್ ಕಾಯಿಲೆಯ ವಿರುದ್ಧ ಲಸಿಕೆ ಹಾಕಲು ಅವಕಾಶ ನೀಡುವ ಮೂಲಕ ತನ್ನ ಲಸಿಕೆ ಅಭಿಯಾನವನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿತ್ತು. 15-18 ವರ್ಷ ವಯಸ್ಸಿನವರಿಗೆ 2022ರ ಜನವರಿ 3ರಂದು ಮುಂದಿನ ಹಂತದ ವ್ಯಾಕ್ಸಿನೇಷನ್ ಪ್ರಾರಂಭಿಸಲಾಯಿತು. ಭಾರತದಲ್ಲಿ ಮಾರ್ಚ್ 16 ರಂದು 12-14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಲಾಯಿತು.
Published On - 1:48 pm, Tue, 26 April 22