ದೆಹಲಿ: ಕೊರೊನಾ ತಡೆಯುವಲ್ಲಿ ಸಹಾಯ ಮಾಡುವ ಕೊರೊನಾ ನಿರೋಧಕ ಲಸಿಕೆ ಕೊವ್ಯಾಕ್ಸಿನ್ ಅನ್ನು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಪರಿಸ್ಥಿತಿಯಲ್ಲಿ ಬಳಸುವ ಔಷಧಗಳ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇದರಿಂದ ಅಂತಾರಾಷ್ರೀಯ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಸದ್ಯ ಈಗ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಪಡೆಯಲು WHO ಅನುಮೋದನೆಗೆ ಯತ್ನಿಸಲಾಗುತ್ತಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್, ಭಾರತ್ ಬಯೋಟೆಕ್ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾರತದಿಂದ ವಿದೇಶಕ್ಕೆ ಹೋಗುವವರಿಗೆ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದರೆ ಅನುಮತಿಯನ್ನು ನೀಡುತ್ತಿಲ್ಲ. ಹೀಗಾಗಿ WHOನಿಂದ ಅನುಮೋದನೆ ಪಡೆಯಲು ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ.
ಕೊವಿಶೀಲ್ಡ್ ಲಸಿಕೆಗೆ WHO ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಆದರೆ ಕೊವ್ಯಾಕ್ಸಿನ್ ಲಸಿಕೆಗೆ WHO ತುರ್ತು ಬಳಕೆಗೆ ಒಪ್ಪಿಗೆ ನೀಡಿಲ್ಲ. ಭಾರತ್ ಬಯೋಟೆಕ್ ಕಂಪನಿ WHOಗೆ ಅರ್ಜಿ ಸಲ್ಲಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಕೂಡ ಈಗ ಭಾರತ್ ಬಯೋಟೆಕ್ ಜೊತೆಗೆ ಅನುಮತಿ ಪಡೆಯಲು ಪ್ರಯತ್ನ ಪಡುತ್ತಿದೆ.
ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ