WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್

Covaxin: ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್, ಭಾರತ್ ಬಯೋಟೆಕ್ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: May 24, 2021 | 1:55 PM

ದೆಹಲಿ: ಕೊರೊನಾ ತಡೆಯುವಲ್ಲಿ ಸಹಾಯ ಮಾಡುವ ಕೊರೊನಾ ನಿರೋಧಕ ಲಸಿಕೆ ಕೊವ್ಯಾಕ್ಸಿನ್​ ಅನ್ನು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಪರಿಸ್ಥಿತಿಯಲ್ಲಿ ಬಳಸುವ ಔಷಧಗಳ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇದರಿಂದ ಅಂತಾರಾಷ್ರೀಯ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಸದ್ಯ ಈಗ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಪಡೆಯಲು WHO ಅನುಮೋದನೆಗೆ ಯತ್ನಿಸಲಾಗುತ್ತಿದೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್, ಭಾರತ್ ಬಯೋಟೆಕ್ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾರತದಿಂದ ವಿದೇಶಕ್ಕೆ ಹೋಗುವವರಿಗೆ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದರೆ ಅನುಮತಿಯನ್ನು ನೀಡುತ್ತಿಲ್ಲ. ಹೀಗಾಗಿ WHOನಿಂದ ಅನುಮೋದನೆ ಪಡೆಯಲು ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ.

ಕೊವಿಶೀಲ್ಡ್ ಲಸಿಕೆಗೆ WHO ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಆದರೆ ಕೊವ್ಯಾಕ್ಸಿನ್ ಲಸಿಕೆಗೆ WHO ತುರ್ತು ಬಳಕೆಗೆ ಒಪ್ಪಿಗೆ ನೀಡಿಲ್ಲ. ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಕೂಡ ಈಗ‌ ಭಾರತ್ ಬಯೋಟೆಕ್ ಜೊತೆಗೆ ಅನುಮತಿ ಪಡೆಯಲು ಪ್ರಯತ್ನ ಪಡುತ್ತಿದೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್